23.9 C
ಪುತ್ತೂರು, ಬೆಳ್ತಂಗಡಿ
September 30, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಾಧಕರು

ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗ್ಯಾರಂಟಿ ನ್ಯೂಸ್ ನಿಂದ ಆರೋಗ್ಯ ರತ್ನ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ನೀಟ್‌ನಲ್ಲಿ ಅತ್ಯುತ್ತಮ ಸಾಧನೆ ಮಾಡಿ ಕರ್ನಾಟಕದಲ್ಲಿ ಅತಿಹೆಚ್ಚು ವಿದ್ಯಾರ್ಥಿಗಳನ್ನು ವೈದ್ಯಕೀಯ ಕ್ಷೇತ್ರಕ್ಕೆ ಕಳುಹಿಸಿದ ಏಕೈಕ ಪ್ರಮುಖ ಶಿಕ್ಷಣ ಸಂಸ್ಥೆ ಎಕ್ಸೆಲ್ ಪಿಯು ಕಾಲೇಜು ಗುರುವಾಯನಕೆರೆ ಇದರ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಗ್ಯಾರಂಟಿ ನ್ಯೂಸ್ ಕನ್ನಡ’ ವತಿಯಿಂದ ‘ಆರೋಗ್ಯ ರತ್ನ ಪ್ರಶಸ್ತಿ’ ನೀಡಿ ಸನ್ಮಾನಿಸಲಾಯಿತು.

ಶಿಕ್ಷಣ ಕ್ಷೇತ್ರದಲ್ಲಿ ಎಕ್ಸೆಲ್ ಸಂಸ್ಥೆಯ ಮೂಲಕ ಸಲ್ಲಿಸುತ್ತಿರುವ ಗಣನೀಯ ಸೇವೆ, ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಹಾಗೂ ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ರೂಪಿಸುತ್ತಿರುವುದನ್ನು ಗುರುತಿಸಿ ಈ ಗೌರವ ನೀಡಲಾಗಿದೆ.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಸಮ್ಮುಖದಲ್ಲಿ ಸುಮಂತ್ ಕುಮಾರ್ ಜೈನ್ ಅವರನ್ನು ಸನ್ಮಾನಿಸಲಾಯಿತು.

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ವಿಶೇಷ ಆದ್ಯತೆ ನೀಡಿ, ಗುಣಮಟ್ಟದ ಶಿಕ್ಷಣದ ಮೂಲಕ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಎಕ್ಸೆಲ್ ಸಂಸ್ಥೆ ಗಮನ ಸೆಳೆಯುತ್ತಿದೆ. ಸಂಸ್ಥೆಯ ಸಾಧನೆಗೆ ಈ ಪ್ರಶಸ್ತಿ ಮತ್ತೊಂದು ಗೌರವದ ಗರಿಮೆಯನ್ನು ತಂದಿದೆ.

ಈ ಸಂದರ್ಭದಲ್ಲಿ ಗ್ಯಾರಂಟಿ ನ್ಯೂಸ್ ನ ಮುಖ್ಯಸ್ಥರು, ಎಕ್ಸೆಲ್ ಶಿಕ್ಷಣ ಸಂಸ್ಥೆಯ ಪ್ರಮುಖರು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

Related posts

ಶೈಕ್ಷಣಿಕ ಸವಾಲುಗಳಿಗೆ ತಂತ್ರಜ್ಞಾನದ ಪರಿಹಾರ ಹುಡುಕುವ ಹ್ಯಾಕಥಾನ್

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭೆ

Suddi Udaya

ಉಜಿರೆ: ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ ಉಜಿರೆ ಗ್ರಾ.ಪಂ. ನಿಂದ ತೆರವು ಕಾರ್ಯ

Suddi Udaya

ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ: ನಾವೂರಿನಲ್ಲಿ ಸಂಭ್ರಮಾಚರಣೆ

Suddi Udaya

ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನೃತ್ಯ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ. ಪ.ಪೂ. ಕಾಲೇಜಿನ ಉಪನ್ಯಾಸಕರ ತಂಡವು ಪ್ರಥಮ ಸ್ಥಾನ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!