29.4 C
ಪುತ್ತೂರು, ಬೆಳ್ತಂಗಡಿ
September 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಪೊರ್ಲು’ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ‘ಆಟಿದ ಪೊರ್ಲು’ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮವನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಲತಾ ಎಂ. ಆರ್. ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿ ಶಾಲೆಗೆ ಆಗಮಿಸಿದ್ದರು. ಆಟಿ ತಿಂಗಳ ವಿಶೇಷವಾದ ತಿಂಡಿ-ತಿನಿಸುಗಳನ್ನು ಮನೆಯಿಂದ ತಯಾರಿಸಿಕೊಂಡು ಬಂದು, ಅವುಗಳ ಮಹತ್ವ ಹಾಗೂ ವಿಶೇಷತೆಯನ್ನು ಪರಸ್ಪರ ಹಂಚಿಕೊಂಡರು. ಈ ಮೂಲಕ ವಿದ್ಯಾರ್ಥಿಗಳಿಗೆ ಆಟಿ ತಿಂಗಳ ಸಂಪ್ರದಾಯ, ಆಹಾರ ಪದ್ಧತಿ ಹಾಗೂ ಅದರ ಮಹತ್ವದ ಕುರಿತು ಅರಿವು ಮೂಡಿಸಲಾಯಿತು.

ನೃತ್ಯ, ಅಭಿನಯ, ಗಾದೆ ಮಾತುಗಳು ಹಾಗೂ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಆಟಿ ತಿಂಗಳ ವಿಶೇಷತೆಗಳನ್ನು ಮಕ್ಕಳಿಗೆ ಪರಿಚಯಿಸಲಾಯಿತು. ಹಿಂದಿನ ಕಾಲದಲ್ಲಿ ಆಟಿ ತಿಂಗಳಲ್ಲಿ ಜನರು ಯಾವ ರೀತಿಯ ಜೀವನ ನಡೆಸುತ್ತಿದ್ದರು, ಅವರ ಆಹಾರ ಪದ್ಧತಿ ಹಾಗೂ ಜೀವನಶೈಲಿ ಹೇಗಿತ್ತು ಎಂಬುದರ ಬಗ್ಗೆಯೂ ಮಕ್ಕಳಿಗೆ ಮಾಹಿತಿಯನ್ನು ನೀಡಲಾಯಿತು.

ಶಾಲೆಯ ಶಿಕ್ಷಕ ವೃಂದದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಅಗತ್ಯ ಸಹಕಾರ ನೀಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಪುಂಜಾಲಕಟ್ಟೆ ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿಯಿಂದ ಬಳಂಜ ಸರ್ಕಾರಿ ಶಾಲೆಗೆ ಬ್ಯಾಂಡ್ ಸೆಟ್ ನ ದಂಡನಾಯಕನ ದಂಡ, ಹಾಗೂ ಕೊಳಲು, ಹಸ್ತಾಂತರ

Suddi Udaya

ಮದ್ದಡ್ಕ ಮಸ್ಜಿದ್‌ನ ನೂತನ ಆಡಳಿತ ಕಚೇರಿ ಉದ್ಘಾಟನೆ

Suddi Udaya

ಮಾ.10: ಮೂಲ್ಕಿಯಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ “ಬೆಳ್ಳಿ ಹಬ್ಬ ಸಂಭ್ರಮ”: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು,ಓಡಿಲ್ನಾಳ ಗ್ರಾಮ ಸಮಿತಿಯಿಂದ ಸಮಾಲೋಚನೆ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಕ್ಕಡ: ಮಾಯಿಲಕೋಟೆ ದೈವಸ್ಥಾನದ ನಾಗಬನದಲ್ಲಿ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ಗ್ರಂಥಾಲಯ ವಿಭಾಗದ ವತಿಯಿಂದ ಓದುವ ಸಪ್ತಾಹ

Suddi Udaya
error: Content is protected !!