29.7 C
ಪುತ್ತೂರು, ಬೆಳ್ತಂಗಡಿ
September 27, 2026
Uncategorized

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸುವರ್ಣ ಸಂಭ್ರಮ: ಸಮಾಲೋಚನೆ ಸಭೆ

ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸುವರ್ಣ ಮಹೋತ್ಸವ ಆಚರಣೆ ಕುರಿತು ಸರ್ವ ಸದಸ್ಯರ ಸಮಾಲೋಚನಾ ಸಭೆಯು ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ಅವರ ಅಧ್ಯಕ್ಷತೆಯಲ್ಲಿ ಆ.9ರಂದು ಅಳದಂಗಡಿಯ ದೀಪಾ ಸಭಾಭವನದಲ್ಲಿ ನಡೆಯಿತು.

ಸಭೆಯನ್ನುದ್ದೇಶಿಸಿ ಮಾತನಾಡಿದ ಅಧ್ಯಕ್ಷ ರಾಕೇಶ್ ಹೆಗ್ಡೆ ಸುವರ್ಣ ಸಂಭ್ರಮವೆಂಬುದು ಕೇವಲ ಒಂದು ಕಾರ್ಯಕ್ರಮವಲ್ಲ. ಇದು ನಮ್ಮ ಸಂಘದ 50 ವರ್ಷಗಳ ಸಹಕಾರ, ಸೇವೆ, ನಂಬಿಕೆ ಮತ್ತು ಸಾಧನೆಯ ಸ್ಮರಣೀಯ ಪಯಣ. ಈ ಐತಿಹಾಸಿಕ ಸಂಭ್ರಮವನ್ನು ಯಶಸ್ವಿಗೊಳಿಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ. ನಾವೆಲ್ಲರೂ ಒಗ್ಗಟ್ಟಿನಿಂದ ಸಂಘದ ಅಭಿವೃದ್ಧಿಯೊಂದಿಗೆ ಸುವರ್ಣ ಮಹೋತ್ಸವವನ್ನು ಉತ್ತಮವಾಗಿ ನಡೆಸೋಣ. ರೈತ ಸದಸ್ಯರು, ಊರವರು ಹಾಗೂ ಸಂಘದ ಅಭಿವೃದ್ಧಿಗೆ ಶ್ರಮಿಸಿದ ಪ್ರತಿಯೊಬ್ಬರನ್ನೂ ಆಹ್ವಾನಿಸುವ ಮೂಲಕ ಕಾರ್ಯಕ್ರಮವನ್ನು ಇನ್ನಷ್ಟು ಅರ್ಥಪೂರ್ಣಗೊಳಿಸೋಣ ಎಂದರು.

ಸಭೆಯಲ್ಲಿ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸದಸ್ಯರು ಭಾಗವಹಿಸಿ, ಸುವರ್ಣ ಮಹೋತ್ಸವ ಕಾರ್ಯಕ್ರಮದ ಯಶಸ್ಸಿಗೆ ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದರು.

ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಜನಾರ್ಧನ ಪೂಜಾರಿ, ಸಿಇಒ ಮೀರಾ, ನಿರ್ದೇಶಕರಾದ ಗುರುಪ್ರಸಾದ್ ಹೆಗ್ಡೆ, ವಿಶ್ವನಾಥ ಹೊಳ್ಳ, ಹೇಮಂತ್ ಕಟ್ಟೆ, ಕೊರಗಪ್ಪ, ದೇಜಪ್ಪ ಪೂಜಾರಿ, ಧರ್ಣಪ್ಪ, ದೇವಿಪ್ರಸಾದ್ ಶೆಟ್ಟಿ, ದಿನೇಶ್ ಪಿಕೆ, ಮಮತಾ ಹಾಗೂ ಸುಂದರಿ ಉಪಸ್ಥಿತರಿದ್ದರು.

ಸುವರ್ಣ ಸಂಭ್ರಮ ನೆನಪಾಗಿ ಉಳಿಯುವ ಅದ್ಭುತ ಕಾರ್ಯಕ್ರಮವಾಗಲಿದೆ: ರಾಕೇಶ್ ಹೆಗ್ಡೆ
ಸುವರ್ಣ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಪ್ರತಿಯೊಬ್ಬರೂ ನೀಡಿದ ಅಮೂಲ್ಯ ಸಲಹೆಗಳು, ಹೊಸ ಆಲೋಚನೆಗಳು, ಮಾರ್ಗದರ್ಶನ ಹಾಗೂ ಸಹಕಾರದ ಭರವಸೆ ನಮಗೆ ಸಂತೋಷ ಮತ್ತು ಆತ್ಮವಿಶ್ವಾಸವನ್ನು ನೀಡಿದೆ. ನಾವೆಲ್ಲರೂ ಒಗ್ಗಟ್ಟಾಗಿ ಹೆಜ್ಜೆ ಇಟ್ಟರೆ, ನಮ್ಮ ಸುವರ್ಣ ಸಂಭ್ರಮವು ಇತಿಹಾಸದಲ್ಲಿ ನೆನಪಾಗಿ ಉಳಿಯುವಂತಹ ಅದ್ಭುತ ಕಾರ್ಯಕ್ರಮವಾಗಲಿದೆ ಎಂಬ ವಿಶ್ವಾಸವಿದೆ ಎಂದು ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ತಿಳಿಸಿದರು.

Related posts

ರಾಜ್ಯಮಟ್ಟದ ಕರಾಟೆ ಸ್ಪರ್ಧೆ

Suddi Udaya

ಭಾರೀ ಮಳೆ ಹಿನ್ನೆಲೆ: ಇಂದು (ಮೇ 30) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆಘೋಷಣೆ

Suddi Udaya

5ನೇ ಕರ್ನಾಟಕ ರಾಜ್ಯ ಹಣಕಾಸು ಆಯೋಗದೊಂದಿಗೆ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಶ್ರೇಯೋಭಿವೃದ್ಧಿ ಸಂಘದ ನಿಯೋಗದ ಸಭೆ

Suddi Udaya

ತೆಂಕಕಾರಂದೂರು ಆಲಡ್ಕ ಬಿಕ್ಕಿರ ನಿವಾಸಿ ದೇವದಾಸ ನಿಧನ

Suddi Udaya

ಎಸ್.ಡಿ.ಎಂ ಬಿ.ಎಡ್ ಕಾಲೇಜು ವಾರ್ಷಿಕೋತ್ಸವ

Suddi Udaya

ತಣ್ಣೀರುಪಂತ ಗ್ರಾ.ಪಂ. ನಲ್ಲಿ ಮಹಿಳೆಯರಿಗೆ ನರೇಗಾ ಯೋಜನೆಯ ಮಾಹಿತಿ ಕಾರ್ಯಗಾರ

Suddi Udaya
error: Content is protected !!