23.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ.ಅ. ಪ್ರೌಢ ಶಾಲೆಯಲ್ಲಿ ನೈತಿಕ ಶಿಕ್ಷಣ ಮತ್ತು ಕಾನೂನು ಅರಿವು

ಉಜಿರೆ: ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತು, ಬೆಳ್ತಂಗಡಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದರ ಆಶ್ರಯದಲ್ಲಿ, ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ, ಉಜಿರೆ ಇದರ ಸಹಯೋಗದೊಂದಿಗೆ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ “ನೈತಿಕ ಶಿಕ್ಷಣ ಮತ್ತು ಕಾನೂನು ಅರಿವು” ಕಾರ್ಯಕ್ರಮವು ಆ. 13ರಂದು ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀಮತಿ ರಾಜೇಶ್ವರಿ ಅವರು ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣ ಹಾಗೂ ಭಾರತೀಯ ಸಂಸ್ಕೃತಿ ಮತ್ತು ಸಂಸ್ಕಾರಗಳ ಮಹತ್ವದ ಕುರಿತು ಮಾರ್ಗದರ್ಶನ ನೀಡಿದರು. ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಭಾರತೀಯ ಸಂಸ್ಕೃತಿಯಲ್ಲಿರುವ ಆಚಾರ-ವಿಚಾರಗಳು, ಉಡುಗೆ-ತೊಡುಗೆ ಹಾಗೂ ಸಂಸ್ಕಾರಗಳನ್ನು ಗೌರವಿಸಿ, ನಮ್ಮ ಸಂಸ್ಕೃತಿಯನ್ನು ಬೆಳೆಸಿ ಉಳಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ತಿಳಿಸಿದರು. ಪ್ರತಿಯೊಂದು ವಲಯದಲ್ಲಿಯೂ ನಡೆಯುವ ಬಾಲಗೋಕುಲ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿ, ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಅರಿತುಕೊಳ್ಳಬೇಕು ಎಂದರು.

ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತು, ಧರ್ಮಸ್ಥಳದ ರಾಜ್ಯಾಧ್ಯಕ್ಷ ಪಿ. ಚಂದ್ರಶೇಖರ್ ಸಾಲಿಯಾನ್, ಕೊಯ್ಯೂರು ಅವರು ಕಾನೂನು ಅರಿವಿನ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಪೋಕ್ಸೋ ಕಾಯ್ದೆ, ರಸ್ತೆ ಸುರಕ್ಷತೆ, ಅಪಘಾತಗಳ ಬಗ್ಗೆ ಮುನ್ನೆಚ್ಚರಿಕೆ ಹಾಗೂ ಮಾದಕ ವ್ಯಸನಗಳ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ವಿದ್ಯಾರ್ಥಿಗಳು ಕಾನೂನುಗಳನ್ನು ತಿಳಿದುಕೊಂಡು, ಯಾವುದೇ ರೀತಿಯ ತಪ್ಪು ಚಟುವಟಿಕೆಗಳಿಗೆ ಒಳಗಾಗದೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು. ಕಾನೂನು ಅರಿವು ನಮ್ಮ ಹಕ್ಕುಗಳು ಮತ್ತು ಕರ್ತವ್ಯಗಳ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ ಉತ್ತಮ ವಿದ್ಯಾರ್ಥಿ ಹಾಗೂ ಜವಾಬ್ದಾರಿಯುತ ನಾಗರಿಕನಾಗಿ ರೂಪುಗೊಳ್ಳಲು ಸಹಕಾರಿಯಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ವಿದ್ಯಾಕಿರಣ್ ಅವರು ಮಾತನಾಡಿ, ಭಜನೆಯಿಂದ ಮನಸ್ಸಿಗೆ ನೆಮ್ಮದಿ, ಶಾಂತಿ, ಏಕಾಗ್ರತೆ ಹಾಗೂ ಭಕ್ತಿಭಾವ ಮೂಡುತ್ತದೆ. ನೈತಿಕ ಮೌಲ್ಯಗಳು ನಮ್ಮ ನಡತೆಯನ್ನು ಉತ್ತಮಗೊಳಿಸುವುದರ ಜೊತೆಗೆ ಉತ್ತಮ ವ್ಯಕ್ತಿತ್ವವನ್ನು ರೂಪಿಸುತ್ತವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತು ಅಧ್ಯಕ್ಷ ರವಿರಾಜ್ ಚಾರ್ಮಾಡಿ, ಉಜಿರೆ ಭಜನಾ ಪರಿಷತ್ತು, ಅಧ್ಯಕ್ಷೆ ಪುಷ್ಪಾವತಿ ಶೆಟ್ಟಿ, ಮೇಲ್ವಿಚಾರಕರು ಪ್ರೇಮ್ ಪ್ರಸಾದ್ ಉಪಸ್ಥಿತರಿದ್ದರು.
ಶಾಲೆಯ ಎಲ್ಲಾ ಶಿಕ್ಷಕರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ವಿದ್ಯಾರ್ಥಿನಿ ಅನುಷಾ ಸ್ವಾಗತಿಸಿ, ಸಾನಿಧ್ಯ ವಂದಿಸಿದರು. ಸನ್ನಾಜ್ ಕಾರ್ಯಕ್ರಮವನ್ನು ನಿರೂಪಿಸಿದರು

Related posts

ಗಾಯಕರಾದ ಕ್ಷಿತಿ ಕೆ.ರೈ ಮತ್ತು ಶ್ರೇಷ್ಠ ಆಳ್ವ ರಿಗೆ ಆಮಂತ್ರಣ ಸತ್ಯಶ್ರೀ ಗೌರವ ಪುರಸ್ಕಾರ

Suddi Udaya

2023-24ನೇ ಸಾಲಿನ ಶೈಕ್ಷಣಿಕ ಶಾಲಾ ವೇಳಾಪಟ್ಟಿ ಪ್ರಕಟ ಮೊದಲನೇ ಶೈಕ್ಷಣಿಕ ಅವಧಿ ಮೇ 29 ರಿಂದ ಆರಂಭ

Suddi Udaya

ಕಲ್ಮಂಜ: ಪರಾರಿ ಮನೆ ಪ್ರಗತಿಪರ ಕೃಷಿಕ ರಾಜಶೇಖರ ಹೆಬ್ಬಾರ್ ಹೃದಯಾಘಾತದಿಂದ ನಿಧನ

Suddi Udaya

ಮೊಗ್ರು: ಕರಂಬಾರುವಿನಲ್ಲಿ ಕಾಡಾನೆ ಪ್ರತ್ಯಕ್ಷ: ನೇತ್ರಾವತಿ ನದಿಯಲ್ಲಿ ಜಳಕ

Suddi Udaya

ಮಾನವನ ವರ್ತನೆಯಲ್ಲಿ ಕೃತಕ ಬುದ್ಧಿಮತ್ತೆಯ ಪಾತ್ರ ಮತ್ತು ಭವಿಷ್ಯ: ಅಂತಾರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!