27.1 C
ಪುತ್ತೂರು, ಬೆಳ್ತಂಗಡಿ
September 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಕಬ್ , ಬುಲ್ ಬುಲ್ ತೃತೀಯ ಚರಣ ಮತ್ತು ಸುವರ್ಣ ಗರಿ ಪರೀಕ್ಷೆ

ಬೆಳ್ತಂಗಡಿ: ಭಾರತ್ ಸೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಬೆಳ್ತಂಗಡಿ ಸ್ಥಳೀಯ ಸಂಸ್ಥೆ, ಹಾಗೂ ವಾಣಿ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ಆ.11 ರಂದು 2026-27 ನೇ ಸಾಲಿನ ಜಿಲ್ಲಾ ಮಟ್ಟದ ಎರಡನೇ ಹಂತದ ತೃತೀಯ ಚರಣ ಕಬ್ ಮತ್ತು ಸುವರ್ಣ ಗರಿ ಬುಲ್ ಬುಲ್ ಪರೀಕ್ಷಾ ಶಿಬಿರದ ಯಶಸ್ವಿಯಾಗಿ ನಡೆಯಿತು.

ಅಧ್ಯಕ್ಷತೆಯನ್ನು ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪಿ ಕುಶಾಲಪ್ಪ ಗೌಡ ಇವರು ವಹಿಸಿಕೊಂಡು ಶುಭ ಹಾರೈಸಿದರು.
ಶಿಬಿರವನ್ನು ವಾಣಿ ಶಿಕ್ಷಣ ಸಂಸ್ಥೆಯ ನಿರ್ದೇಶಕ ಕೃಷ್ಣಪ್ಪ ಗೌಡ ಸವಣಾಲು ಇವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.


ಮುಖ್ಯ ಅತಿಥಿಗಳಾಗಿ ವಾಣಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರು ವಿಷ್ಣು ಪ್ರಕಾಶ್ ಎಂ , ವಾಣಿ ಶಿಕ್ಷಣ ಸಂಸ್ಥೆ ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ರಾಜ್ಯ ಸಹಾಯಕ ಸಂಘಟನಾ ಆಯುಕ್ತರು ಭರತ್ ರಾಜ್ ಕೆ , ಬೆಳ್ತಂಗಡಿ ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಪ್ರಮೀಳಾ , ಕಬ್ ವಿಭಾಗದ ನಾಯಕರಾಗಿ ಶ್ರೀಮತಿ ಭಾರತಿ ನಾಯಕ್ ಎಲ್.ಟಿ ಮತ್ತು ಶ್ರೀಮತಿ ಸಂಧ್ಯಾ ALT ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿನ ದೈಹಿಕ ಶಿಕ್ಷಣ ಪರಿವಿಕ್ಷಣಾಧಿಕಾರಿ ಪ್ರಭಾಕರ್ ಭೇಟಿ ನೀಡಿ ಶಿಬಿರಕ್ಕೆ ಶುಭ ಹಾರೈಸಿದರು.
ಒಟ್ಟು 70 ಕಬ್ ಮತ್ತು ಒಟ್ಟು 109 ಬುಲ್ ಬುಲ್ಸ್ ಒಟ್ಟು 179 ವಿದ್ಯಾರ್ಥಿಗಳು ಪರೀಕ್ಷಾ ಶಿಬಿರದಲ್ಲಿ ಭಾಗವಹಿಸಿದರು.
ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಕೆ. ಸ್ವಾಗತಿಸಿದರು.
ವಾಣಿ ಆಂಗ್ಲ ಮಾಧ್ಯಮ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಹಾಸಿನಿ ಎ ವಂದಾನಾರ್ಪಣಗೈದರು, ಶಿಕ್ಷಕಿ, ಕಬ್ ಮಾಸ್ಟರ್ ಶ್ರೀಮತಿ ವಿಜೇತಾ ಕೆ ಎನ್ ಕಾರ್ಯಕ್ರಮ ನಿರೂಪಿಸಿದರು. ಸೌಟ್ಸ್ ಮತ್ತು ಗೈಡ್ಸ್ ಹಾಗೂ ಕಬ್, ಬುಲ್ ಬುಲ್ ಶಿಕ್ಷಕರು ಮತ್ತು ಸೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಸಂಪೂರ್ಣ ಸಹಕಾರವನ್ನು ನೀಡಿದರು.

Related posts

ಹಿರಿಯ ಲೇಖಕ ಪ. ರಾಮಕೃಷ್ಣ ಶಾಸ್ತ್ರಿ ರವರು ಮನುಶ್ರೀ ದತ್ತಿ ಪ್ರಶಸ್ತಿಗೆ ಆಯ್ಕೆ

Suddi Udaya

ಗುಡ್ ಫ್ಯೂಚರ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಮೇ. 13 ವಿಧಾನಸಭಾ ಚುನಾವಣಾ ಮತ ಎಣಿಕೆ: ದ.ಕ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಬೆಳ್ತಂಗಡಿ ಟೀಮ್ ನವಭಾರತ್ ವತಿಯಿಂದ ದಿ. ತುಷಾರ್. ಕೆ ಸ್ಮರಣಾರ್ಥ ರಕ್ತದಾನ ಶಿಬಿರ

Suddi Udaya

ಚಾರ್ಮಾಡಿ: ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿದ್ದ ಕಾಡಾನೆ ಸಾವು

Suddi Udaya

ಲಾಯಿಲ: ಬಜಕ್ಕಿರೆಸಾಲು ಬಳಿ ಚಿರತೆ ಓಡಾಟ

Suddi Udaya
error: Content is protected !!