24.2 C
ಪುತ್ತೂರು, ಬೆಳ್ತಂಗಡಿ
September 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅತ್ಯುತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಂಟ ಸಮಾಜದಿಂದ ಅಭಿನಂದನೆ

ಬೆಳ್ತಂಗಡಿ: ರಾಜ್ಯದ ಪ್ರತಿಷ್ಠಿತ ಸುದ್ದಿ ವಾಹಿನಿಯಾದ ಕರ್ನಾಟಕ ಟಿವಿಯು ಕರಾವಳಿ ಮತ್ತು ಮಧ್ಯ ಕರ್ನಾಟಕ ವಿಭಾಗಕ್ಕೆ ನೀಡುವ “ಬೆಸ್ಟ್ ಎಂಎಲ್ಎ” ಪ್ರಶಸ್ತಿ ಕ್ಷೇತ್ರದ ಶಾಸಕ ಹರೀಶ್ ಪೂಂಜಾರಿಗೆ ಲಭಿಸಿದ ಹಿನ್ನೆಲೆಯಲ್ಲಿ, ಬಂಟರ ಯಾನೆ ನಾಡವರ ಸಂಘ (ರಿ) ಬೆಳ್ತಂಗಡಿಯ ಪದಾಧಿಕಾರಿಗಳು ಶಾಸಕರ ನಿವಾಸಕ್ಕೆ ಆಗಮಿಸಿ ಆತ್ಮೀಯವಾಗಿ ಅಭಿನಂದಿಸಿದರು.

ಈ ವೇಳೆ ಮಾತನಾಡಿದ ಶಾಸಕರು, “ನಿಮ್ಮೆಲ್ಲರ ಪ್ರೀತಿ, ವಿಶ್ವಾಸ, ಶುಭಾಶಯಗಳು ಮತ್ತು ಅಮೂಲ್ಯ ಆಶೀರ್ವಾದಗಳಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ. ಈ ಗೌರವವು ನನ್ನ ಮೇಲಿನ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚಿಸಿದ್ದು, ಜನಸೇವೆಗೆ ಇನ್ನೂ ಹೆಚ್ಚಿನ ಬದ್ಧತೆಯಿಂದ ಕಾರ್ಯನಿರ್ವಹಿಸಲು ಸದಾ ಪ್ರೇರಣೆಯಾಗಲಿದೆ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಪ್ರಕಾಶ್ ಶೆಟ್ಟಿ ನೊಚ್ಚ, ಮಹಿಳಾ ವಿಭಾಗದ ಅಧ್ಯಕ್ಷೆ ವಸುದಾ ಶೆಟ್ಟಿ, ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಅಜಿತ್ ಜಿ ಶೆಟ್ಟಿ, ಬಂಟ ಸಮಾಜದ ಎಲ್ಲಾ ನಿರ್ದೇಶಕರು ಹಾಗೂ ಸಮಾಜದ ಬಂಧುಗಳು ಉಪಸ್ಥಿತರಿದ್ದರು.

Related posts

ಕುತ್ಲೂರು: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕಮಾಂಡೋ ವೀಲ್ ಚೇರ್ ವಿತರಣೆ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಳಿಯ ಕೃಷ್ಣವೇಷ ಸ್ಪರ್ಧೆಯಲ್ಲಿ ಸ್ಮಯ ಎಸ್. ಕೋಟ್ಯಾನ್‌ಗೆ ಪ್ರಥಮ

Suddi Udaya

ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜಾ ರವರಿಗೆ ಮುಂಡಾಜೆ ಪ್ರಾ.ಕೃ.ಪ.ಸ. ಸಂಘದ ವತಿಯಿಂದ ಸನ್ಮಾನ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸಹಯೋಗದೊಂದಿಗೆ’ಯಕ್ಷ ಶಿಕ್ಷಣ’ ಕಾರ್ಯಕ್ರಮದ ಉದ್ಘಾಟನೆ

Suddi Udaya

ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಹಾಗೂ ಆಡಳಿತ ಮಂಡಳಿಯ ವಿರುದ್ಧ ಮಾನಹಾನಿಕರ ಪೋಸ್ಟ್: ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವ ಕಿಡಿಗೇಡಿಗಳ ವಿರುದ್ಧ ಅಳದಂಗಡಿ ಸತ್ಯದೇವತೆ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya
error: Content is protected !!