23.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು : ಪೌಷ್ಟಿಕ ಆಹಾರ ಅರಿವು ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಇಂದಬೆಟ್ಟು ವಲಯದ ನಾವೂರು ಎ ಕಾರ್ಯಕ್ಷೇತ್ರದಲ್ಲಿ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪೌಷ್ಟಿಕ ಆಹಾರ ಅರಿವು ಕಾರ್ಯಕ್ರಮವನ್ನು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಲ್ಲಾಜೆ ಯಲ್ಲಿ ನಡೆಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಆನಂದರವರು ಹಿಂದಿನ ಕಾಲದಲ್ಲಿ ಬಳಸುತ್ತಿದ್ದ ಆಹಾರ ಪದ್ಧತಿಯನ್ನುಉಳಿಸುವ ಈ ಮಾಹಿತಿ ಕಾರ್ಯಕ್ರಮ ಉತ್ತಮವಾಗಿದ್ದು ಇದರ ಪ್ರಯೋಜನವನ್ನು. ಪಡೆಯುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಕಚೇರಿಯ ಜ್ಞಾನ ವಿಕಾಸ ವಿಭಾಗದ ಯೋಜನಾಧಿಕಾರಿ ಮಲ್ಲಿಕಾ ಮಹಿಳೆಗೆ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ಇದ್ದರೆ ಅವರ ಕುಟುಂಬಕ್ಕೆ ಉತ್ತಮ ಪೌಷ್ಟಿಕ ಆಹಾರ ದೊರೆಯಲು ಸಾಧ್ಯ. ಮಕ್ಕಳಿಗೆ ಅವರಿಗೆ ಇಷ್ಟವಾಗುವ ರೀತಿಯಲ್ಲಿ ಪೌಷ್ಟಿಕ ಆಹಾರ ತಯಾರಿ ಮಾಡಿ ನಾವು ನೀಡಿದ್ದಲ್ಲಿ ಮಕ್ಕಳು ಇಷ್ಟಪಟ್ಟು ತಿನ್ನುತ್ತಾರೆ. ಇವತ್ತಿನ ಕಾರ್ಯಕ್ರಮ ಉತ್ತಮವಾಗಿದೆ ಎಂದರು.

ಸಂಪನ್ಮೂಲ ವ್ಯಕ್ತಿಯಾದ ರತ್ನಾವತಿ ರವರು ಕೇಸರಿ ಬಿಳಿ ಹಸಿರು ತರಕಾರಿ ಸೇವನೆ ಬಗ್ಗೆ ಸೊಪ್ಪು ಕಾಳು ತರಕಾರಿಯಲ್ಲಿರುವ ಪೌಷ್ಟಿಕಾಂಶದ ಬಗ್ಗೆ ಹಾಗೂ ನಾವು ನಮಗಾಗಿ ಪೌಷ್ಟಿಕ ಆಹಾರ ತಯಾರಿ ಮಾಡಬೇಕು. ಆಗ ನಮ್ಮ ಆರೋಗ್ಯದೊಂದಿಗೆ ನಮ್ಮ ಕುಟುಂಬದ ಸದಸ್ಯರ ಆರೋಗ್ಯ ಉತ್ತಮವಾಗಿರಲು ಸಾಧ್ಯ ಎಂದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕಿ ಮೇಘನಾ ಹಾಗೂ ವಲಯ ಮೇಲ್ವಿಚಾರಕರಾದ ಉಷಾಪ್ರಸಾದ್ ಸಂಯೋಜಕಿ ಶೃತಿ ಉಪಸ್ಥಿತರಿದ್ದರು. ಜ್ಞಾನ ವಿಕಾಸ ಸಮನ್ವಯಾಧಿಕಾರಿ ಮಧುರಾ ವಸಂತ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಜ್ಞಾನ ವಿಕಾಸ ಕೇಂದ್ರದ ಸದಸ್ಯರಾದ ನಿರ್ಮಲಾ ಸ್ವಾಗತಿಸಿ, ಸೇವಪ್ರತಿನಿಧಿ ಸುನೀತಾ ಧನ್ಯವಾದ ನೀಡಿದರು.

Related posts

ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಅಶ್ವಿನಿ ಎಸ್. ಶೆಟ್ಟಿ ರವರಿಗೆ ಪಿಹೆಚ್ ಡಿ ಪದವಿ

Suddi Udaya

ಟಿಪ್ಪರ್ ಬಾಡಿಗೆ ವಿಚಾರದಲ್ಲಿ ಕೊಲೆ ಯತ್ನ ಆರೋಪ : ಇಬ್ಬರ ವಿರುದ್ಧ ಪ್ರತಿದೂರು ದಾಖಲು

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಎಚ್ ಐ ವಿ ಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ವಿಧಾನಪರಿಷತ್‌ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣವಚನ ಸ್ವೀಕಾರ

Suddi Udaya

ಬೆಳಾಲು ಗ್ರಾಮದ ಮುಂಡ್ರೊಟ್ಟು ಪರಿಸರದಲ್ಲಿ ನೀರಿನ ಸಮಸ್ಯೆ: ತುರ್ತು ಕ್ರಮಕ್ಕೆ ಶಾಸಕರ ಸೂಚನೆ

Suddi Udaya

ಮಾ.8: ರುದ್ರ ಪಾರಾಯಣ ಹಾಗೂ ಶತ ರುದ್ರಯಾಗ ಮತ್ತು ಶ್ರೀ ಸತ್ಯನಾರಾಯಣ ಪೂಜೆ-ಕನ್ಯಾಡಿ ಶ್ರೀಗಳಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!