September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾದಕ ವಸ್ತುಗಳ ವಿರುದ್ಧ ಯುವ ಕಾಂಗ್ರೆಸ್‌ನಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಅಭಿಯಾನ

ಬೆಳ್ತಂಗಡಿ: ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.

“ನಶೆ ಬೇಡ… ನಾಳೆಯ ಭವಿಷ್ಯ ಬೇಕು” ಹಾಗೂ “Say NO to Drugs, Say YES to the Future”ಎಂಬ ಘೋಷವಾಕ್ಯದೊಂದಿಗೆ ನಡೆಯಲಿರುವ ಅಭಿಯಾನದಲ್ಲಿ ಮಾದಕ ವಸ್ತುಗಳ ಸೇವನೆಯಿಂದ ಯುವಜನರ ಆರೋಗ್ಯ, ಶಿಕ್ಷಣ, ಉದ್ಯೋಗ ಹಾಗೂ ಭವಿಷ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುವುದು.

ಮಾದಕ ವ್ಯಸನವು ಕೇವಲ ವ್ಯಕ್ತಿಯ ಜೀವನವನ್ನು ಮಾತ್ರವಲ್ಲದೆ ಕುಟುಂಬ ಮತ್ತು ಸಮಾಜದ ನೆಮ್ಮದಿಯನ್ನೂ ಹಾಳು ಮಾಡುತ್ತದೆ. ಆದ್ದರಿಂದ ಯುವಜನತೆ ಮಾದಕ ವಸ್ತುಗಳಿಂದ ದೂರವಿದ್ದು, ಕ್ರೀಡೆ, ಶಿಕ್ಷಣ, ಉದ್ಯೋಗ, ಸಾಮಾಜಿಕ ಸೇವೆ ಸೇರಿದಂತೆ ಸಕಾರಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂಬ ಸಂದೇಶವನ್ನು ಅಭಿಯಾನದ ಮೂಲಕ ನೀಡಲಾಗುತ್ತಿದೆ.

“ಮಾದಕ ವ್ಯಸನಕ್ಕೆ ಯುವಜನತೆ ಬಲಿಯಾಗದಂತೆ ತಡೆಯುವುದು ಪ್ರತಿಯೊಬ್ಬರ ಜವಾಬ್ದಾರಿ. ನಮ್ಮ ಕುಟುಂಬ, ಸಮಾಜ ಮತ್ತು ಬೆಳ್ತಂಗಡಿಯ ಸುರಕ್ಷಿತ ಭವಿಷ್ಯಕ್ಕಾಗಿ ಡ್ರಗ್ಸ್ ವಿರುದ್ಧ ಒಗ್ಗಟ್ಟಾಗಿ ಧ್ವನಿ ಎತ್ತಬೇಕು” ಎಂಬ ಕರೆ ನೀಡಲಾಗಿದೆ.

ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ನಡೆಯುತ್ತಿರುವ ಈ ಜಾಗೃತಿ ಅಭಿಯಾನಕ್ಕೆ ಯುವಜನರು, ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಕೈಜೋಡಿಸುವಂತೆ ಮನವಿ ಮಾಡಲಾಗಿದೆ.

Related posts

ಕಜಕೆ ಶಾಲೆಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಬಂಗಾಡಿ ಸ. ಉ. ಪ್ರಾ. ಶಾಲೆಯಲ್ಲಿ ಕಾರ್ಗಿಲ್ ದಿನಾಚರಣೆ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ನಡ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿದ ಶ್ರೀಮತಿ ರಾಜೀವಿರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಬೆಳಾಲಿನ ಪ್ರಗತಿಪರ ಕೃಷಿಕ ಶಿವಪ್ಪಗೌಡರಿಗೆ ಸೆಲ್ಯೂಟ್ ದ ಸೈಲೆಂಟ್ ಸ್ಟಾರ್ ಅವಾರ್ಡ್

Suddi Udaya

ಶುಭವಿವಾಹ:ಗಿರೀಶ್ ಬಿ.ಕೆ ಮತ್ತು ಧನ್ಯಶ್ರೀ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮ

Suddi Udaya
error: Content is protected !!