23 C
ಪುತ್ತೂರು, ಬೆಳ್ತಂಗಡಿ
September 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಜ್ಜ–ಅಜ್ಜಿಯರೊಂದಿಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ವಿದ್ಯಾರ್ಥಿಗಳ ಆತ್ಮೀಯ ಸಮಾಗಮ

ಬೆಳ್ತಂಗಡಿ: ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆಯಲ್ಲಿ ಅಜ್ಜ–ಅಜ್ಜಿಯವರೊಂದಿಗೆ ಸಮಾಗಮ ಕಾರ್ಯಕ್ರಮ ಆ.11ರಂದು ನಡೆಯಿತು.

ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಮಕ್ಕಳ ವ್ಯಕ್ತಿತ್ವ ವಿಕಸನದಲ್ಲಿ ಅಜ್ಜ–ಅಜ್ಜಿಯವರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಹಿರಿಯರ ಅನುಭವ, ಪ್ರೀತಿ ಮತ್ತು ಮಾರ್ಗದರ್ಶನ ಮಕ್ಕಳಿಗೆ ಅಮೂಲ್ಯವಾದ ಜೀವನ ಪಾಠಗಳನ್ನು ಕಲಿಸುತ್ತದೆ ಎಂದರು.

ಮುಖ್ಯ ಅತಿಥಿಗಳಾಗಿ ಉಜಿರೆಯ ಜನಾರ್ಧನ್ ಮತ್ತು ವೇದಾವತಿ ದಂಪತಿ ಭಾಗವಹಿಸಿ, ಅಜ್ಜ–ಅಜ್ಜಿಯವರ ಮಹತ್ವ, ಮಕ್ಕಳ ಜೀವನದಲ್ಲಿ ಅವರ ಪ್ರೀತಿ ಹಾಗೂ ಮಾರ್ಗದರ್ಶನದ ಪಾತ್ರದ ಕುರಿತು ಮಾತನಾಡಿದರು. ಶುಭಲತಾ ಹಾಗೂ ಸತೀಶ್ ಕುಮಾರ್ ಜೈನ್ ಬೊಳ್ಳೂರುಗುತ್ತು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಆಕರ್ಷಕ ನೃತ್ಯ ಪ್ರದರ್ಶನ ನಡೆಯಿತು. ಅಜ್ಜ–ಅಜ್ಜಿಯವರ ಪ್ರೀತಿ, ಕಾಳಜಿ ಮತ್ತು ಮಕ್ಕಳ ಜೀವನದಲ್ಲಿ ಅವರ ಮಹತ್ವದ ಕುರಿತು ವಿದ್ಯಾರ್ಥಿಗಳು ಭಾಷಣ ಮಾಡಿದರು. ಬಳಿಕ ವಿದ್ಯಾರ್ಥಿಗಳು ತಮ್ಮ ಅಜ್ಜ–ಅಜ್ಜಿಯವರೊಂದಿಗೆ ಆತ್ಮೀಯವಾಗಿ ಸಮಯ ಕಳೆಯುವ ಮೂಲಕ ಕಾರ್ಯಕ್ರಮವನ್ನು ಸ್ಮರಣೀಯವಾಗಿಸಿದರು.

ಎಕ್ಸೆಲ್ ಟೆಕ್ನೋ ಸ್ಕೂಲ್‌ನ ಪ್ರಾಂಶುಪಾಲರಾದ ಸುಮಿತ್ರ ಸ್ವಾಗತಿಸಿದರು. ಶಿಕ್ಷಕ ಚಂದ್ರಪ್ಪ ಕಾರ್ಯಕ್ರಮ ನಿರೂಪಿಸಿದರು.ಶಾಲಾ ಶಿಕ್ಷಕರು ಮತ್ತು ಪೋಷಕರು ಸಹಕರಿಸಿದರು.

Related posts

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಪಟ್ಟೂರು ಹಾಲು ಉತ್ಪದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಬೆಳಾಲು : ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಆರೋಪಿಗಳ ಮನೆಯಿಂದ ಬೈಕ್, ಬಟ್ಟೆ ಕತ್ತಿ ವಶಕ್ಕೆ

Suddi Udaya

ಪ್ರತಿಷ್ಟಿತ ಎಳ್ಕಜೆ ಗುತ್ತಿನಲ್ಲಿ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಸೋಮಾವತಿ ನದಿಯಲ್ಲಿ ಅಪರಿಚಿತ ಶವ ಪತ್ತೆ:ವಾರೀಸುದಾರರ ಪತ್ತೆಗೆ ಪೊಲೀಸ್ ಇಲಾಖೆ ಮನವಿ

Suddi Udaya

ಬೆಳ್ತಂಗಡಿ: ಬಜರಂಗದಳ ಸಂಘಟನೆ ಹಾಗೂ ಶರಣ್ ಪಂಪುವೆಲ್ ರವರ ಮೇಲೆ ಅವಮಾನಕರ ಪೋಸ್ಟ್ ಮತ್ತು ವಿಡೀಯೋ ಹಾಕಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಿಗೆ ಮನವಿ

Suddi Udaya
error: Content is protected !!