September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

ಉಜಿರೆ: “ನಮ್ಮ ಹಿರಿಯರು ಹೊಟ್ಟೆಪಾಡಿಗಾಗಿ ದುಡಿದ ಕಥೆಯನ್ನು ನೆನಪಿಸುವ ದಿನವೇ ಇಂದಿನ ‘ಆಟಿಡೊಂಜಿ ದಿನ’ದ ಹಿನ್ನೆಲೆಯಾಗಿದೆ,” ಎಂದು ಉಜಿರೆ ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದ ಉಪನ್ಯಾಸಕರಾದ ಡಾ. ರವೀಶ್ ಪಡುಮಲೆ ಹೇಳಿದರು.

ಇವರು ಆ. 10ರಂದು ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ನಡೆದ ‘ಆಟಿಡೊಂಜಿ ದಿನ’ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರು ಆಟಿ ತಿಂಗಳ ಸಂಪ್ರದಾಯಗಳು, ಆಟಿ ಕಳೆಂಜನ ಕಥೆ ಹಾಗೂ ಆಟಿ ಅಮಾವಾಸ್ಯೆ ಆಚರಣೆಯ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮೌಲ್ಯಯುತ ಮಾಹಿತಿ ನೀಡಿದರು.

ಶಾಲೆಯಲ್ಲಿ ಆಟಿಡೊಂಜಿ ದಿನದ ಸಂಭ್ರಮ ಮನೆ ಮಾಡಿತ್ತು. ತೆಂಗಿನ ಗರಿಗಳಿಂದ ತಯಾರಿಸಿದ ವಿವಿಧ ಕಲಾಕೃತಿಗಳು ಹಾಗೂ ಅಲಂಕಾರಗಳಿಂದ ಶಾಲೆಯು ಮದುವಣಗಿತ್ತಿಯಂತೆ ಕಂಗೊಳಿಸುತ್ತಿತ್ತು. ಶಾಲೆಯ ಮೂಲೆ ಮೂಲೆಗಳಲ್ಲಿಯೂ ತುಳುನಾಡಿನ ಸಂಸ್ಕೃತಿ, ಸಂಪ್ರದಾಯ ಮತ್ತು ಆಹಾರ ವೈವಿಧ್ಯವನ್ನು ಬಿಂಬಿಸುವ ವಿವಿಧ ಭಕ್ಷ್ಯ-ಭೋಜ್ಯಗಳು ಹಾಗೂ ಆಟಿಯಲ್ಲಿ ಆಡುವ ವಿಶೇಷ ದೇಸಿ ಆಟಗಳು ಗಮನ ಸೆಳೆದವು.

ವಿದ್ಯಾರ್ಥಿಗಳಿಂದ ತುಳುನಾಡು ಮತ್ತು ತುಳು ಭಾಷೆಗೆ ಸಂಬಂಧಿಸಿದ ಹಾಡುಗಳು, ಗಾದೆಗಳು, ಸಂಧಿ ಪಾಡ್ದನ, ನಾಟಕ ಹಾಗೂ ನೃತ್ಯ ಪ್ರದರ್ಶನಗಳನ್ನು ಆಯೋಜಿಸಲಾಗಿತ್ತು. ಅಲ್ಲದೆ, ತುಳುನಾಡಿನ ಸಂಸ್ಕೃತಿ ಮತ್ತು ಪರಂಪರೆಯನ್ನು ಪರಿಚಯಿಸುವ ಭಿತ್ತಿಪತ್ರಿಕೆಗಳ ಪ್ರದರ್ಶನವೂ ನಡೆಯಿತು. ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಪಾಲ್ಗೊಂಡರು.

ಶಾಲಾ ಪ್ರಾಂಶುಪಾಲರಾದ ಮನಮೋಹನ್ ನಾಯಕ್ ಕೆ.ಜಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿನಿ ಎಂ. ಶ್ರದ್ಧಾ ಕಾರ್ಯಕ್ರಮವನ್ನು ನಿರೂಪಿಸಿದರು. ಶಾಲಾ ಪ್ರಾಂಶುಪಾಲರಾದ ಮನಮೋಹನ್ ನಾಯಕ್ ಕೆ.ಜಿ. ಸ್ವಾಗತಿಸಿದರು.

Related posts

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya

ಹೆಣ್ಣು ಮಕ್ಕಳ ಬಗ್ಗೆ ಮಾನಹಾನಿಕರ ಹೇಳಿಕೆ ನೀಡಿದ ಅರಣ್ಯ ಅಧಿಕಾರಿಯನ್ನು ಅಮಾನತುಗೊಳಿಸಬೇಕು ಭಜನಾ ಪರಿಷತ್ ರಾಜ್ಯಾಧ್ಯಕ್ಷರು ಮತ್ತು ತಾಲೂಕು ಪದಾಧಿಕಾರಿಗಳು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಸಂಗೀತ ದಿನ ಆಚರಣೆ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಉರುವಾಲು ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ವಲೇರಿಯನ್ ಡಯಾಸ್ ನಿಧನ

Suddi Udaya
error: Content is protected !!