23.7 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರುಡ್‌ಸೆಟ್ ಉಜಿರೆಯಲ್ಲಿ ಅಣಬೆ ಬೇಸಾಯ ತರಬೇತಿ ಸಮಾರೋಪ

ಉಜಿರೆ : ಅಣಬೆ ಬೇಸಾಯವು ಕಡಿಮೆ ಸ್ಥಳ, ಕಡಿಮೆ ಬಂಡವಾಳ ಹಾಗೂ ಕಡಿಮೆ ಅವಧಿಯಲ್ಲಿ ಉತ್ತಮ ಆದಾಯ ಗಳಿಸಲು ಸಹಕಾರಿಯಾಗುವ ಕೃಷಿ ಆಧಾರಿತ ಸ್ವಉದ್ಯೋಗವಾಗಿದ್ದು, ವೈಜ್ಞಾನಿಕ ವಿಧಾನಗಳನ್ನು ಅಳವಡಿಸಿಕೊಂಡು ಗುಣಮಟ್ಟದ ಅಣಬೆ ಉತ್ಪಾದನೆಗೆ ಮುಂದಾಗಬೇಕು ಎಂದು ಕೃಷಿ ಇಲಾಖೆ ಪುತ್ತೂರು ವಿಭಾಗದ *ಉಪ ಕೃಷಿ ನಿರ್ದೇಶಕರಾದ ಶ್ರೀ ಶಿವಶಂಕರ ಹೆಚ್ ದಾನೆಗೊಂಡರೆ ಕರೆ ನೀಡಿದರು.

ರುಡ್‌ಸೆಟ್ ಸಂಸ್ಥೆ, ಸಿದ್ಧವನ, ಉಜಿರೆಯಲ್ಲಿ 10 ದಿನಗಳ ಕಾಲ ನಡೆದ ಅಣಬೆ ಬೇಸಾಯ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಪ್ರಮಾಣಪತ್ರ ವಿತರಣೆ ನೆರವೇರಿಸಿ ಮಾತನಾಡಿ ಕೃಷಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಅವರು ಅಣಬೆ ಬೇಸಾಯದಲ್ಲಿ ವೈಜ್ಞಾನಿಕ ತಂತ್ರಜ್ಞಾನ ಹಾಗೂ ಗುಣಮಟ್ಟದ ಉತ್ಪಾದನೆಯ ಮಹತ್ವದ ಕುರಿತು ಮಾರ್ಗದರ್ಶನ ನೀಡಿದರು.
ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಸುನಿಲ್ ಜಿ. ನಾಯ್ಕ ಸ್ವಾಗತಿಸಿ, ತರಬೇತಿ ಕಾರ್ಯಕ್ರಮದ ಉದ್ದೇಶ ಹಾಗೂ ಮಹತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಶಿಬಿರಾರ್ಥಿಗಳಾದ ಎಲಿಯಮ್ ಲಾನ್ಸಿ ರೆಬೆಲ್ಲೊ ಹಾಗೂ ಕುಮಾರಿ ನಿಶಾ ತರಬೇತಿಯ ಅನುಭವಗಳನ್ನು ಹಂಚಿಕೊಂಡರು. ತರಬೇತಿಯ ಮೂಲಕ ಅಣಬೆ ಬೇಸಾಯದ ಕುರಿತು ಪ್ರಾಯೋಗಿಕ ಜ್ಞಾನ ಹಾಗೂ ಉದ್ಯಮ ಆರಂಭಿಸುವ ಆತ್ಮವಿಶ್ವಾಸ ದೊರೆತಿದೆ ಎಂದು ಅವರು ಅಭಿಪ್ರಾಯಪಟ್ಟರು.

ಪುರಂದರ ಪ್ರಾರ್ಥಿಸಿದರು. ಕಾರ್ಯಕ್ರಮವನ್ನು ಸಂಸ್ಥೆಯ ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ನಿರೂಪಿಸಿದರು. ಹಿರಿಯ ಉಪನ್ಯಾಸಕ ಕರುಣಾಕರ ಕೆ. ಜೈನ್ ಧನ್ಯವಾದ ಸಮರ್ಪಿಸಿದರು.

Related posts

ಮಚ್ಚಿನ: ಚರಂಡಿಗಳ ಹೂಳೆತ್ತದೆ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು: ಹೂಳು ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಬೆಳ್ಳಿಯ ಪಾತ್ರೆ ಕೊಡುಗೆ

Suddi Udaya

ಧರ್ಮಸ್ಥಳ: ನೇತ್ರಾವತಿ ನದಿಗೆ ಹಾರಿ ದಂಪತಿಗಳು ಆತ್ಮಹತ್ಯೆ: ದೊಂಡೋಲೆ ಪವರ್ ಪ್ರಾಜೆಕ್ಟ್ ಬಳಿ ಮೃತದೇಹ ಪತ್ತೆ

Suddi Udaya

ಪ್ರಧಾನಿ ನರೇಂದ್ರ ಮೋದಿಯವರ ದೀರ್ಘಾಯುಷ್ಯಕ್ಕಾಗಿ ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾದಿಂದ ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಬಲ್ಯೋಟ್ಟು ಶ್ರೀ ಗುರುಕೃಪಾ ಸೇವಾ ಆಶ್ರಮಕ್ಕೆ ಆರ್ಥಿಕ ಸಹಾಯಧನ ವಿತರಣೆ

Suddi Udaya

ರಾಜಕೇಸರಿ ಸಂಘಟನೆ ವತಿಯಿಂದ ಕರ್ನೋಡಿ ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya
error: Content is protected !!