23.7 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ. ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಟಿಡೊಂಜಿ ದಿನ ಕಾರ್ಯಕ್ರಮ ಆ.13ರಂದು ನಡೆಯಿತು.

ಕಾರ್ಯಕ್ರಮವನ್ನು ಶ್ರೀ ಧರ್ಮಸ್ಥಳ ಪ್ರೌಢ ಶಾಲೆಯ ತುಳು ಶಿಕ್ಷಕ ಶಶಿಧರ್ ಮುಚ್ಚರು ಹಾಗೂ ಮೇಲಿನಡ್ಕ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಚಿನ್ನಯ್ಯ ಗೌಡರವರು ಚೆನ್ನಮಣೆ ಆಟ ಆಡಿ ಕಲಶಕ್ಕೆ ಅಕ್ಕಿ ಹಾಕುವುದರ ಮೂಲಕ ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪ ಗೌಡ ರವರು ವಹಿಸಿ ಮಾತನಾಡಿ ಆಟಿ ತಿಂಗಳಲ್ಲಿ ಆಡುವಂತಹ ಆಟಗಳು ಮತ್ತು ಆಟಿ ಅಂದರೆ ಏನು, ಆಟಿಯಲ್ಲಿ ಬಳಸುವಂತಹ ಬೇರೆ ಬೇರೆ ಪರಿಕರಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯರಾದ ಶ್ರೀಮತಿ ಕಮಲ ಹಾಗೂ ಶಾಲೆಯಹಿರಿಯ ಶಿಕ್ಷಕಿಯಾದ ಶ್ರೀಮತಿ ತೇಜಾವತಿಯವರು ಉಪಸ್ಥಿತರಿದ್ದರು. ಹಿರಿಯರಾದ ಶ್ರೀಮತಿ ಕಮಲ ಮಕ್ಕಳಿಗೆ ಅಜ್ಜಿ ಕಥೆಗಳನ್ನು ತಿಳಿಸಿಕೊಟ್ಟರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ವಿವಿಧ ತುಳು ನೃತ್ಯಗಳನ್ನು ಪ್ರಸ್ತುತಪಡಿಸಲಾಯಿತು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳ ಪ್ರಾರ್ಥನೆ ಗೀತೆಯೊಂದಿಗೆ ಆರಂಭಿಸಲಾಯಿತು. ಶಾಲಾ ಶಿಕ್ಷಕ ಪವನ್ ಕುಮಾರ್ ಸ್ವಾಗತಿಸಿದರು, ಗೌರೀಶ್ ಎಂ ಧನ್ಯವಾದಗೈದ ಕಾರ್ಯಕ್ರಮವನ್ನು ಶಾಲಾ ಶಿಕ್ಷಕಿಯಾದ ಕುಮಾರಿ ಜಿತಿಕ್ಷ ನಿರೂಪಿಸಿದರು. ಈ ಸಂದರ್ಭದಲ್ಲಿ ಶಾಲೆಯಲ್ಲಿ ಶಿಕ್ಷಕ ವೃಂದದವರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗೆ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ರಥ

Suddi Udaya

ಜು.29ರಿಂದ ಸೆ.14ರವರೆಗೆ ಮಹಾಮಂಡಲೇಶ್ವರ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾಚರಣೆ: ಬಿಳಿಶಿಲೆ ವಿನಾಯಕ ದೇವಸ್ಥಾನದಲ್ಲಿ ಚಾತುರ್ಮಾಸ್ಯ ವ್ರತಾಚರಣೆ: ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಲಾಯಿಲ: ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದ ವತಿಯಿಂದ ಶ್ರೀ ಕಾಳಿಕಾಂಬ ಪೂಜೆ ಹಾಗೂ ಶ್ರೀ ವರಮಹಾಲಕ್ಷ್ಮೀ ಪೂಜೆ, ನೂರಾರು ವೃತಧಾರಿಗಳು ಪೂಜೆಯಲ್ಲಿ ಭಾಗಿ

Suddi Udaya

ತಣ್ಣೀರುಪಂತ: ಕುದ್ರಡ್ಕದಲ್ಲಿ ಮೂವರು ಮಕ್ಕಳಿಗೆ ಹಾವು ಕಡಿತ

Suddi Udaya

ರೋಟರಿ ಬೆಂಗಳೂರು ಇಂದಿರಾನಗರ, ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ರೋಟರಿ ಸೇವಾ ಟ್ರಸ್ಟ್ ಇದರ ವತಿಯಿಂದ ತಾಲೂಕಿನ ಬಡಕುಟುಂಬದ ಪ್ರತಿಭಾನ್ವಿತ 145 ವಿದ್ಯಾರ್ಥಿಗಳಿಗೆ ರೂ.10.26 ಲಕ್ಷ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಸರಕಾರಿ ನೌಕರರ ಜಿಲ್ಲಾ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆ: ಹೇಮಚಂದ್ರರಿಗೆ ಪ್ರಥಮ ಸ್ಥಾನ

Suddi Udaya
error: Content is protected !!