30.7 C
ಪುತ್ತೂರು, ಬೆಳ್ತಂಗಡಿ
September 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು: ಗ್ರಾಮೀಣ ವಿದ್ಯಾರ್ಥಿಗಳ ಸಂಶೋಧನಾ ಮನೋಭಾವ ಬೆಳೆಸಿದ ‘ಕೋಡ್ ಕ್ರಾಫ್ಟ್ ವಿಜ್ಞಾನ ಮೇಳ’

ಶಿರ್ಲಾಲು: ವಿಜ್ಞಾನವನ್ನು ಕೇವಲ ಪಠ್ಯಪುಸ್ತಕಕ್ಕೆ ಸೀಮಿತಗೊಳಿಸದೆ, ಅದನ್ನು ಪ್ರಯೋಗ ಮತ್ತು ಸೃಜನಶೀಲತೆಯ ಮೂಲಕ ಕಲಿಯುವ ಅವಕಾಶ ಗ್ರಾಮೀಣ ವಿದ್ಯಾರ್ಥಿಗಳಿಗೆ ದೊರೆತಾಗ ಅವರಲ್ಲಿರುವ ಪ್ರತಿಭೆ ಮತ್ತಷ್ಟು ಬೆಳಕಿಗೆ ಬರುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಕಲ್ಪನೆ, ಕುತೂಹಲ ಹಾಗೂ ಸಂಶೋಧನಾ ಮನೋಭಾವನೆಗೆ ವೇದಿಕೆ ಕಲ್ಪಿಸಿದ ‘ಕೋಡ್ ಕ್ರಾಫ್ಟ್ ವಿಜ್ಞಾನ ಮೇಳ’ ವಿದ್ಯಾರ್ಥಿಗಳ ಪ್ರತಿಭಾ ಅನಾವರಣಕ್ಕೆ ಉತ್ತಮ ವೇದಿಕೆಯಾಯಿತು.

ಆಕಾಂಕ್ಷಾ ಚಾರಿಟೇಬಲ್ ಟ್ರಸ್ಟ್ ಹಾಗೂ ಕೋಡ್ ಕ್ರಾಫ್ಟ್ ಟೆಕ್ನಾಲಜೀಸ್ ಸಹಯೋಗದಲ್ಲಿ ಸ.ಉ.ಪ್ರಾ. ಶಾಲೆ ಶಿರ್ಲಾಲುನಲ್ಲಿ ಆ. 10ರಂದು ‘ಕೋಡ್ ಕ್ರಾಫ್ಟ್ ವಿಜ್ಞಾನ ಮೇಳ’ ನಡೆಯಿತು. ಮೇಳದಲ್ಲಿ ವಿದ್ಯಾರ್ಥಿಗಳು ವಿವಿಧ ವಿಜ್ಞಾನ ಮಾದರಿಗಳು ಹಾಗೂ ಪ್ರಯೋಗಗಳನ್ನು ಪ್ರದರ್ಶಿಸಿ, ತಮ್ಮಲ್ಲಿರುವ ಸೃಜನಶೀಲತೆ, ವೈಜ್ಞಾನಿಕ ಚಿಂತನೆ ಮತ್ತು ಸಮಸ್ಯೆ ಪರಿಹರಿಸುವ ಸಾಮರ್ಥ್ಯವನ್ನು ಅನಾವರಣಗೊಳಿಸಿದರು.

ಗ್ರಾಮೀಣ ವಿದ್ಯಾರ್ಥಿಗಳಿಗೆ ಇಂತಹ ವಿಜ್ಞಾನ ಮೇಳಗಳು ತಮ್ಮ ಸುತ್ತಮುತ್ತಲಿನ ಸಮಸ್ಯೆಗಳನ್ನು ವೈಜ್ಞಾನಿಕ ದೃಷ್ಟಿಕೋನದಿಂದ ಗಮನಿಸಿ, ಅವುಗಳಿಗೆ ಹೊಸ ಪರಿಹಾರಗಳನ್ನು ಕಂಡುಕೊಳ್ಳುವ ಸಂಶೋಧನಾ ಮನೋಭಾವನೆಯನ್ನು ಬೆಳೆಸಿಕೊಳ್ಳಲು ಉತ್ತಮ ವೇದಿಕೆಯಾಗಿವೆ. ವಿದ್ಯಾರ್ಥಿಗಳಲ್ಲಿ ಪ್ರಶ್ನಿಸುವ, ವಿಚಾರಿಸುವ, ಪ್ರಯೋಗಿಸುವ ಹಾಗೂ ಹೊಸತನವನ್ನು ಕಂಡುಕೊಳ್ಳುವ ಆಸಕ್ತಿಯನ್ನು ಇಂತಹ ಕಾರ್ಯಕ್ರಮಗಳು ಉತ್ತೇಜಿಸುತ್ತವೆ.
ಮೇಳದ ಮೂಲಕ ಗ್ರಾಮೀಣ ವಿದ್ಯಾರ್ಥಿಗಳಿಗೆ ವಿಜ್ಞಾನ ಮತ್ತು ತಂತ್ರಜ್ಞಾನದ ಕ್ಷೇತ್ರದಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಅವಕಾಶ ದೊರೆತಿದ್ದು, ಅವರ ಸೃಜನಶೀಲತೆ, ಆತ್ಮವಿಶ್ವಾಸ ಹಾಗೂ ಸಂಶೋಧನಾ ಮನೋಭಾವನೆ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿದೆ.

ಕಾರ್ಯಕ್ರಮದಲ್ಲಿ ಆಕಾಂಕ್ಷಾ ಚಾರಿಟೇಬಲ್ ಟ್ರಸ್ಟ್‌ನ ಕೋ-ಆರ್ಡಿನೇಟರ್ ಕೃಷ್ಣಪ್ರಸಾದ್, ನಿರ್ಣಾಯಕರಾದ ನಿಶಾಂತ್ ಹಾಗೂ ಕೀರ್ತನ್, ಎಸ್‌ಡಿಎಂಸಿ ಉಪಾಧ್ಯಕ್ಷರಾದ ಶ್ರೀಮತಿ ಅಕ್ಷತಾ ಹಾಗೂ ಶಾಲೆಯ ಶಿಕ್ಷಕ ವೃಂದದವರು ಭಾಗವಹಿಸಿದ್ದರು.

Related posts

ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡು ರಾಷ್ಟ್ರಮಟ್ಟದಲ್ಲಿ ಅರ್ಹತೆ ಪಡೆದ ಮರೋಡಿಯ ಸ್ವಸ್ತಿಕ್ ಪೂಜಾರಿ

Suddi Udaya

ಎ.12: ಬೆಳ್ತಂಗಡಿ ಟೀಮ್ ನವಭಾರತ್ ಆಶ್ರಯದಲ್ಲಿ ದಿ. ತುಷಾರ್. ಕೆ ಸ್ಮರಣಾರ್ಥ ರಕ್ತದಾನ ಶಿಬಿರ ಹಾಗೂ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಕುವೆಟ್ಟು ಮಹಾಶಕ್ತಿ ಕೇಂದ್ರದ ಕೊಯ್ಯೂರು ಶಕ್ತಿಕೇಂದ್ರದಲ್ಲಿ ನಮೋ ಯುವ ಚೌಪಲ್ 400 ಯೋಜನೆಗಳ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ಕಿಂಡರ್‌ಗಾರ್ಟನ್ ವಿಭಾಗದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪೂರ್ವ ಸಂಭ್ರಮ

Suddi Udaya

ಉಜಿರೆ: ಸೌರಭ ಆರ್ಕೇಡ್ ನಲ್ಲಿ ನೂತನ “ಸೆವೆನ್ತ್ ಹೆವೆನ್ (7th Heaven)” ಕೇಕ್ ಹೌಸ್ ಶುಭಾರಂಭ

Suddi Udaya

ಮೇಲಂತಬೆಟ್ಟು ಯುವಕ ಜಾಂಡೀಸ್ ನಿಂದ ನಿಧನ

Suddi Udaya
error: Content is protected !!