30.7 C
ಪುತ್ತೂರು, ಬೆಳ್ತಂಗಡಿ
September 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ.18 ರ ದೇಶವ್ಯಾಪಿ ಕಾರ್ಮಿಕ ಪ್ರತಿಭಟನೆಗೆ ಬೆಳ್ತಂಗಡಿ ತಾಲೂಕಿನಿಂದ ಬೆಂಬಲ

ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ (BMS) ವತಿಯಿಂದ ಕಾರ್ಮಿಕರ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಆಗಸ್ಟ್ 18ರಂದು ದೇಶವ್ಯಾಪಿ ಪ್ರತಿಭಟನೆ ನಡೆಯಲಿದ್ದು, ಈ ಪ್ರತಿಭಟನೆಯಲ್ಲಿ ಬೆಳ್ತಂಗಡಿ ತಾಲೂಕಿನಿಂದ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ಭಾಗವಹಿಸಲಿದ್ದಾರೆ ಎಂದು ಭಾರತೀಯ ಮಜ್ದೂರ್ ಸಂಘದ ಬೆಳ್ತಂಗಡಿ ತಾಲೂಕು ಅಧ್ಯಕ್ಷರಾದ ಉದಯ ಬಿ.ಕೆ. ತಿಳಿಸಿದ್ದಾರೆ.

ತಾಲೂಕಿನ ಕಟ್ಟಡ ಕಾರ್ಮಿಕರು, ರಬ್ಬರ್ ಹಾಗೂ ಕೃಷಿ ಕಾರ್ಮಿಕರು, ಆಟೋ–ಟ್ಯಾಕ್ಸಿ ಚಾಲಕರು, ಕೈಗಾರಿಕಾ ಕಾರ್ಮಿಕರು, ಹೋಟೆಲ್ ಕಾರ್ಮಿಕರು, ಗುತ್ತಿಗೆ ಹಾಗೂ ಅಸಂಘಟಿತ ಕಾರ್ಮಿಕರು ಸೇರಿದಂತೆ ವಿವಿಧ ವಲಯಗಳ ಕಾರ್ಮಿಕರು ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ಈ ಹೋರಾಟದಲ್ಲಿ ಭಾಗವಹಿಸುವ ಅಗತ್ಯವಿದೆ.

ನ್ಯಾಯಯುತ ವೇತನ, ಉದ್ಯೋಗ ಭದ್ರತೆ, ಸಾಮಾಜಿಕ ಭದ್ರತೆ, ಪಿಂಚಣಿ, ಆರೋಗ್ಯ ರಕ್ಷಣೆ ಹಾಗೂ ಸುರಕ್ಷಿತ ಕೆಲಸದ ವಾತಾವರಣ ಸೇರಿದಂತೆ ಕಾರ್ಮಿಕರ ಬದುಕಿಗೆ ಸಂಬಂಧಿಸಿದ ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ನಡೆಯುತ್ತಿರುವ ಈ ಹೋರಾಟಕ್ಕೆ ಬೆಳ್ತಂಗಡಿ ತಾಲೂಕಿನ ಎಲ್ಲಾ ಕಾರ್ಮಿಕರು ಪಕ್ಷ–ಪಂಥದ ಭೇದವಿಲ್ಲದೆ ಒಗ್ಗಟ್ಟಿನಿಂದ ಬೆಂಬಲ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಆಗಸ್ಟ್ 18ರಂದು ನಡೆಯುವ ಪ್ರತಿಭಟನೆಗೆ ಬೆಳ್ತಂಗಡಿ ತಾಲೂಕಿನ ಪ್ರತಿಯೊಂದು ಕಾರ್ಮಿಕ ವಲಯದಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕ ಬಂಧುಗಳು ಭಾಗವಹಿಸಿ, ನಮ್ಮ ತಾಲೂಕಿನ ಕಾರ್ಮಿಕ ಶಕ್ತಿಯನ್ನು ಪ್ರದರ್ಶಿಸುವ ಮೂಲಕ ಹೋರಾಟಕ್ಕೆ ಬಲ ತುಂಬಬೇಕು ಎಂದು ಉದಯ ಬಿ.ಕೆ. ಕರೆ ನೀಡಿದ್ದಾರೆ.

ಕಾರ್ಮಿಕರ ಸಮಸ್ಯೆ ನಮ್ಮೆಲ್ಲರ ಸಮಸ್ಯೆ. ಕಾರ್ಮಿಕರ ಹಕ್ಕುಗಳಿಗಾಗಿ ನಡೆಯುವ ಈ ಹೋರಾಟದಲ್ಲಿ ಪ್ರತಿಯೊಬ್ಬ ಕಾರ್ಮಿಕನ ಧ್ವನಿಯೂ ಸೇರಬೇಕು. ಬೆಳ್ತಂಗಡಿ ತಾಲೂಕಿನಿಂದ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಟನೆಯನ್ನು ಯಶಸ್ವಿಗೊಳಿಸೋಣ ಎಂದು ಉದಯ ಬಿಕೆ ತಿಳಿಸಿದ್ದಾರೆ.

Related posts

ಅಕ್ರಮ ಮರಳುಗಾರಿಕೆ: ಸರಕಾರಿ ಜಾಗದಲ್ಲಿ ದಾಸ್ತಾನು ಇರಿಸಿದ ಮರಳನ್ನು ವಶಪಡಿಸಿಕೊಂಡ ಪೊಲೀಸರು

Suddi Udaya

ಬೆಳ್ತಂಗಡಿ: ಟ್ರಾಫಿಕ್, ಆರ್.ಟಿ.ಒ. ನಿಂದ ಶಾಲಾ ವಾಹನಗಳ ತಪಸಾಣೆ

Suddi Udaya

ಕಲ್ಮಂಜ: ಪುರೋಹಿತ ಶ್ರೀಕಾಂತ ಭಿಡೆ ನಿಧನ

Suddi Udaya

ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ನಿಧನಕ್ಕೆ ಧರ್ಮಸ್ಥಳದ ಡಾ. ಡಿ.ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಉಜಿರೆಯ ಬೆನಕ ಹೆಲ್ತ್ ಸೆಂಟರ್ ನಲ್ಲಿ ಅಂತರಾಷ್ಟ್ರೀಯ ದಾದಿಯರ ದಿನಾಚರಣೆ

Suddi Udaya

ದಿ ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಭಾರತದ ಟಾಪ್ 100 ಜ್ಯುವೆಲ್ಲರಿ ಪಟ್ಟಿಯಲ್ಲಿ ಪುತ್ತೂರಿನ “ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್” ಗೆ ಸ್ಥಾನ

Suddi Udaya
error: Content is protected !!