23.1 C
ಪುತ್ತೂರು, ಬೆಳ್ತಂಗಡಿ
September 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೇಲಂತಬೆಟ್ಟು ಬದಿನಡೆ ನಾಗಬ್ರಹ್ಮ ದೇವಸ್ಥಾನದಲ್ಲಿ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ, ಗರ್ಭಗುಡಿಯಲ್ಲಿ ನಾಗದೇವರ ಪ್ರತ್ಯಕ್ಷ

ಮೇಲಂತಬೆಟ್ಟು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟಿನ “ಕೀರ್ತಿ” ಪ್ರಬುದ್ಧ ಜ್ಞಾನವಿಕಾಸ ಕೇಂದ್ರದ ವತಿಯಿಂದ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮವನ್ನು ಬದಿನಡೆ ನಾಗಬ್ರಹ್ಮ ದೇವಸ್ಥಾನದ ಪೂರ್ಣ ಆವರಣವನ್ನು ಸ್ವಚ್ಛಗೊಳಿಸುವ ಮೂಲಕವಾಗಿ ನಡೆಸಲಾಯಿತು.

ಈ ಸಂದರ್ಭ ನಾಗಬ್ರಹ್ಮ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ನಾರಾಯಣ ಪೂಜಾರಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶೈಲೇಶ್ ಕುರ್ತೋಡಿ, ಮೇಲ್ವಿಚಾರಕರಾದ ರಾಮ್ ಕುಮಾರ್, ಸೇವಾಪ್ರತಿನಿಧಿ ಲೀಲಾವತಿ, ಸದಸ್ಯರಾದ ನಿತಾ, ಅಶ್ವಿನಿ, ನಳಿನಿ, ವಿಜಯ, ಅಪ್ಪಿ, ಸುಶೀಲ, ವಿಧ್ಯಾ, ಶಶಿಕಲಾ, ಸೀತಾ ಹಾಗೂ ಜ್ಞಾನವಿಕಾಸ ಕೇಂದ್ರದ ಸದಸ್ಯರು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು.

ನಾಗದೇವರ ಪ್ರತ್ಯಕ್ಷ: ನಾಗಬ್ರಹ್ಮ ದೇವಸ್ಥಾನದ ಗರ್ಭಗುಡಿಯ ಒಳಭಾಗದಲ್ಲಿರುವ ಹುತ್ತದಿಂದ ಹೊರಬಂದ ನಾಗದೇವರು ಸ್ವಚ್ಛತಾ ಕಾರ್ಯದಲ್ಲಿ ಉಪಸ್ಥಿತರಿದ್ದ ಸದಸ್ಯರಿಗೆ ಪ್ರತ್ಯಕ್ಷ ದರ್ಶನ ನೀಡಿದೆ.

Related posts

ಮುಂಡಾಜೆ ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವಿಭಾಗ ಹಾಗೂ ಸರಸ್ವತಿ ಪ್ರೌಢಶಾಲೆ ಸಹಯೋಗದಲ್ಲಿ “ಕೆಸರ್ದ ಗೊಬ್ಬು

Suddi Udaya

ದಿಡುಪೆ -ಎಳನೀರು ರಸ್ತೆ ಅಭಿವೃದ್ಧಿ ಬೆಳ್ತಂಗಡಿ- ಮೂಡಿಗೆರೆ ಶಾಸಕರುಗಳಿಂದ ಪರಿಶೀಲನೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ವನ್ಯಜೀವಿ ವಿಭಾಗದ ಅಧಿಕಾರಿಗಳ ಉಪಸ್ಥಿತಿ

Suddi Udaya

ಕಾಜೂರು ಶಿಕ್ಷಣ ಸಂಸ್ಥೆಯಲ್ಲಿ “ಅಲೀಫ್ ಡೇ” ಸಮಾರಂಭ

Suddi Udaya

ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ, ರತ್ನಗಿರಿ ಪುನರ್ ಪ್ರತಿಷ್ಠಾ ಮಹೋತ್ಸವದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ನಿಡ್ಲೆ: ಕಂರ್ಬಿತ್ಲು ನಿವಾಸಿ ಅಚ್ಚುತ ಹೆಬ್ಬಾರ್ ನಿಧನ

Suddi Udaya

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ಪ್ರಥಮ

Suddi Udaya
error: Content is protected !!