23 C
ಪುತ್ತೂರು, ಬೆಳ್ತಂಗಡಿ
September 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಏಳು ವರ್ಷದ ಎಕ್ಸೆಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

ಗುರುವಾಯನಕೆರೆ: ಎಕ್ಸೆಲ್ ಟೆಕ್ನೋ ಸ್ಕೂಲ್‌ನ ಎರಡನೇ ತರಗತಿ ವಿದ್ಯಾರ್ಥಿ,ಏಳು ವರ್ಷದ ಬೆನಕ ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದು ಗಮನಾರ್ಹ ಸಾಧನೆ ಮಾಡಿದ್ದಾನೆ.

ಹಾಸನದ ಮಿಲೇನಿಯಂ ವರ್ಲ್ಡ್ ಸ್ಕೂಲ್‌ನಲ್ಲಿ ನಡೆದ ಸೆಕೆಂಡ್ ಇನ್ವಿಟೇಷನಲ್ ನಾನ್ ಮೆಡಲಿಸ್ಟ್ ಈಜು ಸ್ಪರ್ಧೆಯಲ್ಲಿ ಬೆನಕ ಭಾಗವಹಿಸಿ, 25 ಮೀಟರ್ ಬ್ರೆಸ್ಟ್‌ಸ್ಟ್ರೋಕ್ ವಿಭಾಗವನ್ನು ಕೇವಲ 25.50 ಸೆಕೆಂಡುಗಳಲ್ಲಿ ಪೂರ್ಣಗೊಳಿಸಿ ಕಂಚಿನ ಪದಕ ಪಡೆದುಕೊಂಡಿದ್ದಾನೆ.

ಪದ್ಮನಾಭ ಹಾಗೂ ಶ್ರೀಮತಿ ಅಶ್ವಿನಿ ದಂಪತಿಯ ಪುತ್ರನಾಗಿರುವ ಬೆನಕನ ಈ ಸಾಧನೆಗೆ ಎಕ್ಸೆಲ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್,ಶಾಲೆಯ ಪ್ರಾಂಶುಪಾಲರಾದ ಸುಮಿತ್ರಾ ಹಾಗೂ ಶಿಕ್ಷಕರು ಅಭಿನಂದನೆ ಸಲ್ಲಿಸಿ ಸಂತಸ ವ್ಯಕ್ತಪಡಿಸಿದ್ದಾರೆ.

Related posts

ಜು.16- ಸೆ.16 : ಧರ್ಮಸ್ಥಳದಲ್ಲಿ 54ನೇ ವರ್ಷದ ಪುರಾಣ ವಾಚನ-ಪ್ರವಚನ

Suddi Udaya

ನ.24: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ಮಹಿಳಾ ಹಾಗೂ ಯುವ ಬಂಟರ ವಿಭಾಗದ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರಾಗಿ ಗಾಯತ್ರಿ ಪಿ ಅಧಿಕಾರ ಸ್ವೀಕಾರ

Suddi Udaya

ದಯಾ ವಿಶೇಷ ಶಾಲೆಯಲ್ಲಿ ದಿ.ಕೆ. ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬ ಆಚರಣೆ

Suddi Udaya

ಸುರತ್ಕಲ್ ಮುಕ್ಕದಲ್ಲಿ ಕಾರು ಡಿಕ್ಕಿ: ಧರ್ಮಸ್ಥಳ ಯಕ್ಷಗಾನ ಮೇಳದ ಸಿಬ್ಬಂದಿ ಜೀವನ್ ಕುಮಾರ್ ಸಾವು

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಭೇಟಿ ನೀಡಿ ಮಹಾಮಂಡಲೇಶ್ವರ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಯವರ ಆಶೀರ್ವಾದ ಪಡೆದ ವಿಧಾನಪರಿಷತ್ ಮಾಜಿ ಶಾಸಕ,ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್ ಕುಮಾರ್ ದಂಪತಿ

Suddi Udaya
error: Content is protected !!