30.7 C
ಪುತ್ತೂರು, ಬೆಳ್ತಂಗಡಿ
September 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್‌ಗೆ ‘ಕೃಷ್ಣೋತ್ಸವ ಪ್ರಶಸ್ತಿ’ ಗೌರವ

ಮೂಡುಬಿದಿರೆ: ಮೂಡುಬಿದಿರೆ ಗೋಪಾಲಕೃಷ್ಣ ದೇವಸ್ಥಾನದ 110ನೇ ವರ್ಷದ ಮೊಸರು ಕುಡಿಕೆ ಉತ್ಸವದ ಅಂಗವಾಗಿ ಜವನೆರ್ ಬೆದ್ರ ಫೌಂಡೇಶನ್ ಆಯೋಜಿಸಿರುವ ‘ಬೆದ್ರದ ಕೃಷ್ಣೋತ್ಸವ 2026’ ಕಾರ್ಯಕ್ರಮದಲ್ಲಿ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಅವರಿಗೆ ಪ್ರತಿಷ್ಠಿತ ‘ಕೃಷ್ಣೋತ್ಸವ ಪ್ರಶಸ್ತಿ’ ನೀಡಿ ಗೌರವಿಸಲಾಗುತ್ತಿದೆ.

ಶಿಕ್ಷಣ ಹಾಗೂ ಸಮಾಜ ಸೇವೆಯಲ್ಲಿ ಯುವರಾಜ್ ಜೈನ್ ಅವರ ಅವಿರತ ಕೊಡುಗೆಗೆ ಸಂದ ಮತ್ತೊಂದು ಮನ್ನಣೆಯಾಗಿದೆ. ಸೆ. 5ರಂದು ಮೂಡುಬಿದಿರೆಯ ಕೆ. ಅಮರನಾಥ ಶೆಟ್ಟಿ ವೃತ್ತದ ಬಳಿಯ ವೇಣೂರು ಕೃಷ್ಣಯ್ಯ ವೇದಿಕೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಬೆದ್ರದ ಕೃಷ್ಣೋತ್ಸವದ ವಿವಿಧ ಸ್ಪರ್ಧೆಗಳ ಉದ್ಘಾಟನೆ, ಸಭಾ ಕಾರ್ಯಕ್ರಮ ಹಾಗೂ ‘ಅಷ್ಟಮಿದ ಪಿಲಿಗೊಬ್ಬು’ ಸಾಂಸ್ಕೃತಿಕ ಕಾರ್ಯಕ್ರಮವೂ ನಡೆಯಲಿದೆ.

ಶಿಕ್ಷಣ ಹಾಗೂ ಸಮಾಜಸೇವಾ ಕ್ಷೇತ್ರದಲ್ಲಿ ಯುವರಾಜ್ ಜೈನ್ ಅವರು ಸಲ್ಲಿಸಿದ ಅನನ್ಯ ಸೇವೆಗಾಗಿ ಈ ಹಿಂದೆಯೂ ಹಲವಾರು ರಾಷ್ಟ್ರೀಯ, ಅಂತರರಾಷ್ಟ್ರೀಯ ಹಾಗೂ ರಾಜ್ಯಮಟ್ಟದ ಪ್ರತಿಷ್ಠಿತ ಪ್ರಶಸ್ತಿಗಳು ಅವರನ್ನು ಅರಸಿ ಬಂದಿವೆ.

Related posts

ಮಚ್ಚಿನದಲ್ಲಿ ಪಾಲು ಬಿದ್ದ ಹಿರಿಯ ಆರೋಗ್ಯ ಸಹಾಯಕಿ ವಸತಿಗೃಹ: ಸ್ವತ್ತುಗಳು ಕಳ್ಳರ ಪಾಲು

Suddi Udaya

ಲೋಕೋಪಯೋಗಿ ಇಲಾಖೆಯಿಂದ ಅಳವಡಿಸಿದ ನಾಮಫಲಕದಲ್ಲಿ ಯಡವಟ್ಟು: ಕೂಡಲೇ ಸರಿಪಡಿಸುವಂತೆ ಆಗ್ರಹ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿಗೆ ತಾ.ಪಂ ಇಓ ಭೇಟಿ, ಸ್ಥಳ ಪರಿಶೀಲನೆ

Suddi Udaya

ಅಕ್ರಮ ಕೋಳಿ ಅಂಕ- ಧರ್ಮಸ್ಥಳ ಪೊಲೀಸರ ದಾಳಿ: ಏಳು ಆರೋಪಿಗಳ ಬಂಧನ

Suddi Udaya

ಬೆಳ್ತಂಗಡಿ ಜೆ.ಎಫ್.ಡಿ ಶಂಕರ್ ರಾವ್ ರವರಿಗೆ ಪ್ರೇರಣಾ ಪುರಸ್ಕಾರ-2025

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!