September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರಿನಲ್ಲಿ ಮಾದಕ ವಸ್ತು ಸೇವನೆ ಮಾಡಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಮಾದಕವಸ್ತು ವಿರುದ್ಧ ಬೆಳ್ತಂಗಡಿ ಉಪವಿಭಾಗ ಪೊಲೀಸರ ಕಾರ್ಯಾಚರಣೆ ಚುರುಕುಗೊಳಿಸಿದ್ದು, ಇದೀಗ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೇಲಿನ ಪೇಟೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿದ್ದ ವ್ಯಕ್ತಿಯೊಬ್ಬನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ವೇಣೂರು ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಅಕ್ಷಯ ಡವಗಿ ಅವರು ಠಾಣಾ ಸಿಬ್ಬಂದಿಗಳೊಂದಿಗೆ ಆ.9ರಂದು ಮಧ್ಯಾಹ್ನ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ವೇಣೂರು ಮೇಲಿನ ಪೇಟೆ ಪ್ರದೇಶದಲ್ಲಿ ವ್ಯಕ್ತಿಯೊಬ್ಬರು ಅಮಲಿನಲ್ಲಿರುವುದು ಕಂಡುಬಂದಿದೆ. ವಿಚಾರಣೆ ನಡೆಸಿದಾಗ ಆತ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ನಿವಾಸಿ ಮಹಮ್ಮದ್ ಆಸೀಫ್ (35) ಎಂದು ತಿಳಿದುಬಂದಿದ್ದು, ನಿಷೇಧಿತ ಮಾದಕ ವಸ್ತು ಸೇವಿಸಿರುವುದಾಗಿ ಒಪ್ಪಿಕೊಂಡಿದ್ದಾನೆ.

ಬಳಿಕ ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ಕಲಂ 27(b) ಮತ್ತು 22(a) ಎನ್‌ಡಿಪಿಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಮಹೋತ್ಸವಕ್ಕೆ ಚಾಲನೆ

Suddi Udaya

ಬಳಂಜ: ಶ್ರೀ ಶಾರದೋತ್ಸವದ ಅಂಗವಾಗಿ ವಾಲಿಬಾಲ್ ಪಂದ್ಯಾಟ, ಯುವ ಉದ್ಯಮಿ ರಾಕೇಶ್ ಹೆಗ್ಡೆಯವರಿಂದ ಕ್ರೀಡಾಂಗಣ ಉದ್ಘಾಟನೆ

Suddi Udaya

ಧರ್ಮಸ್ಥಳ ಮೇಳದ ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಹೃದಯಾಘಾತದಿಂದ ನಿಧನ

Suddi Udaya

ದಿಡುಪೆ: ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ :ಬಿ.ಎನ್ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!