23.8 C
ಪುತ್ತೂರು, ಬೆಳ್ತಂಗಡಿ
September 28, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ನ್ಯಾಯಾಲಯಕ್ಕೆ ಹಾಜರಾಗದ ವಾರೆಂಟ್ ಆರೋಪಿ ಬಂಧನ

ಬೆಳ್ತಂಗಡಿ: ಕಳೆದ ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ವಾರೆಂಟ್ ಆರೋಪಿಯನ್ನು ವೇಣೂರು ಪೊಲೀಸರು ಪುತ್ತೂರಿನ ದರ್ಬೆಯಲ್ಲಿ ಬಂಧಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ಅಕ್ರ 71/2008ರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ನ್ಯಾಯಾಲಯದ CC No.535/2016ರಲ್ಲಿ ಐಪಿಸಿ ಕಲಂ 457, 380 ರಡಿ ದಾಖಲಾದ ಕಳ್ಳತನ ಪ್ರಕರಣದಲ್ಲಿ ವಾರಂಟ್ ಜಾರಿಯಾಗಿತ್ತು. ಪ್ರಕರಣದ ವಾರೆಂಟ್ ಆರೋಪಿ ಸುಳ್ಯ ತಾಲೂಕಿನ ಐವತ್ತೋಕ್ಲು ಗ್ರಾಮದ ನೆಲ್ಲಿಕಟ್ಟೆ ಮನೆ ನಿವಾಸಿ ಆದಮ್ ಅವರ ಪುತ್ರ ಮಹಮ್ಮದ್ ಶರೀಪ್ (46) ಎಂಬಾತನನ್ನು ಆ.13 ರಂದು ಬಂಧಿಸಿದ್ದಾರೆ.

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿಣಿ ಸಿ.ಕೆ ಮತ್ತು ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕ ರವಿ ಬಿ.ಎಸ್. ಅವರ ಮಾರ್ಗದರ್ಶನದಲ್ಲಿ ವೇಣೂರು ಠಾಣಾ ಸಬ್ ಇನ್ಸ್‌ಪೆಕ್ಟರ್ ಅಕ್ಷಯ್ ಢವಗಿ ಅವರ ನೇತೃತ್ವದ ಸಿಬ್ಬಂದಿಗಳಾದ ಎಎಸ್ಐ ಬೆಣ್ಣಿಚನ್ ಮತ್ತು ಸಿಬ್ಬಂದಿ ಬಸವರಾಜ್ ಹಾಗೂ ಬೆಳ್ತಂಗಡಿ ಉಪವಿಭಾಗ ಕಚೇರಿ ಸಿಬ್ಬಂದಿ ಪ್ರವೀಣ್ ಮೂರುಗೋಳಿ ಅವರು ಪುತ್ತೂರಿನ ದರ್ಬೆಯಲ್ಲಿ ಮಹಮ್ಮದ್ ಶರೀಪ್‌ನನ್ನು ದಸ್ತಗಿರಿ ಮಾಡಿದ್ದಾರೆ.

ವೇಣೂರು ಠಾಣಾ ಸಿಬ್ಬಂದಿಗಳಾದ ನಿಕೋಲಸ್, ಬಸವರಾಜ್ ಹಾಗೂ ಆಕಾಶ ಅವರ ಭದ್ರತೆಯಲ್ಲಿ ಆರೋಪಿಯನ್ನು ಆ.13 ರಂದು ಸಂಜೆ ಮಾನ್ಯ ಬೆಳ್ತಂಗಡಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Related posts

ನಾಳೆ (ಮೇ 16): ಕಕ್ಕಿಂಜೆಯಲ್ಲಿ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಳಾಂತರಿತ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಆದ್ಯಪಾಡಿ:ಬೀಬಿಲಚ್ಚಿಲ್ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರ ಮಹಾ ಚಂಡಿಕಾ ಯಾಗ ಧಾರ್ಮಿಕ ಸಭೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೋನಿಕ್ ಸೌಂಡ್ ಗಳ ಉಚ್ಚಾರಣೆ ಮತ್ತು ಬಳಕೆ ಬಗ್ಗೆ ಕಾರ್ಯಾಗಾರ

Suddi Udaya

ಬರೋಡಾದ ಶಶಿ ಕ್ಯಾಟರಿಂಗ್ ಸರ್ವೀಸಸ್ ಮಾಲಕ,ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಮುಂದಾಳು ಪ್ರಸಿದ್ದ ಉದ್ಯಮಿ ಶಶಿಧರ ಬಿ.ಶೆಟ್ಟಿ ನವಶಕ್ತಿಯವರಿಂದ ದೇವಸ್ಥಾನಗಳಿಗೆ ರೂ.30 ಲಕ್ಷ ದೇಣಿಗೆ

Suddi Udaya

ಬೆಂಗಳೂರು ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಕಂಪೆನಿ ವತಿಯಿಂದ ನಾಳ ಶಾಲಾ ಮಕ್ಕಳಿಗೆ ಬ್ಯಾಗ್ ಮತ್ತು ಕಲಿಕಾ ಸಾಮಗ್ರಿ ವಿತರಣೆ

Suddi Udaya
error: Content is protected !!