23.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಆಳ್ವಾಸ್ ವೈದ್ಯಕೀಯ  ಕಾಲೇಜಿಗೆ ತುಳು ಅಲ್ಪಸಂಖ್ಯಾತ ಮಾನ್ಯತೆ: 150 ಎಮ್‌ಬಿಬಿಎಸ್ ಸೀಟುಗಳ ಪೈಕಿ ತುಳು ಭಾಷಿಕ ಅಲ್ಪಸಂಖ್ಯಾತರಿಗೆ 54 ಸೀಟುಗಳು

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಂಗಸAಸ್ಥೆಯಾದ ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆ್ಯಂಡ್ ರಿಸರ್ಚ್ ಸೆಂಟರ್‌ಗೆ ತುಳು ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಯ ಕೋಟಾದಡಿ ಅನುಮೋದನೆ ದೊರೆತಿದೆ. 2026–27ನೇ ಶೈಕ್ಷಣಿಕ ವರ್ಷಕ್ಕೆ ಒಟ್ಟು 150 ಎಮ್‌ಬಿಬಿಎಸ್ ಸೀಟುಗಳಿಗೆ ಮಂಜೂರಾತಿ ದೊರೆತಿದ್ದು, ಈ ಪೈಕಿ 54 ಸೀಟುಗಳು ತುಳು ಭಾಷಿಕ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಲಭ್ಯವಾಗಲಿದೆ.

ತುಳು ಸಮುದಾಯದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣದಲ್ಲಿ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಈ ಬೆಳವಣಿಗೆ ಮಹತ್ವ ಪಡೆದಿದೆ. ವಿಶೇಷವಾಗಿ ಕರಾವಳಿ ಕರ್ನಾಟಕದ ತುಳು ಭಾಷಿಕ ವೈದ್ಯಕೀಯ ಶಿಕ್ಷಣದ ಆಕಾಂಕ್ಷಿಗಳಿಗೆ ತಮ್ಮದೇ ನೆಲದಲ್ಲಿ ವೈದ್ಯಕೀಯ ಶಿಕ್ಷಣ ಪಡೆಯಲು ಇದು ಉತ್ತಮ ಅವಕಾಶವಾಗಲಿದೆ.
ವೈದ್ಯಕೀಯ ಶಿಕ್ಷಣದ ಗುಣಮಟ್ಟದೊಂದಿಗೆ ಪ್ರಾಯೋಗಿಕ ಹಾಗೂ ಕ್ಲಿನಿಕಲ್ ತರಬೇತಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನೂ ಸಂಸ್ಥೆ ಹೊಂದಿದೆ. ಆಳ್ವಾಸ್ ವೈದ್ಯಕೀಯ ವ್ಯವಸ್ಥೆಯಡಿ 650 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ ಕಾರ್ಯನಿರ್ವಹಿಸುತ್ತಿದ್ದು, ಎಮ್‌ಬಿಬಿಎಸ್ ವಿದ್ಯಾರ್ಥಿಗಳಿಗೆ ವಿವಿಧ ವೈದ್ಯಕೀಯ ವಿಭಾಗಗಳಲ್ಲಿ ಪ್ರಾಯೋಗಿಕ ಅನುಭವ ಹಾಗೂ ಕ್ಲಿನಿಕಲ್ ತರಬೇತಿ ಪಡೆಯಲು ಇದು ನೆರವಾಗಲಿದೆ. ವಿದ್ಯಾರ್ಥಿಗಳ ವಸತಿ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಬಾಲಕರು ಮತ್ತು ಬಾಲಕಿಯರಿಗೆ ಪ್ರತ್ಯೇಕ ಹಾಸ್ಟೆಲ್ ಸೌಲಭ್ಯವನ್ನು ಕಲ್ಪಿಸಲಾಗಿದೆ.

ಆಕಾಂಕ್ಷಿಗಳಿಗೆ ಅವಕಾಶ
ವೈದ್ಯಕೀಯ ಶಿಕ್ಷಣದ ಕನಸು ಹೊಂದಿರುವ ತುಳು ಭಾಷಿಕ ಅಲ್ಪಸಂಖ್ಯಾತ ಸಮುದಾಯದ ಅರ್ಹ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ. ಪ್ರವೇಶಕ್ಕೆ ಸಂಬAಧಿಸಿದ ಅರ್ಹತೆ, ಅಗತ್ಯ ದಾಖಲೆಗಳು ಹಾಗೂ ಪ್ರವೇಶ ಪ್ರಕ್ರಿಯೆಯ ಕುರಿತು ಅಭ್ಯರ್ಥಿಗಳು ಅಧಿಕೃತ ಮಾಹಿತಿಯನ್ನು ಪರಿಶೀಲಿಸಿ, ನಿಗದಿತ ನಿಯಮಾನುಸಾರ ಅರ್ಜಿ ಸಲ್ಲಿಸಬಹುದಾಗಿದೆ.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯ ಹುಟ್ಟು ಹಬ್ಬ ಮತ್ತು ವಿಶ್ವ ಯುವ ಕೌಶಲ್ಯ ದಿನಾಚರಣೆ

Suddi Udaya

ಸುಲ್ಕೇರಿಮೊಗ್ರು: ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿಯ ವತಿಯಿಂದ ವಿ. ಹರೀಶ್ ನೆರಿಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ಮುಖ್ಯೋಪಾಧ್ಯಾಯಿನಿ ವಿಜಯ ಅವರಿಗೆ ಬೀಳ್ಕೊಡುಗೆ ಸಮಾರಂಭ: ಶಾಲೆಯ ಪ್ರಗತಿಗೆ ಶಿಕ್ಷಕಿ ವಿಜಯರವರ ಕೊಡುಗೆ ಅಪಾರ: ಮೋಹನ್ ಕುಮಾರ್

Suddi Udaya

ಸುದ್ದಿ ಉದಯ ಫಲಶ್ರುತಿ: ಇಂದಬೆಟ್ಟು ಕಜೆ ಪಿಲಪ್ಪಾಡಿಯಲ್ಲಿ ಅರಣ್ಯ ಇಲಾಖೆಯಿಂದ ಬೋನು ಅಳವಡಿಕೆ

Suddi Udaya

ಪೌರ ನೀರು ಸರಬರಾಜು ನೌಕರರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಬೇಕು : ಜಯಾನಂದ ಗೌಡ ಪ್ರಜ್ವಲ್

Suddi Udaya

ಸೌತಡ್ಕ : ಗೇರು ಪ್ಲಾಂಟೇಶನ್ ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷ

Suddi Udaya
error: Content is protected !!