24.2 C
ಪುತ್ತೂರು, ಬೆಳ್ತಂಗಡಿ
September 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಗ್ನಿಪಥ್ , ಪೊಲೀಸ್, ವಾಚರ್ ಹುದ್ದೆಯ ನಿರೀಕ್ಷೆಯಲ್ಲಿರೋ ಅಭ್ಯರ್ಥಿಗಳಿಗೆ ವಿದ್ಯಾಮಾತಾದಿಂದ ಉಚಿತ ಫಿಸಿಕಲ್ ಫಿಟ್ನೆಸ್ ತರಬೇತಿ ಆಯೋಜನೆ

ಪುತ್ತೂರು: ಸೇನಾ ನೇಮಕಾತಿಗಳು ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರತಿಷ್ಠಿತ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಯು ಅಗ್ನಿಪಥ್, ಪೊಲೀಸ್ ಕಾನ್ಸ್ಟೇಬಲ್ (PC) ಮತ್ತು ಅರಣ್ಯ ಇಲಾಖೆಯ ವಾಚರ್ ಹುದ್ದೆಗಳ ನೇಮಕಾತಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಉಚಿತ ದೈಹಿಕ ಸಾಮರ್ಥ್ಯ/ಫಿಟ್ನೆಸ್ ತರಬೇತಿಯನ್ನು ಪ್ರಾರಂಭಿಸಿದ್ದು ,
ನೇಮಕಾತಿ ಪ್ರಕ್ರಿಯೆಯ ದೈಹಿಕ ಪರೀಕ್ಷೆಗೆ ಪೂರ್ವ ತಯಾರಿ ನಡೆಸುತ್ತಿರುವವರು ಹಾಗೂ ಭವಿಷ್ಯದ ಸಶಸ್ತ್ರ ಪಡೆಗಳ ನೇಮಕಾತಿಗೆ ಸಿದ್ಧರಾಗುತ್ತಿರುವ ಅಭ್ಯರ್ಥಿಗಳು ಈ ತರಬೇತಿಯ ಸದುಪಯೋಗ ಪಡೆದುಕೊಳ್ಳಬಹುದು.

ತರಬೇತಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಉಚಿತ ವಸತಿ ಸೌಲಭ್ಯವನ್ನು ಕಲ್ಪಿಸಲಾಗಿದೆ. ಕಾಲೇಜು ವಿದ್ಯಾರ್ಥಿಗಳು ಮತ್ತು ಉದ್ಯೋಗ ಆಕಾಂಕ್ಷಿಗಳ ಅನುಕೂಲಕ್ಕಾಗಿ ಪ್ರತಿದಿನ ಬೆಳಿಗ್ಗೆ, ಸಾಯಂಕಾಲ ಅಥವಾ ಪ್ರತಿ ಭಾನುವಾರ ಬೆಳಿಗ್ಗೆ ನುರಿತ ತರಬೇತುದಾರರ ತಂಡದಿಂದ ವಿಶೇಷ ತರಬೇತಿ ನೀಡಲಾಗುತ್ತದೆ. ಬೆಳಿಗ್ಗೆ ತರಬೇತಿ ಮುಗಿಸಿಕೊಂಡು ಕಾಲೇಜಿಗೆ ಅಥವಾ ಉದ್ಯೋಗಕ್ಕೆ ತೆರಳಿ ಸಂಜೆ ಬಂದು ತರಬೇತಿಯಲ್ಲಿ ಪಾಲ್ಗೊಂಡು ವಸತಿ ವ್ಯವಸ್ಥೆಯನ್ನು ಉಪಯೋಗ ಮಾಡಿಕೊಳ್ಳಬಹುದು.

ಸಂಸ್ಥೆಯ ಸಾಧನೆ: ವಿದ್ಯಾಮಾತಾ ಅಕಾಡೆಮಿ ಮೂಲಕ ಕಳೆದ 4 ವರ್ಷಗಳಿಂದ 64ಕ್ಕೂ ಅಧಿಕ ಅಭ್ಯರ್ಥಿಗಳು ಸೇನಾ ಪಡೆ/ ಅರೆಸೇನಾ ಪಡೆ / ಪೊಲೀಸ್ /ಅರಣ್ಯ ನೇಮಕಾತಿಗಳಿಗೆ ಆಯ್ಕೆಯಾಗಿ ಯಶಸ್ಸು ಕಂಡಿದ್ದಾರೆ.


ನೋಂದಣಿ ಮತ್ತು ಸಂಪರ್ಕ ಮಾಹಿತಿ:
ಅರ್ಜಿ ಸಲ್ಲಿಸಿರುವ, ಈಗಾಗಲೇ ಪರೀಕ್ಷೆ ಬರೆದಿರುವ ಅಥವಾ ತರಬೇತಿ ಪಡೆಯಲು ಇಚ್ಛಿಸುವ ಆಸಕ್ತ ಅಭ್ಯರ್ಥಿಗಳು ಪುತ್ತೂರಿನ ಎಪಿಎಂಸಿ ರಸ್ತೆಯಲ್ಲಿರುವ ವಿದ್ಯಾಮಾತಾ ಅಕಾಡೆಮಿಯ ಕಚೇರಿಗೆ ಖುದ್ದಾಗಿ ಭೇಟಿ ನೀಡಿ ಹೆಸರು ನೋಂದಾಯಿಸಿಕೊಳ್ಳಬಹುದು. ಮಾಹಿತಿಗಾಗಿ ಕಚೇರಿ ಮೊಬೈಲ್ ಸಂಖ್ಯೆ 9620468869 ಸಂಪರ್ಕಿಸಬಹುದು.

Related posts

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಶಿರ್ಲಾಲಿನ ಶಾಲ್ವಿ ಜೈನ್

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರ್ ಜಿಲ್ಲಾ ಈಜು ಸ್ಪರ್ಧೆ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯ ಪ.ಪೂ. ವಿಭಾಗದಲ್ಲಿ “ಹೂಡಿಕೆಯ ವಿವಿಧ ಅವಕಾಶ” ಗಳ ಕುರಿತು ಕಾರ್ಯಾಗಾರ

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಕಂಬಳ ಕ್ಷೇತ್ರದಲ್ಲಿ ಸಾಧನೆಗೈದ ಕಿಂಗ್ ತಾಟೆ ಕೋಣಕ್ಕೆ ಸನ್ಮಾನ ಹಾಗೂ ಅಸಕ್ತರಿಗೆ ಅಕ್ಕಿ, ಧನಸಹಾಯ ವಿತರಣೆ

Suddi Udaya

ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರಿಗೆ ಗೌರವಾರ್ಪಣೆ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!