27.1 C
ಪುತ್ತೂರು, ಬೆಳ್ತಂಗಡಿ
September 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ : ವೇಣೂರು ನವಚೇತನ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಉಜಿರೆ: ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ವೇಣೂರಿನ ನವಚೇತನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿ ಶಾಲೆಗೆ ಕೀರ್ತಿ ತಂದಿದ್ದಾರೆ.

ಪ್ರಾಥಮಿಕ ಬಾಲಕಿಯರ 14 ವರ್ಷದೊಳಗಿನ (U -14) ವಿಭಾಗದಲ್ಲಿ ಆಧ್ಯಾ. ಹೆಚ್, ನಿರ್ವಿ, ಚಾರ್ವಿ, ಶ್ರೀರಾಧ್ಯ ಅವರನ್ನೊಳಗಂಡ ತಂಡವು ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದೆ. ಹಾಗೂ ಆಧ್ಯಾ,ಎಚ್ ಉತ್ತಮ ಆಟಗಾರ್ತಿ ಪ್ರಶಸ್ತಿ ಪಡೆದು ಅದೇ ರೀತಿ ಬಾಲಕರ 17 ವರ್ಷದೊಳಗಿನ (U -17) ವಿಭಾಗದಲ್ಲಿ ಶ್ರವನ್ ರಾಜ್, ಆಧಿತ್ಯ, ಹನೀನ್, ಸುಹೇಲ್ ಅವರನ್ನೊಳಗೊಂಡ ತಂಡವು ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದೆ. ಹಾಗೂ ಶ್ರವನ್ ರಾಜ್ ಉತ್ತಮ ಆಟಗಾರ ಪ್ರಶಸ್ತಿ ಪಡೆದು ಪ್ರಾರ್ಥಮಿಕ ವಿಭಾಗದ ಬಾಲಕಿಯರು ಮತ್ತು ಪ್ರೌಢ ಶಾಲೆ ವಿಭಾಗದ ಬಾಲಕರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ ಮತ್ತು ಮುಖ್ಯೋಪಾಧ್ಯಾಯಿನಿ ಅವರು ವಿದ್ಯಾರ್ಥಿಗಳನ್ನು ಅಭಿನಂದಿಸಿ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿಯೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದರು.

Related posts

ಅರಸಿನಮಕ್ಕಿ ಸ.ಪ್ರೌ. ಶಾಲೆ ಹಾಗೂ ಗ್ರಾಮ ಪಂಚಾಯತ್ ನ ಅರಿವು ಕೇಂದ್ರ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ

Suddi Udaya

ಚಾರ್ಮಾಡಿ ಘಾಟಿ: ಮರ ಧಾರಾಶಾಹಿ-ಸಂಚಾರ ಸ್ಥಗಿತ

Suddi Udaya

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದ ಕಾರ್ಯಕಾರಣಿ ಸಭೆ

Suddi Udaya

ಧರ್ಮಸ್ಥಳ: ನೇತ್ರಾವತಿ ಸೇತುವೆಯ ಕೆಳಗೆ ಅಪರಿಚಿತ ಶವ ಪತ್ತೆ

Suddi Udaya

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ವೇಣೂರು ಮಹಾಮಸ್ತಕಾಭಿಷೇಕ ಮಹೋತ್ಸವ- ಕಾರ್ಯಾಲಯ ಉದ್ಘಾಟನೆ, ವೆಬ್‌ಸೈಟ್ ಅನಾವರಣ

Suddi Udaya
error: Content is protected !!