23.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಕಂದಾಯ ನಿರೀಕ್ಷಕರಾಗಿ ಮಲ್ಲೇಶ್ ಕರ್ತವ್ಯಕ್ಕೆ ಹಾಜರು

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನಲ್ಲಿ ಕಳೆದ 23 ವರ್ಷಗಳಿಂದ ವಿವಿಧ ಹುದ್ದೆಯಲ್ಲಿ ಕರ್ತವ್ಯ ಮಾಡಿ ಕಳೆದ ಏಳು ವರ್ಷಗಳಿಂದ ಕೊಕ್ಕಡ ಹೋಬಳಿಯಲ್ಲಿ ಕಂದಾಯ ನಿರೀಕ್ಷಕರಾಗಿದ್ದ ಪವಡಪ್ಪ ದೊಡ್ಡಮನಿಯವರನ್ನು ಮೂಡಬಿದಿರೆ ಕಂದಾಯ ಇಲಾಖೆಯ ಪ್ರಥಮ ದರ್ಜೆ ಸಹಾಯಕ ಸ್ಥಳಕ್ಕೆ ಸರಕಾರ ವರ್ಗಾವಣೆ ಮಾಡಿದ್ದು, ಮೂಡಬಿದಿರೆ ಕಂದಾಯ ಇಲಾಖೆಯ ಪ್ರಥಮ ದರ್ಜೆ ಸಹಾಯಕರಾಗಿದ್ದ ಕಳೆದ ನಾಲ್ಕು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಜಿ.ಎಸ್. ಮಲ್ಲೇಶ್ ಅವರನ್ನು ಕೊಕ್ಕಡ ಹೋಬಳಿ ಕಂದಾಯ ನಿರೀಕ್ಷಕ ಸ್ಥಳಕ್ಕೆ ಆ.31 ರಂದು ವರ್ಗಾವಣೆ ಮಾಡಲಾಗಿತ್ತು.

ಕೊಕ್ಕಡ ಹೋಬಳಿ ಕಂದಾಯ ನಿರೀಕ್ಷಕರಾಗಿ ಜಿ.ಎಸ್. ಮಲ್ಲೇಶ್ ಅವರು ಬೆಳ್ತಂಗಡಿ ತಹಶೀಲ್ದಾರ್ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದು. ಬೆಳ್ತಂಗಡಿ ತಹಶೀಲ್ದಾರ್ ಎಸ್.ಎನ್. ನರಗುಂದರವರು ಕೊಕ್ಕಡ ಕಂದಾಯ ನಿರೀಕ್ಷಕರಾಗಿದ್ದ ಪವಡಪ್ಪ ದೊಡ್ಡಮನಿಯವರನ್ನು ಬೆಳ್ತಂಗಡಿ ಕಂದಾಯ ಇಲಾಖೆಯಿಂದ ಬಿಡುಗಡೆ ಮಾಡಿದ್ದಾರೆ.

Related posts

ಪಡಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ತೆಂಕಕಾರಂದೂರು : ಜನಾರ್ದನ ಆಚಾರ್ಯ ರವರ ಮನೆಯ ಹಿಂಬದಿ ಗುಡ್ಡ ಕುಸಿತ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಪೌರ ಕಾರ್ಮಿಕರ ಜಂಟಿ ಸಮಾವೇಶ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ವಸತಿ ಶಾಲೆ ಮತ್ತು ಕಾಲೇಜಿನ ಸಂಸ್ಥಾಪಕ ಗಿರೀಶ್ ಕೆ ಹೆಚ್ ರವರು ಶಿಕ್ಷಣ ಸಿಂಧೂರ ಪ್ರಶಸ್ತಿಗೆ ಆಯ್ಕೆ

Suddi Udaya

ಡಿ.17: ಬೆಳ್ತಂಗಡಿ ತಾಲೂಕು18 ನೇ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಯುವತಿಯರೊಂದಿಗೆ ಅನುಚಿತ ವರ್ತನೆ ಪ್ರಕರಣ: ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya
error: Content is protected !!