23.1 C
ಪುತ್ತೂರು, ಬೆಳ್ತಂಗಡಿ
September 25, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ನೀರಚಿಲುಮೆ ಬಳಿ ಕೆಎಸ್‌ ಆರ್ ಟಿ ಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರ ಮೃತ್ಯು, ಸಹಸವಾರ ಗಾಯ

ಉಜಿರೆ: ಇಲ್ಲಿಯ ನೀರಚಿಲುಮೆ ಬಳಿ ಕೆಎಸ್‌ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟ ಘಟನೆ ಇಂದು (ಆ.11) ಬೆಳಗ್ಗೆ ನಡೆದಿದೆ.

ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕೆಎಸ್‌ಆರ್ಟಿಸಿ ಬಸ್ ಹಾಗೂ ಎದುರಿನಿಂದ ಬರುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

ಬೈಕ್ ಸಂಪೂರ್ಣ ನುಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಸನತ್ (30) ಅವರನ್ನು ತಕ್ಷಣ ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಮಡಂತ್ಯಾರು, ಪಾರೆಂಕಿ ಪಾಂಗಳ ನಿವಾಸಿ ಬಾಬು ಕುಲಾಲ್ ಅವರ ಪುತ್ರ ಎಂದು ಗುರುತಿಸಲಾಗಿದೆ.

ಬೈಕ್‌ನಲ್ಲಿ ಸಹಸವಾರ ಭರತ್ ಬಳ್ಳಮಂಜ ಇವರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಕರಾಯ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಭಜನಾ ತರಬೇತಿ ಕಾರ್ಯಾಗಾರ

Suddi Udaya

ಬುರುಡೆ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಆಗಸ್ಟ್ ತಿಂಗಳಿನಲ್ಲಿ ನಡೆಯಲಿರುವ NET-2024 ಮರು ಪರೀಕ್ಷೆಗೆ ವಿದ್ಯಾಮಾತಾ ಅಕಾಡೆಮಿಯಿಂದ ಕ್ರ್ಯಾಶ್ ಕೋರ್ಸ್: ಜು.10 ರಿಂದ ಆನ್ಲೈನ್ ತರಗತಿಗಳು ಪ್ರಾರಂಭ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅ.ಹಿ.ಪ್ರಾ. ಶಾಲಾ ಪೋಷಕರ ಸಭೆ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಶಾಲೆಯಲ್ಲಿ ಆಟಿದ ಗಮ್ಮತ್

Suddi Udaya

ಸಂಜೀವ ಪೂಜಾರಿ ನಾಲ್ಕೂರು ನಿಧನ

Suddi Udaya
error: Content is protected !!