23 C
ಪುತ್ತೂರು, ಬೆಳ್ತಂಗಡಿ
September 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆನೆ ಹಾವಳಿ ನಿಯಂತ್ರಣಕ್ಕೆ ತುರ್ತು ಕ್ರಮ ಕೈಗೊಳ್ಳುವಂತೆ ಜಯರಾಮ ನೆಲ್ಲಿತ್ತಾಯ ರವರಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆನೆ ಹಾವಳಿ ಮಿತಿ ಮೀರುತ್ತಿದ್ದು, ಕೃಷಿ ಬೆಳೆಗಳಿಗೆ ವ್ಯಾಪಕ ಹಾನಿಯಾಗುವುದರ ಜೊತೆಗೆ ಗ್ರಾಮೀಣ ಪ್ರದೇಶದ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನಲೆಯಲ್ಲಿ ಆನೆ ಹಾವಳಿ ನಿಯಂತ್ರಣಕ್ಕೆ ತುರ್ತು ಕ್ರಮ ಕೈಗೊಳ್ಳುವಂತೆ ಪರಿಸರ ಕಾರ್ಯಕರ್ತ ಬಿ. ಜಯರಾಮ ನೆಲ್ಲಿತ್ತಾಯ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಆನೆಗಳ ಸಂಚಾರದಿಂದ ರಾತ್ರಿ ವೇಳೆ ವಾಹನಗಳ ಓಡಾಟಕ್ಕೂ ತೊಂದರೆಯಾಗುತ್ತಿದ್ದು, ಪ್ರಯಾಣಿಕರು ಆತಂಕದಿಂದ ಸಂಚರಿಸುವಂತಾಗಿದೆ. ಹಲವೆಡೆ ಕಾಡಂಚಿನ ಗ್ರಾಮಗಳಲ್ಲಿ ಜನಸಾಮಾನ್ಯರು ರಾತ್ರಿ ಹಾಗೂ ಮುಂಜಾನೆ ಸಂಚರಿಸಲು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಕಾಡಿನಂಚಿನಲ್ಲಿ ವಾಸಿಸುವ ಕುಟುಂಬಗಳು ವಿದ್ಯುತ್ ಬೆಳಕಿನ ವ್ಯವಸ್ಥೆಯ ಕೊರತೆಯಿಂದಾಗಿ ರಾತ್ರಿ ಸಮಯದಲ್ಲಿ ಭಯದಲ್ಲೇ ದಿನ ಕಳೆಯುವಂತಾಗಿದೆ. ವಿದ್ಯಾರ್ಥಿಗಳು ಕೂಡ ಆನೆಗಳ ಭೀತಿಯಿಂದ ಪ್ರತಿನಿತ್ಯ ಶಾಲೆಗೆ ತೆರಳಲು ಆತಂಕಪಡುವ ಪರಿಸ್ಥಿತಿ ಎದುರಾಗಿದೆ. ಆನೆಗಳ ಹಾವಳಿಯಿಂದ ಕೃಷಿ ಬೆಳೆಗಳಿಗೆ ಭಾರೀ ಪ್ರಮಾಣದಲ್ಲಿ ಹಾನಿಯಾಗುತ್ತಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಪ್ರಸಕ್ತ ಸಾಲಿನಲ್ಲಿ ಆನೆ ಹಾವಳಿಯ ತೀವ್ರತೆ ಹೆಚ್ಚಾಗಿದ್ದು, ಪರಿಸ್ಥಿತಿಯ ಗಂಭೀರತೆಯನ್ನು ಪರಿಗಣಿಸಿ ಜಿಲ್ಲಾಡಳಿತ ತಕ್ಷಣ ಕ್ರಮ ಕೈಗೊಳ್ಳಬೇಕು. ಜಿಲ್ಲಾಧಿಕಾರಿಗಳು ಜನಪ್ರತಿನಿಧಿಗಳು ಹಾಗೂ ಜಿಲ್ಲೆಯ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ಕರೆದು, ಆನೆ ಹಾವಳಿ ನಿಯಂತ್ರಣಕ್ಕೆ ಶಾಶ್ವತ ಹಾಗೂ ಪರಿಣಾಮಕಾರಿ ಪರಿಹಾರ ರೂಪಿಸಬೇಕು ಎಂದು ಬಿ. ಜಯರಾಮ ನೆಲ್ಲಿತ್ತಾಯ ಆಗ್ರಹಿಸಿದ್ದಾರೆ.

Related posts

ಬಂಟರ ಮಹಿಳಾ ವಿಭಾಗದಿಂದ “ಸ್ಪರ್ಶ” ಹೆಣ್ಣು ಮಕ್ಕಳ ಜಾಗೃತಿ ವಿಶೇಷ ಕಾರ್ಯಕ್ರಮ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ ಆರಾಧನಾ ಮಹೋತ್ಸವದ ಪೂರ್ವಭಾವಿ ಸಭೆ

Suddi Udaya

ಮೂಡುಕೋಡಿಯಲ್ಲಿ ಕಾರು ಮತ್ತು ಪಿಕಪ್ ನಡುವೆ ಡಿಕ್ಕಿ, ಗಾಯ

Suddi Udaya

ಸೌತಡ್ಕ ಶ್ರೀ ಮಹಾ ಗಣಪತಿ ಕ್ಷೇತ್ರಕ್ಕೆ ನಟ ರಿಷಬ್ ಶೆಟ್ಟಿ ಭೇಟಿ

Suddi Udaya

ಯೂತ್ ನ್ಯಾಷನಲ್ ವಾಲಿಬಾಲ್ ಚಾಂಪಿಯನ್‌ಶಿಪ್‌: ಎಸ್.ಡಿ.ಎಂ ಮನ್ವಿತ್ ರೈಗೆ ಕಂಚಿನ ಪದಕ

Suddi Udaya

ಕಾಶಿಪಟ್ಣ ಗ್ರಾಮ ಪಂಚಾಯತ್ ಪ್ರಥಮ ಹಂತದ ಗ್ರಾಮಸಭೆ, ವಿವಿಧ ಇಲಾಖಾಧಿಕಾರಿಗಳಿಂದ ಇಲಾಖಾ ಮಾಹಿತಿ

Suddi Udaya
error: Content is protected !!