27.1 C
ಪುತ್ತೂರು, ಬೆಳ್ತಂಗಡಿ
September 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೋಳಿ ಸಾಕಾಣಿಕೆ ರೈತ ಮುಖಂಡರಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಶಾಸಕ ಹರೀಶ್ ಪೂಂಜರಿಗೆ ಮನವಿ

ಬೆಳ್ತಂಗಡಿ: ಕೋಳಿ ಸಾಕಾಣಿಕೆ ರೈತ ಮುಖಂಡರಿಂದ ತಾತ್ಕಾಲಿಕ ಕೆ.ಜಿ ರೂ.10 ರೂ ಹಾಗೂ ಕೇಂದ್ರ ಸರ್ಕಾರದ ಕೃಷಿ ನೀತಿಯನ್ನು ಕರ್ನಾಟಕದಲ್ಲಿ ಜಾರಿಗೊಳಿಸಲು ವಿಧಾನಸಭೆಯಲ್ಲಿ ಚರ್ಚಿಸಿ ಸರ್ಕಾರದ ಗಮನ ಹರಿಸಬೇಕೆಂದು ಶಾಸಕ ಹರೀಶ್ ಪೂಂಜರಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಲಾಯಿತು.

ನಂತರ ಕೋಳಿ ಸಾಕಾಣಿಕೆ ರೈತರು ಮತ್ತು ಖಾಸಗಿ ಕಂಪನಿಯವರ ಜೊತೆ ಸರ್ಕಾರ ಕೈಜೋಡಿಸಿ ಬೆಲೆ ನಿಯಂತ್ರಣ ಕೋಳಿ ಮರಿ ಆಹಾರ ಔಷಧಿ ಮತ್ತು ಲಸಿಕೆ ಇವುಗಳ ಬಗ್ಗೆ ನಿಯಂತ್ರಣ ಸಾಧಿಸಲು ಸರ್ಕಾರ ಮಧ್ಯಸ್ಥಿಕೆ ವಹಿಸಿ , ಕುಕ್ಕುಟ ನಿಯಂತ್ರಣ ಕಾಯ್ದೆ ಜಾರಿಗೆ ತರುವಂತೆ ಹಾಗೂ ಇನ್ನು ಅನೇಕ ಬೇಡಿಕೆಗಳನ್ನು ಶಾಸಕ ಹರೀಶ್ ಅವರಿಗೆ ಮನವಿ ಸಲ್ಲಿಸಲಾಯಿತು.

ಮನವಿಗೆ ಸ್ಪಂದಿಸಿದ ಶಾಸಕ ಹರೀಶ್ ಅವರು ಪಶು ಪಾಲನ ಇಲಾಖೆ ಅಧಿಕಾರಿಗಳಿಗೆ ಫೋನ್ ಮೂಲಕ ಮಾಹಿತಿ ಸಂಗ್ರಹಿಸಿ ನಂತರ ವಿಧಾನಸಭೆ ಅಧಿವೇಶನದ ಅಧಿಕಾರಿಗಳೊಂದಿಗೆ ಮಾತುಕತೆ ಮಾಡಿ ಕೋಳಿ ಸಾಕಾಣಿಕೆ ರೈತರ ಸಮಸ್ಯೆಗಳನ್ನು ಚರ್ಚೆ ಮಾಡಲು ಸಮಯ ಅವಕಾಶ ನೀಡಬೇಕೆಂದು ಮನವಿ ಮಾಡಿದರು.


ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಕೋಳಿ ಸಾಕಾಣಿಕೆ ರೈತರ ಕ್ಷೇಮಾಭಿವೃದ್ಧಿ ಸಂಘದ ಮುಖಂಡರು ಮತ್ತು ರೈತರು ಉಪಸ್ಥಿತರಿದ್ದರು.

Related posts

ಪುದುವೆಟ್ಟು ಶ್ರೀ .ಧ.ಮಂ.ಅನುದಾನಿತ .ಹಿ.ಪ್ರಾ.ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಚಾರ್ಮಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ

Suddi Udaya

ಜಾರಿಗೆ ಬೈಲು: ಅಕ್ರಮ ಗೋ ಸಾಗಟ :ರಾಷ್ಟ್ರೀಯ ಹಿಂದೂ ಜಾಗರಣೆ ವೇದಿಕೆ ಕಾರ್ಯಕರ್ತರಿಂದ ಕಾರ್ಯಾಚರಣೆ

Suddi Udaya

ನೆರಿಯ ಗ್ರಾಮ ಸಭೆ: ಜನವಸತಿಯಿರುವ ಪ್ರದೇಶಕ್ಕೆ ದಾರಿದೀಪ ವಿಸ್ತರಣೆಗೆ ಗ್ರಾಮಸ್ಥರ ಒತ್ತಾಯ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

Suddi Udaya

ವಾಣಿ ಕಾಲೇಜಿನಲ್ಲಿ ವಿದ್ಯಾರ್ಥಿ ಮಿತ್ರ ಸಿಇಟಿ ಕಾರ್ಯಾಗಾರ

Suddi Udaya
error: Content is protected !!