23.8 C
ಪುತ್ತೂರು, ಬೆಳ್ತಂಗಡಿ
September 28, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

ಬಂಟ್ವಾಳ : ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾದಕವಸ್ತು ಪ್ರಕರಣದಲ್ಲಿ ಸುಮಾರು ಆರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಪುಂಜಾಲಕಟ್ಟೆ ಪೊಲೀಸರು ಕೇರಳದ ಮಂಜೇಶ್ವರದಲ್ಲಿ ಬಂಧಿಸಿದ್ದಾರೆ.

ಪುಂಜಾಲಕಟ್ಟೆ ಠಾಣಾ ಅಕ್ರ: 98/2019, ಕಲಂ 27(b) NDPS ಕಾಯ್ದೆ ಹಾಗೂ ಬಂಟ್ವಾಳದ ಮಾನ್ಯ ಹಿರಿಯ ನ್ಯಾಯಾಲಯದ ಸಿಸಿ ನಂ. 08/2020 ಪ್ರಕರಣದಲ್ಲಿ ವಾರೆಂಟ್ ಜಾರಿಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ಸಂತೆ ಮಾರ್ಕೆಟ್ ರೋಡ್ ನಿವಾಸಿ ರಿಜ್ವಾನ್ ಮಗ ಎಂ.ಡಿ. ಸೈಫ್ ಅಲಿಯಾಸ್ ಮೊಹಮ್ಮದ್ ಸೈಫ್ (32) ಎಂಬಾತನನ್ನು ಆ.13ರಂದು ಕೇರಳ ರಾಜ್ಯದ ಮಂಜೇಶ್ವರದ ಕಡಂಬಾರು ಎಂಬಲ್ಲಿಂದ ಪುಂಜಾಲಕಟ್ಟೆ ಪೊಲೀಸರು ಬಂಧಿಸಿ ಬಂಟ್ವಾಳ ನ್ಯಾಯಾಲಯಕ್ಕೆ ಸಂಜೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ 10 ಸಾವಿರ ದಂಡ ವಿಧಿಸಿ ಪ್ರಕರಣವನ್ನು ಮುಕ್ತಾಯಗೊಳಿಸಲಾಗಿದೆ.

ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿಣಿ.ಸಿ.ಕೆ ಮತ್ತು ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರಾದ ರವಿ ಬಿ.ಎಸ್ ಮಾರ್ಗದರ್ಶನದಲ್ಲಿ, ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜೇಶ್ ಕೆ.ವಿ ನೇತೃತ್ವದ ಸಿಬ್ಬಂದಿ ಹೆಚ್‌ಸಿ ರಾಜೇಶ್, ಪಿಸಿ ಚೋಳಪ್ಪ ಸಂಶಿ, ಪಿಸಿ ನಾಗರಾಜ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Related posts

ಎಸ್ ಎಸ್ ಎಲ್ ಸಿ ಐಸಿಎಸ್ಇ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿವಿಧ ಶಾಲೆಯ ವಿದ್ಯಾರ್ಥಿಗಳಿಗೆ ವಿದ್ವತ್ ಪಿಯು ಕಾಲೇಜಿನಿಂದ ಅಭಿನಂದನೆ

Suddi Udaya

ನಿಡ್ಲೆ : ಕಾಟ್ಲಾ ನಿವಾಸಿ ಅನ್ನಪೂರ್ಣ ಜೋಶಿ ನಿಧನ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯಲ್ಲಿ ತ್ರಿವಳಿ ಸಂಭ್ರಮ

Suddi Udaya

ಬಡಗಕಾರಂದೂರು ಶಾಲೆಯಲ್ಲಿ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ ಯಶಸ್ವಿ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆಯವರ 58ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಂಭ್ರಮ: ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಉಪಸ್ಥಿತಿ- ಪುಸ್ತಕ ಬಿಡುಗಡೆ

Suddi Udaya

ವ್ಯಾಪಾರ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಮಾಡಿದ ಗಣನೀಯ ಸೇವೆಯನ್ನು ಪರಿಗಣಿಸಿ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನರವರಿಗೆ ” ಕನ್ನಡ ರಾಜ್ಯೋತ್ಸವ ಪ್ರಶಸ್ತಿ”

Suddi Udaya
error: Content is protected !!