29.4 C
ಪುತ್ತೂರು, ಬೆಳ್ತಂಗಡಿ
September 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಸ್ತುವಾರಿ ಸಚಿವರ ಸೂಚನೆಗೆ ಸ್ಪಂದಿಸಿದ ಲಾಯಿಲ ಗ್ರಾಮ ಪಂಚಾಯತ್; ಗುರಿಂಗಾನ ರಸ್ತೆ ಬದಿ ಬೀದಿ ದೀಪ ಅಳವಡಿಕೆ

ಬೆಳ್ತಂಗಡಿ: ಭಾರೀ ಮಳೆಯಿಂದ ಲಾಯಿಲ ಗ್ರಾಮದ ಪುತ್ರಬೈಲು, ಗುರಿಂಗಾನ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಸೋಮಾವತಿ ನದಿಯಲ್ಲಿ ಉಕ್ಕಿ ಬಂದ ಪ್ರವಾಹದಿಂದ ಹಲವು ಮನೆಗಳು ಜಲಾವೃತಗೊಂಡು ಹಾನಿ ಉಂಟಾಗಿದ್ದು , ಅ 5 ರಂದು ಉಸ್ತುವಾರಿ ಸಚಿವ ಯು.ಟಿ. ಖಾದರ್ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಗುರಿಂಗಾನ ರಸ್ತೆಯಲ್ಲಿ ಹಲವು ವರ್ಷಗಳಿಂದ ಬೀದಿ ದೀಪಗಳ ಕೊರತೆಯಿದ್ದು, ಈ ಬಗ್ಗೆ ಪಂಚಾಯತ್ ಗೆ
ಹಲವು ಬಾರಿ ಮನವಿ ಮಾಡಿದ್ದರೂ ಬೇಡಿಕೆ ಈಡೇರಿಲ್ಲ ಎಂದು ಸ್ಥಳೀಯರು ಸಚಿವ ಯು.ಟಿ. ಖಾದರ್ ಹಾಗೂ ರಕ್ಷಿತ್ ಶಿವರಾಂ ಅವರ ಗಮನಕ್ಕೆ ತಂದರು.

ಸ್ಥಳೀಯರ ಸಮಸ್ಯೆಯನ್ನು ಆಲಿಸಿದ ಸಚಿವರು, ತಕ್ಷಣವೇ ಲಾಯಿಲ ಗ್ರಾಮ ಪಂಚಾಯತ್ ಪಿಡಿಒ ತಾರನಾಥ್ ಅವರಲ್ಲಿ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಇದೇ ವೇಳೆ ರಕ್ಷಿತ್ ಶಿವರಾಂ ಅವರು ಬೀದಿ ದೀಪಗಳನ್ನು ಒದಗಿಸುವುದಾಗಿ ಭರವಸೆ ನೀಡಿದರು.

ಸಚಿವರ ಸೂಚನೆಗೆ ತಕ್ಷಣ ಸ್ಪಂದಿಸಿದ ಲಾಯಿಲ ಗ್ರಾಮ ಪಂಚಾಯತ್ ಕಂಬಗಳಲ್ಲಿ ಎಚ್ ಟಿ ಲೈನ್ ಮಾತ್ರ ಇದ್ದು ಅದಕ್ಕೆ ಎಲ್ ಟಿ ವಿದ್ಯುತ್ ಲೈನ್ ಎಳೆದು ಗುರಿಂಗಾನ ರಸ್ತೆ ಬದಿ ಹೊಸ ಬೀದಿ ದೀಪಗಳನ್ನು ಅಳವಡಿಸಿದೆ. ಇದರಿಂದ ಹಲವು ವರ್ಷಗಳಿಂದ ಗ್ರಾಮಸ್ಥರು ಎದುರು ನೋಡುತ್ತಿದ್ದ ಬೇಡಿಕೆ ಈಡೇರಿದಂತಾಗಿದೆ.

ಬೀದಿ ದೀಪಗಳ ಕೊರತೆಯಿಂದ ರಾತ್ರಿ ವೇಳೆ ವಿದ್ಯಾರ್ಥಿಗಳು , ಮಹಿಳೆಯರು , ಸಾರ್ವಜನಿಕರು ಹಾಗೂ ವಾಹನ ಸವಾರರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದರು. ಇದೀಗ ಹೊಸ ದೀಪಗಳ ಅಳವಡಿಕೆಯಿಂದ ರಾತ್ರಿ ಸಂಚಾರಕ್ಕೆ ಅನುಕೂಲವಾಗುವುದರ ಜೊತೆಗೆ ಸಾರ್ವಜನಿಕರ ಸುರಕ್ಷತೆಯೂ ಹೆಚ್ಚಲಿದೆ.

Related posts

ಕೂಕ್ರಬೆಟ್ಟು ಶಾಲೆಯಲ್ಲಿ ನಾರಾವಿ ವಲಯ ಮಟ್ಟದ ವಾಲಿಬಾಲ್‌ ಪಂದ್ಯಾಟ: ಸಾವ್ಯ, ಅಂಡಿಂಜೆ ಶಾಲಾ ಮಕ್ಕಳು ಪ್ರಥಮ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ 27ನೇ ಆಲಂಕಾರು ಶಾಖೆ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಓಡೀಲು 36ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿಯ ಷಷ್ಠಿ ಮಹೋತ್ಸವ: ಸ್ವರ್ಣ ಅಟ್ಟೆ ಪ್ರಭಾವಳಿ ಸಮರ್ಪಣೆ

Suddi Udaya

ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ-2026ರ ಸಮಾರೋಪ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಸ್ಥಾನಗಳಲ್ಲೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಜಯಭೇರಿ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya
error: Content is protected !!