31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಶ್ರೀ ರಾಘವೇಂದ್ರ ಮಠದ ಪರಿಸರ ಸ್ವಚ್ಛತಾ ಕಾರ್ಯ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಬೆಳ್ತಂಗಡಿ ವಲಯದ ಕನ್ನಾಜೆ ಕಾರ್ಯಕ್ಷೇತ್ರದ ವತಿಯಿಂದ ಲಾಯಿಲ ರಾಘವೇಂದ್ರ ಮಠದ ವಠಾರದಲ್ಲಿ ಸ್ವಚ್ಛತಾ ಶ್ರಮದಾನ ಆ.13 ರಂದು ನಡೆಸಿಕೊಡಲಾಯಿತು.

ಈ ಸಂದರ್ಭದಲ್ಲಿ ರಾಘವೇಂದ್ರ ಮಠದ ಕಾರ್ಯದರ್ಶಿಗಳಾದ ವಸಂತ ಸುವರ್ಣ ಹಾಗೂ ಮಠದ ಸಿಬ್ಬಂದಿ ವರ್ಗ ವಲಯದ ಮೇಲ್ವಿಚಾರಕರಾದ ಜಿ ರವಿ ಒಕ್ಕೂಟದ ಅಧ್ಯಕ್ಷ ಶ್ರೀಮತಿ ಯಶೋಧ ಹುಣ್ಸೆಕಟ್ಟೆ, ಒಕ್ಕೂಟದ ಅಧ್ಯಕ್ಷ ದಯಾನಂದ ಕೋಟ್ಯಾನ್, ಬೆಳ್ತಂಗಡಿ ವಲಯದ ‌ಭಜನಾ ಮಂಡಳಿ ಅಧ್ಯಕ್ಷ ಗಣೇಶ ಕನ್ನಾಜೆ, ರತ್ನಶ್ರೀ ಜ್ಞಾನವಿಕಾಸ ಕೇಂದ್ರದ ಸದಸ್ಯರು ಮತ್ತು ಸ್ಥಳೀಯ ಸಂಘದ ಸದಸ್ಯರು ಹಾಗೂ ಸೇವಾ ಪ್ರತಿನಿಧಿಗಳಾದ ಗುಣವತಿ ,ಜ್ಯೋತಿ , ಕೇಶವ ಉಪಸ್ಥಿತರಿದ್ದರು.

ವಲಯದ ಮೇಲ್ವಿಚಾರಕ ಜಿ ರವಿ ಧನ್ಯವಾದಗಳನ್ನು ಸಲ್ಲಿಸಿದರು. ಮಠದ ವತಿಯಿಂದ ವಸಂತ ಸುವರ್ಣ ಇವರು ಕ್ಷೇತ್ರದ ವತಿಯಿಂದ ಮಠಕ್ಕೆ ದೊರೆದಿರುವ ಸಹಕಾರವನ್ನು ಶ್ಲಾಘಿಸಿದರು.

Related posts

ಉಜಿರೆಯ ಪಾಕತಜ್ಞ ಶ್ರೀನಿವಾಸ ಕಾರಂತ ನಿಧನ 

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಯಾಗಿ ಪೊಲೀಸರ ಮನವಿ

Suddi Udaya

ಶಿಶಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ರೋಬೋಟಿಕ್ ಶಸ್ತ್ರಚಿಕಿತ್ಸೆ ಹಾಗೂ ಜಾಯಿಂಟ್ ರಿಪ್ಲೇಸ್‌ಮೆಂಟ್ ಫೆಲೋಶಿಪ್ ಪೂರ್ಣಗೊಳಿಸಿದ ಮೂಳೆ ತಜ್ಞ ಡಾ. ರಜತ್ ಹೆಚ್.ಪಿ

Suddi Udaya

ಸಿ ಎಸ್ ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅದ್ವಿತೀಯ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!