September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಮುಂಡಾಜೆ ವಲಯದ ಭಜನಾ ಪರಿಷತ್ತಿನ ಸಭೆ

ಮುಂಡಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಸಹಕಾರದೊಂದಿಗೆ ಮುಂಡಾಜೆ ವಲಯದ ಭಜನಾ ಪರಿಷತ್ತಿನ ಸಭೆಯು ವಲಯ ಅಧ್ಯಕ್ಷ ವೆಂಕಟೇಶ್ವರ ಭಟ್ ಕಜೆ ಇವರ ಅಧ್ಯಕ್ಷತೆಯಲ್ಲಿ ವಲಯದ ಯೋಜನಾ ಕಚೇರಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಭಜನಾ ಪರಿಷತ್ತಿನ ರಾಜ್ಯ ಅಧ್ಯಕ್ಷ ಪಿ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು, ಭಜನಾ ಪರಿಷತ್ತಿನ ಜಿಲ್ಲಾ ಸಮನ್ವಯಧಿಕಾರಿ ಸಂತೋಷ್ ಪಿ ಅಳಿಯೂರು, ತಾಲೂಕು ಅಧ್ಯಕ್ಷ ರವಿರಾಜ್ ಚಾರ್ಮಾಡಿ, ತಾಲೂಕು ಭಜನಾ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷ ಮಂಜುನಾಥ್ ಶೆಟ್ಟಿ, ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕಿ ಶ್ರೀಮತಿ ಪೂರ್ಣಿಮಾ, ಭಜನಾ ಪರಿಷತ್ತಿನ ಇನ್ನಿತರ ಪದಾಧಿಕಾರಿಗಳು ಹಾಗೂ ಸೇವಾ ಪ್ರತಿನಿಧಿಗಳು ಮತ್ತು ವಿವಿಧ ಭಜನಾ ಮಂಡಳಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಈ ಸಭೆಯಲ್ಲಿ ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷರು ಭಜನಾ ಪರಿಷತ್ತಿನ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಸಮಗ್ರವಾದ ಮಾಹಿತಿಯನ್ನು ನೀಡಿದರು. ಜಿಲ್ಲಾ ಸಮನ್ವಯ ಅಧಿಕಾರಿಯವರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮುಂದಿನ ತಿಂಗಳು ನಡೆಯಲಿರುವ ಭಜನಾ ಕಮ್ಮಟದ ಬಗ್ಗೆ ವಿವರಿಸುತ್ತಾ ಶಿಬಿರಾರ್ಥಿಗಳನ್ನು ಆಯ್ಕೆ ಮಾಡುವ ಬಗ್ಗೆ ಚರ್ಚಿಸಿದರು.

ಭಜನಾ ಮಂಡಳಿಯ ಪದಾಧಿಕಾರಿಗಳೊಂದಿಗೆ ಸಮಾಲೋಚಿಸಿ ಕೆಲವೊಂದು ನಿರ್ಣಯಗಳನ್ನು ಕೈಗೊಳ್ಳಲಾಯಿತು.
ಸೇವಾ ಪ್ರತಿನಿಧಿ ಶ್ರೀಮತಿ ಸರಿತಾ ಸ್ವಾಗತಿಸಿ, ಸೇವಾ ಪ್ರತಿನಿಧಿ ಶ್ರೀಮತಿ ದಿಶಾ ವಂದಿಸಿದ್ದರು.

Related posts

ಪಣಕಜೆ ‌ಭಜನಾ ಮಂದಿರದ ಬಳಿ ನಡೆದ ಅಪಘಾತದಲ್ಲಿ ರಸ್ತೆ ಚರಂಡಿಗೆ ಬಿದ್ದ ಸ್ಕೂಟರ್

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಬೆಳ್ತಂಗಡಿ ತಾಲೂಕಿನ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಶಾಲೆಗಳಲ್ಲಿ ಹಿಂದೂ ಹಬ್ಬಗಳ ಆಚರಣೆಗೆ ರಾಜ್ಯ ಸರ್ಕಾರ ನಿರ್ಬಂಧ ಖಂಡಿಸಿ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ ಯುವವಾಹಿನಿಯ ವಾರ್ಷಿಕ ಮಹಾಸಭೆ: ಅಧ್ಯಕ್ಷರಾಗಿ ಲೀಲಾವತಿ ಪಣಕಜೆ, ಕಾರ್ಯದರ್ಶಿಯಾಗಿ ಅಶ್ವಿನ್ ಕುಮಾರ್ ಬಿ.ಕೆ.

Suddi Udaya

ಕಡಮಗುಂಡಿ ಜಲಪಾತ, ನೇತ್ರಾವತಿ ಪೀಕ್ ಪ್ರವಾಸಿಗರ ವೀಕ್ಷಣೆಗೆ ಮುಕ್ತ

Suddi Udaya

ಅಂಡಿಂಜೆ: ಮಲೆರೊಟ್ಟು ನಿವಾಸಿ ಬಾಬು ಪೂಜಾರಿ ನಿಧನ

Suddi Udaya
error: Content is protected !!