26 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೊಗ್ರು : ಮುಗೇರಡ್ಕದಿಂದ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಸೇತುವೆ ಬಳಿಯ ರಾಷ್ಟ್ರೀಯ ಹೆದ್ದಾರಿ -75 ರ ರಸ್ತೆಗೆ ಸಂಪರ್ಕ ಬಹು ನಿರೀಕ್ಷಿತ ಪ್ರವಾಸೋದ್ಯಮ ದೃಷ್ಟಿಯಿಂದ ಜಾಗ ಕಾಯ್ದಿರಿಸುವ ಬಗ್ಗೆ ಎನ್ಎಚ್ಎಐ ಇಂಜಿನಿಯರ್ ತಂಡ ಭೇಟಿ ಸ್ಥಳ ಪರಿಶೀಲನೆ

ಮೊಗ್ರು : ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮ ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಸೇತುವೆ ಬಳಿಯ ರಾಷ್ಟ್ರೀಯ ಹೆದ್ದಾರಿ -75 ರ ರಸ್ತೆಗೆ ಸಂಪರ್ಕ ಕುರಿತಾದ ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ಸಂಚಾರಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಗೊಂದಲವನ್ನು ಲೋಕಸಭಾ ಸದಸ್ಯ ಕ್ಯಾ.ಬ್ರಿಜೇಶ್ ಚೌಟ ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರ ಗಮನಕ್ಕೆ ತರಲಾಗಿದ್ದು, ತಕ್ಷಣ ಸ್ಪಂದಿಸಿದ ಸಂಸದರು ಹಾಗೂ ಶಾಸಕರು ತಕ್ಷಣ ಸ್ಟ್ರಕ್ಚರಲ್ ಇಂಜನಿಯರ್ ಪ್ರಸನ್ನ ದರ್ಬೆಯವರನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮಂಗಳೂರು ಯೋಜನಾ ಘಟಕದ ಯೋಜನಾ ನಿರ್ದೇಶಕರಾದ ಅಬ್ದುಲ್ ಜಾವೇದ್ ಅಜ್ಮಿಯವರ ಜೊತೆ ಚರ್ಚಿಸಲು ಕಳುಹಿಸಿದರು. ಅ. 13 ರಂದು ಅವರ ಕಚೇರಿಯಲ್ಲಿ ಕಾರಣಿಕದ ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನ ಭಕ್ತರಿಗೆ ಅನುಕೂಲವಾಗುವ ಹಾಗೂ ಬಹು ನೀರಿಕ್ಷಿತ ಪ್ರವಾಸೋದ್ಯಮ ದೃಷ್ಟಿಯಿಂದ ಏನ್ಎಚ್ ರಸ್ತೆ ಬದಿಯ ಜಾಗ ಕಾಯ್ದಿದಿರಿಸುವ ಮತ್ತು ಅಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಸೇತುವೆಗೆ ಸಂಪರ್ಕಿಸುವ ರಸ್ತೆಯ ನಿರ್ಮಾಣದ ಬಗ್ಗೆ ಚರ್ಚಿಸಲಾಯಿತು. ಅ 14 ರಂದು ಪ್ರಸನ್ನ ದರ್ಬೆ ಯವರು ಸ್ಥಳಕ್ಕೆ ಏನ್ಎಚ್ಎಐ ಇಂಜಿನಿಯರ್ ಗಳೊಂದಿಗೆ ಬೇಟಿ ನೀಡಿ ಸಮಸ್ಯೆಯ ಕುರಿತು ಸೂಕ್ತ ವ್ಯವಸ್ಥೆ ಮಾಡುವ ಕುರಿತು ಚರ್ಚಿಸಿ ತೀರ್ಮಾನಿಸಲಾಯಿತು.

ಈ ಬಗ್ಗೆ ಸ್ಥಳೀಯರು ತಕ್ಷಣ ಸ್ಪಂದಿಸಿದ ಜಿಲ್ಲೆಯ ಕ್ರಿಯಾಶೀಲ, ಹೆಮ್ಮೆಯ ಸಂಸದರಾದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜಾರವರಿಗೆ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಣಿಯೂರು ಮಹಾ ಶಕ್ತಿಕೇಂದ್ರದ ಅಧ್ಯಕ್ಷರು, ಬಂದಾರು ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಬಂದಾರು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಗಂಗಾಧರ ಪೂಜಾರಿ, ಪುತ್ತೂರು ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಅದೇಶ್ ಶೆಟ್ಟಿ ಉಪ್ಪಿನಂಗಡಿ ,ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಗಿರೀಶ್ ಗೌಡ ಬಿ. ಕೆ ಬಂದಾರು, ಗ್ರೋಮಾ ಕನ್ಸ್ಟ್ರಕ್ಷನ್ ಅಧಿಕಾರಿಗಳಾದ ಜಯರಾಮ್,ಮೋಹನ್,ಇಂಜಿನಿಯರ್ ಗಳು ಉಪಸ್ಥಿತರಿದ್ದರು.

Related posts

ಟೀನ್ ಮಿಸ್ ಹಾಗೂ ಮಿಸೆಸ್ ಇಂಡಿಯಾ ಕರ್ನಾಟಕ ಸೌಂದರ್ಯ ಸ್ಪರ್ಧೆ : ಫಸ್ಟ್ ರನ್ನರ್ ಆಫ್ ಕಿರೀಟ ಮುಡಿಗೇರಿಸಿಕೊಂಡ ಅರಸಿನಮಕ್ಕಿಯ ಸನುಷ

Suddi Udaya

ಮುಂಡಾಜೆ: ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಸಂಭ್ರಮದ‌ ಬಕ್ರೀದ್ ಆಚರಣೆ-ಸಾಮೂಹಿಕ ಪ್ರಾರ್ಥನೆ

Suddi Udaya

ಡಾ. ಯು.ಸಿ. ಪೌಲೋಸ್‌ರವರ ಸೇವೆಗೆ “ಭಾರತದ ಜವಾಬ್ದಾರಿಯುತ ಮತ್ತು ಸಕ್ರಿಯ ನಾಗರಿಕ ಪ್ರಶಸ್ತಿ

Suddi Udaya

ನಿಟ್ಟಡೆ: ಯಾವುದೇ ಪರವಾನಿಗೆ ಇಲ್ಲದೇ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಪಿಕಪ್‌ ವಾಹನ ವಶ

Suddi Udaya

ಮಹಾವೀರ ಜಯಂತಿ ರಜೆ ಹಿನ್ನಲೆ ಮಾ.30ರಂದು ನಡೆಯಬೇಕಾಗಿದ್ದ ಎಸ್ಸೆಸ್ಸೆಲ್ಸಿ ತೃತೀಯ ಭಾಷೆ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

Suddi Udaya

ಆರ್ಕಿಡ್‌ ಪ್ರದರ್ಶನ:  ಧರ್ಮಸ್ಥಳದ  ಸುಪ್ರಿಯಾ ಹರ್ಷೇಂದ್ರ ಕುಮಾರ್‌ರವರಿಗೆ ಬಹುಮಾನ

Suddi Udaya
error: Content is protected !!