August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೀರುಮಾರ್ಗ ಶಾಖೆಯ ಚತುರ್ಥ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಹಾಗೂ ದಂತ ಚಿಕಿತ್ಸಾ ಶಿಬಿರ

ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಇದರ ನೀರುಮಾರ್ಗ ಶಾಖೆಯ ಚತುರ್ಥ ವಾರ್ಷಿಕೋತ್ಸವದ ಪ್ರಯುಕ್ತ ಲಯನ್ಸ್ ಕ್ಲಬ್ ಮಂಗಳೂರು ಆದಿತ್ಯ, ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿ ನೀರುಮಾರ್ಗ, ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘ ಸುಬ್ರಹ್ಮಣ್ಯ ನಗರ ನೀರುಮಾರ್ಗ ಇವರ ಜಂಟಿ ಆಶ್ರಯದೊಂದಿಗೆ ಮಂಗಳ ಕಾಲೇಜು, ಮಂಗಳ ಆಸ್ಪತ್ರೆ, ಮಂಗಳ ಕಿಡ್ನಿ ಫೌಂಡೇಶನ್ ಕದ್ರಿ ಮಂಗಳೂರು ಇದರ ವೈದ್ಯರಿಂದ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಹಾಗೂ ದಂತ ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಸುಬ್ರಹ್ಮಣ್ಯ ಭಜನಾ ಮಂಡಳಿ ಸಭಾಭವನದಲ್ಲಿ ನಡೆದ ಈ ಕಾರ್ಯಕ್ರಮವನ್ನು ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘ ಸುಬ್ರಹ್ಮಣ್ಯ ನಗರ ನೀರುಮಾರ್ಗ ಇದರ ಗೌರವ ಅಧ್ಯಕ್ಷ ಲಕ್ಷ್ಮಣ ಪೂಜಾರಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಈ ವೈದ್ಯಕೀಯ ಶಿಬಿರವು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 113ನೇ ಉಚಿತ ಶಿಬಿರವಾಗಿದೆ. ಸಾರ್ವಜನಿಕರ ಆರೋಗ್ಯದ ಕಾಳಜಿಯಿಂದ ಸಂಘವು ಮಾಡುತ್ತಿರುವ ಇಂತಹ ಕೆಲಸಗಳು ಶ್ಲಾಘನೀಯ. ಜನರು ಇದರ ಸದುಪಯೋಗ ಪಡೆದುಕೊಳ್ಳಿ ಎಂದು ತಿಳಿಸಿದರು.

ಲಯನ್ಸ್ ಕ್ಲಬ್ ಮಂಗಳೂರು ಆದಿತ್ಯ ಇದರ ಅಧ್ಯಕರಾದ ಲಯನ್ ರಾಮನಾಥ್ ಗಡಿಯಾರ್ ರವರು ಮಾತನಾಡಿ “
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಜೊತೆಯಲ್ಲಿ ಲಯನ್ ಕ್ಲಬ್ ಆರೋಗ್ಯ ಶಿಬಿರಗಳನ್ನು ಆಯೋಜಿಸುತ್ತಾ ಬರುತ್ತಿದ್ದು, ಶಿಬಿರಾರ್ಥಿಗಳು ಉತ್ತಮ ಸ್ಪಂದನೆ ನೀಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಕಾರಕ್ರಮಗಳನ್ನು ನಡೆಸುವಂತಾಗಲಿ ” ಎಂದರು .

ಮಂಗಳ ಕಾಲೇಜಿನ ಉಪನ್ಯಾಸಕಿ ವಿಜೇತಾ ಶೆಟ್ಟಿ ರವರು ಮಾತನಾಡಿ ಆರೋಗ್ಯದ ಕಾಳಜಿ ಹಾಗೂ ಶಿಬಿರದಲ್ಲಿ ಲಭ್ಯವಿರುವ ಸೇವೆಗಳ ಬಗ್ಗೆ ಮಾಹಿತಿ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ, “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು 14 ವರ್ಷಗಳಿಂದ ನಿರಂತರವಾಗಿ ಶಾಖೆಗಳ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸಂಘದ ಸದಸ್ಯರ ಹಾಗೂ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಉಚಿತ ವೈದ್ಯಕೀಯ ಶಿಬಿರ ಗಳನ್ನು ಆಯೋಜಿಸುತ್ತಾ ಬರುತ್ತಿದ್ದು, ಇದು ಸಂಘದ ವತಿಯಿಂದ ಆಯೋಜಿಸಿದ 113ನೇ ಉಚಿತ ವೈದ್ಯಕೀಯ ಶಿಬಿರ ಇದಾಗಿದೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ತನ್ನ ಸಾಮಾಜಿಕ ಬದ್ಧತೆಯೊಂದಿಗೆ ನೀರುಮಾರ್ಗ ಪರಿಸರದಲ್ಲಿ ಈಗಾಗಲೇ ಆರ್ಥಿಕವಾಗಿ ಹಿಂದುಳಿದ ಸದಸ್ಯರ ಮನೆಯ ನವೀಕರಣವನ್ನು ಮಾಡಿದೆ. ವಾಹನ ವಿಮೆ, ಆರೋಗ್ಯ ವಿಮೆಯನ್ನು ವಿವಿಧ ವಿಮಾ ಕಂಪೆನಿಗಳ ಸೌಲಭ್ಯ ಸಹಯೋಗದೊಂದಿಗೆ ಆಕರ್ಷಕ ಪ್ರೀಮಿಯಂನಲ್ಲಿ ನೀಡುತ್ತಿದ್ದು, ಗ್ರಾಹಕರಿಗೆ ಆರೋಗ್ಯ ವಿಮೆಯ ಮಹತ್ವ ತಿಳಿಸಿದರು.
ಮುಂದಿನ ದಿನಗಳಲ್ಲಿ ಎಲ್ಲ ಸದಸ್ಯರಿಗೆ ಆರೋಗ್ಯ ವಿಮೆಯನ್ನು ಕೊಡುವ ಯೋಜನೆಯನ್ನು ಹಾಕಿಕೊಂಡಿದ್ದೇವೆ ಎಂದರು.

ಈ ವೈದ್ಯಕೀಯ ಶಿಬಿರದಲ್ಲಿ ಹೃದಯಾಘಾತ ಉಂಟಾದ ಸಂದರ್ಭದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮಾಡುವ ಪ್ರಥಮ ಚಿಕಿತ್ಸೆ (ಸಿ. ಪಿ . ಆರ್) ಬಗ್ಗೆ ಪ್ರಾತ್ಯಕ್ಷಿಕೆಯನ್ನು ಮಂಗಳ ಆಸ್ಪತ್ರೆಯ ವೈದ್ಯ ತಂಡದವರು ನೀಡಿದರು.

ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನಿ. ಇದರ ಉಪಾಧ್ಯಕ್ಷ ನೇಮಿರಾಜ್ ಪಿ., ನಿರ್ದೇಶಕ ಗೋಪಾಲ ಎಂ., ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಲಯನ್ಸ್ ಕ್ಲಬ್ ಮಂಗಳೂರು ಆದಿತ್ಯ ಇದರ ನಿಕಟಪೂರ್ವ ಅಧ್ಯಕ್ಷ ಲಯನ್ ನರಸಿಂಹ ಪೈ, ನಿಕಟಪೂರ್ವ ವಲಯ ಅಧ್ಯಕರಾದ ಲಯನ್ ಶೀನಾ ಪೂಜಾರಿ, ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿ ನೀರುಮಾರ್ಗ, ಇದರ ಕಾರ್ಯದರ್ಶಿ ಶ್ರೀಮತಿ ಪ್ರಮೀಳಾ, ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘ ಸುಬ್ರಹ್ಮಣ್ಯ ನಗರ ನೀರುಮಾರ್ಗ ಇದರ ಅಧ್ಯಕ್ಷ ನಾರಾಯಣ ಪೂಜಾರಿ, ಕಾರ್ಯದರ್ಶಿ ಸತೀಶ ಪೂಜಾರಿ, ಮಂಗಳ ಕಾಲೇಜಿನ ಸಾರ್ವಜನಿಕ ಸಂಪರ್ಕ ಅಧಿಕಾರಿ ವಿಜೇಶ್ ಉಪಸ್ಥಿತರಿದ್ದರು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಹಾಯಕ ಪ್ರಬಂಧಕರಾದ ವಿಶ್ವನಾಥ್ ಸ್ವಾಗತಿಸಿದರು. ಪ್ರಭಾರ ಶಾಖಾಧಿಕಾರಿಯಾದ ವರುಣರಾಜ್ ನಿರೂಪಿಸಿದರು. ಹಿರಿಯ ಶಾಖಾಧಿಕಾರಿಯಾದ ಶ್ರೀಮತಿ ಹರಿಣಾಕ್ಷಿ ವಂದಿಸಿದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜನಮಂಗಲ ಕಾರ್ಯಕ್ರಮ: ರಾಜ್ಯದ 6374 ವಿಶೇಷ ಚೇತನರಿಗೆ ಉಚಿತ ಸಲಕರಣೆ ವಿತರಣೆ

Suddi Udaya

ಫೆ.29-ಮಾ.2ರವರೆಗೆ ನಡೆಯಲಿರುವ ಆಗ್ನೆಯ ಏಷ್ಯಾ ಮಾಧ್ಯಮ ಅಧ್ಯಯನ ಸಮ್ಮೇಳನಕ್ಕೆ ಕೊಕ್ಕಡದ ಸಿಬಂತಿ ಪದ್ಮನಾಭ

Suddi Udaya

ಕುದ್ಯಾಡಿಗುತ್ತು ಕೃಷ್ಣಮ್ಮ ಅಣ್ಣಿ ಪೂಜಾರಿ ನಿಧನ

Suddi Udaya

ನ.22: ಗೆಜ್ಜೆಗಿರಿಯಲ್ಲಿ ಮೂರನೇ ವರ್ಷದ ಗೆಜ್ಜೆನಾದದ ವೈಭವ

Suddi Udaya

ಬಂದಾರು: ಕುಂಟಾಲಪಲ್ಕೆ ಕಲ್ಲರ್ಬಿ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ: ಮಣ್ಣು ತೆರವು ಕಾರ್ಯ

Suddi Udaya

ಉರುವಾಲು ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ನೂತನ ಬಾವಿ ನಿರ್ಮಾಣಕ್ಕೆ ಮುಹೂರ್ತ

Suddi Udaya
error: Content is protected !!