23.1 C
ಪುತ್ತೂರು, ಬೆಳ್ತಂಗಡಿ
September 26, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಮಾದಕ ವಸ್ತು ಸೇವನೆ ಮಾಡಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿ ಅಮಲಿನಲ್ಲಿದ್ದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನ ವಿರುದ್ಧ ಕಾರ್ಯಾಚರಣೆ ನಡೆಸಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಆನಂದ ಎಂ. ಮತ್ತು ತಂಡ ಸಿಬ್ಬಂದಿಯೊಂದಿಗೆ ಆ‌.8 ರಂದು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ ವ್ಯಕ್ತಿಯೊಬ್ಬ ಅಮಲಿನಲ್ಲಿರುವಂತೆ ಕಂಡುಬಂದಿದ್ದಾನೆ. ಪೊಲೀಸರು ಆತನನ್ನು ವಿಚಾರಿಸಿದಾಗ ಸಮರ್ಪಕವಾಗಿ ಉತ್ತರಿಸದೆ ನಶೆಯ ಅಮಲಿನಲ್ಲಿ ಮಾತನಾಡುತ್ತಿದ್ದ ಎನ್ನಲಾಗಿದೆ.ಪದೇ ಪದೇ ವಿಚಾರಣೆ ನಡೆಸಿದಾಗ ನಿಷೇಧಿತ ಮಾದಕ ವಸ್ತು ಸೇವಿಸಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ.

ವಿಚಾರಣೆಯಲ್ಲಿ ಆತ ತನ್ನನ್ನು ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಹಳೆಪೇಟೆಯ ವಿನಾಯಕ ನಗರದ ನಿವಾಸಿ ಸೀತಾರಾಮ ಮಗ ಅರುಣ್ ಕುಮಾರ್ (36) ಎಂದು ತಿಳಿಸಿದ್ದಾನೆ. ಬಳಿಕ ಆತನನ್ನು ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎನ್‌ ಡಿಪಿಎಸ್ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮೂಡಿಗೆರೆ ರಾಣಿಝರಿ ರಸ್ತೆಯಲ್ಲಿ ವ್ಹೀಲಿಂಗ್ ಮಾಡಿ ಹುಚ್ಚಾಟ: ಬೈಕ್ ಸಹಿತ ಉಜಿರೆಯ ಐವರು ಯುವಕರನ್ನು ಬಂಧಿಸಿದ ಪೊಲೀಸರು

Suddi Udaya

ಚಾರ್ಮಾಡಿ ಕುಂಜಿರ ಗುರುಸ್ವಾಮಿ ರವರಿಗೆ ಅಯ್ಯಪ್ಪ ಭಕ್ತಬೃಂದ ಸಮಿತಿಯಿಂದ ತಾಂಬೂಲ ಕಾಣಿಕೆ

Suddi Udaya

ಉಜಿರೆ ಶ್ರೀ. ಧ.ಮಂ. ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಮಳೆನೀರಿನ ಕೊಯ್ಲು ಪ್ರಾತ್ಯಾಕ್ಷಿತೆ

Suddi Udaya

ಮೇ 15: ವಿದ್ಯುತ್ ನಿಲುಗಡೆ

Suddi Udaya

ಅಳದಂಗಡಿ: ಪಾದಚಾರಿಗೆ ಕಾರು ಡಿಕ್ಕಿ:

Suddi Udaya

ಪಿಯುಸಿ ಫಲಿತಾಂಶ: ಪರವೂರಿನಲ್ಲಿ ಸಾಧನೆ ಮೆರೆದ ಬೆಳ್ತಂಗಡಿಯ ಅರ್ಮಾನ್ ಆಸಿಫ್‌ ಶೈಖ್

Suddi Udaya
error: Content is protected !!