September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ‘ಆಟಿದ ಲೇಸ್’ ಕಾರ್ಯಕ್ರಮ

ಮುಂಡಾಜೆ : ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ “ಆಟಿದ ಲೇಸ್ – ರುಚಿ ಮತ್ತು ಸಂಸ್ಕೃತಿಯ ಸಂಗಮ”ವನ್ನು ನಡೆಸಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಪ್ರಖ್ಯಾತ ಯಕ್ಷಗಾನ ಕಲಾವಿದರು ಹಾಗೂ ಪ್ರಗತಿಪರ ಕೃಷಿಕರಾದ ಗಂಗಾಧರ ಕೆ ಕಾಯರ್ತಡ್ಕರವರು ಕಾರ್ಯಕ್ರಮವನ್ನು ಉದ್ಘಾಟಿಸಿ ತುಳುನಾಡು ಹಾಗೂ ಆಟಿ ತಿಂಗಳ ವೈಜ್ಞಾನಿಕ ಹಿನ್ನಲೆ-ಆರೋಗ್ಯ, ಮಹತ್ವ, ಸಂಸ್ಕೃತಿ ಹಾಗೂ ಸಂಪ್ರದಾಯಗಳ ಬಗ್ಗೆ ಸವಿಸ್ತಾರವಾದ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಚಾರ್ಯರಾದ ಗೀತಾ ಮಾತನಾಡಿ ಹಿಂದಿನ ಕಾಲದ ಆಟಿ ತಿಂಗಳ ಕಷ್ಟದ ಜೀವನದ ನೆನಪುಗಳನ್ನು ಹಂಚಿಕೊಂಡರು. ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ನಾರಾಯಣ ಗೌಡ ಕೊಳಂಬೆ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಕನ್ನಡ ಉಪನ್ಯಾಸಕಿ ವಸಂತಿ ನಿರೂಪಿಸಿ, ಸಾಂಸ್ಕೃತಿಕ ಸಂಘದ ಮುಖ್ಯಸ್ಥರಾದ ಪದ್ಮನಾಭ ಬಿ ಕೆ ಸ್ವಾಗತಿಸಿ, ಮನಃಶಾಸ್ತ್ರ ಉಪನ್ಯಾಸಕಿ ನಮಿತಾ ಕೆ ಆರ್ ವಂದಿಸಿದರು.
ತುಳುನಾಡಿನ ಸಂಸ್ಕೃತಿ ಪರಂಪರೆಗಳನ್ನು ಬಿಂಬಿಸುವ ತುಳು ಸಾಂಸ್ಕೃತಿಕ ಕಾರ್ಯಕ್ರಮ, ಎದುರು ಕಥೆ, ಪ್ರಹಸನ, ಆಟಿ ತಿಂಗಳ ತಿನಿಸುಗಳ ಪ್ರದರ್ಶನ ಹಾಗೂ ಆಟಿಯ ಸಹಭೋಜನವು ಕಾರ್ಯಕ್ರಮದ ವಿಶೇಷವಾಗಿತ್ತು.

Related posts

ಅಡುಗೆ ಕೆಲಸಕ್ಕೆ ಹೋದ ಮುಂಡಾಜೆ ಕೂಳೂರು ಶಾರದಾ ನಗರ ನಿವಾಸಿ ರಾಘವೇಂದ್ರ ಮೆಹಂದಳೆ ನಾಪತ್ತೆ: ಪತ್ನಿಯಿಂದ ಪೊಲೀಸರಿಗೆ ದೂರು

Suddi Udaya

ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಧರ್ಮಸ್ಥಳಕ್ಕೆ ಭೇಟಿ

Suddi Udaya

ಕಲ್ಮಂಜ : ಕೊಳಂಬೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ನಾಶ

Suddi Udaya

ಪಾರೆಂಕಿ ಖಾಸಗಿ ವ್ಯಕ್ತಿಯಿಂದ ಸಾರ್ವಜನಿಕ ಕಾಲು ದಾರಿಗೆ ತಡೆಯಾಗಿದ್ದು, ತೆರವುಗೊಳಿಸಲು ಆಗ್ರಹ: ಸಾರ್ವಜನಿಕರು, ಕೃಷಿಕರ ಕುಂದುಕೊರತೆಗಳ ನಿವಾರಣೆಗೆ ಕನ್ನಡ ಸೇನೆ ಕರ್ನಾಟಕ ಹೋರಾಟ

Suddi Udaya

ಭಾರೀ ಗಾಳಿ ಮಳೆ: ಇಂದಬೆಟ್ಟುವಿನಲ್ಲಿ ಮನೆಗೆ ಮರ ಬಿದ್ದು ಹಾನಿ: ವಿದ್ಯುತ್ ಕಂಬ ಹಾಗೂ ರಬ್ಬರ್ ಗಿಡಗಳು ಧರಾಶಾಹಿ

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ರಾಷ್ಟ್ರ ಮಟ್ಟದ ಸಾಹಿತ್ಯೋತ್ಸವದಲ್ಲಿ ವಿಜೇತರಾದವರಿಗೆ ಅಭಿನಂದನೆ

Suddi Udaya
error: Content is protected !!