31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್ ಡಿ ಎಂ ಕಾಲೇಜಿನಲ್ಲಿ ಇತಿಹಾಸ ವಿಭಾಗದ ವತಿಯಿಂದ ತುಳುವೇರೆ ಆಟಿ ವಿಶೇಷ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ) ಉಜಿರೆ ಇಲ್ಲಿನ ಇತಿಹಾಸ ವಿಭಾಗದ ವತಿಯಿಂದ ಆ.12 ರಂದು ”ತುಳುವೆರೆ ಆಟಿ” ವಿಶೇಷ ಕಾರ್ಯಕ್ರಮ ನಡೆಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ ಎಸ್ ಡಿ ಎಮ್ ಐ.ಟಿ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ ರವೀಶ್ ಪಡುಮಲೆ ಮಾತನಾಡಿದರು. ಪರಶುರಾಮ ಸೃಷ್ಟಿಯ ಈ ತುಳುನಾಡಿನಲ್ಲಿ ಆಟಿಯ ಆಚಾರಣೆ ವಿಶಿಷ್ಟ ಹಿನ್ನೆಲೆಯನ್ನು ಹೊಂದಿದೆ.

ಹಿರಿಯರ ಕಾಲದಲ್ಲಿ ಆಟಿ ತಿಂಗಳು ಎಂದರೆ ಅದು ಕಷ್ಟದ ಸಮಯ. ಆದರೆ ಈಗ ಕಾಲ ಬದಲಾಗಿದೆ , ಈಗ ಎಲ್ಲೆಲ್ಲಿಯೋ ಆಟಿದ ಕೂಟ, ಕೆಸರಡೂಂಜಿ ದಿನ ಈ ರೀತಿಯ ಕಾರ್ಯಕ್ರಮಗಳು ನಡೆಯುತ್ತಲೇ ಇರುತ್ತದೆ ಆದರೆ ಮುಖ್ಯವಾಗಿ ನಾವು ನಮ್ಮ ಹಿರಿಯರ ಕಷ್ಟ ಅವರ ಬದುಕು ಆಚರಣೆ ಸಂಸ್ಕೃತಿಯನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಎಸ್‌. ಡಿ ಎಂ ಕಾಲೇಜಿನ ಪ್ರಾಂಶುಪಾಲ ಪ್ರೊಫೆಸರ್ ವಿಶ್ವನಾಥ್ ಪಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ವಿಭಾಗ ಮುಖ್ಯಸ್ಥ ಡಾ. ಸನ್ಮತಿ ಕುಮಾರ್ ಸ್ವಾಗತಿಸಿ, ತೃತೀಯ ವರ್ಷದ ವಿದ್ಯಾರ್ಥಿಗಳಾದ ಸುಶೀರ ನಿರೂಪಿಸಿ, ನಿಶ್ಮಿತಾ ವಂದಿಸಿದರು.

ಉಪನ್ಯಾಸಕಿ ಡಾ.ಸಾಜಿದ, ವಿದ್ಯಾರ್ಥಿ ಪ್ರತಿನಿಧಿಗಳಾದ ಕಿರಣ್ಮಯಿ, ಮಿಥುನ್ ಮತ್ತು ಇತಿಹಾಸ ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ಕೊನೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಾಂಪ್ರದಾಯಿಕ ತಿಂಡಿಗಳನ್ನು ವಿತರಿಸಲಾಯಿತು.

Related posts

ಬೆಳ್ತಂಗಡಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಶಿವಪ್ರಸಾದ್ ಕೊಕ್ಕಡ

Suddi Udaya

ಬೆಳ್ತಂಗಡಿ ಸರಕಾರಿ ಪ್ರೌಢಶಾಲೆಯಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ

Suddi Udaya

ಉಜಿರೆ ಎಸ್‌.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್‌ಗಾರ್ಟನ್‌ನಲ್ಲಿ ಪ್ರಥಮ ಪೋಷಕರ-ಶಿಕ್ಷಕರ ಸಭೆ

Suddi Udaya

ಕೆಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚ್ಚತಾ ಆಂದೋಲನ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಭವ್ಯ ರಂಗಮಂಟಪದಲ್ಲಿ “ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ ಪ್ರದರ್ಶನ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರ ಸೂಚನೆ ಮೇರೆಗೆ ; ಧರ್ಮಸ್ಥಳ- ಉಜಿರೆ-ಬೆಳಾಲು- ಬಂದಾರು- ಮೊಗ್ರು ಅಲೆಕ್ಕಿ – ಇಳoತಿಲ-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

Suddi Udaya
error: Content is protected !!