28.1 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ 80 ನೇ ಸ್ವಾತಂತ್ರ್ಯ ಸಂಭ್ರಮಾಚರಣೆ

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಅಂಗಳವು 150 ವರ್ಷಗಳ ಐತಿಹಾಸಿಕ ಹಿನ್ನೆಲೆಯುಳ್ಳ ‘ವಂದೇ ಮಾತರಂ’ ಮಾಧುರ್ಯ, ‘2047ರ ವಿಕಸಿತ ಭಾರತಕ್ಕಾಗಿ ಯುವಶಕ್ತಿ’ ಧ್ಯೇಯ ಹಾಗೂ ರಾಷ್ಟ್ರಗೀತೆಯ ನಿನಾದದೊಂದಿಗೆ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮಕ್ಕೆ ಸಾಕ್ಷಿಯಾಯಿತು.

ಎಸ್.ಡಿ.ಎಂ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು, ಸಂಸ್ಥೆಯ ಅಧ್ಯಾಪಕ ಮತ್ತು ಅಧ್ಯಾಪಕೇತರ ಸಿಬ್ಬಂದಿಗಳ ಉಪಸ್ಥಿತಿಯಲ್ಲಿ ಕಾಲೇಜಿನ ಶೈಕ್ಷಣಿಕ ಸಂಯೋಜನಾಧಿಕಾರಿ ಎಸ್.ಎನ್. ಕಾಕತ್ಕರ್ ಅವರು ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ., ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಡೀನ್ ಡಾ. ಸೌಮ್ಯ ಬಿ.ಪಿ. ಹಾಗೂ ಉಪ ಪ್ರಾಂಶುಪಾಲರಾದ ನಂದಕುಮಾರಿ ಕೆ.ಪಿ. ಉಪಸ್ಥಿತರಿದ್ದರು. ಇಂಗ್ಲಿಷ್ ವಿಭಾಗದ ಮುಖ್ಯಸ್ಥ ಜಿ.ಆರ್. ಭಟ್ ಕಾರ್ಯಕ್ರಮವನ್ನು ನಿರೂಪಿಸಿದರು. ಎನ್.ಎಸ್.ಎಸ್ ಸ್ವಯಂಸೇವಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಸಿಹಿ ವಿತರಿಸಿದರು.

Related posts

ಬೆಳ್ತಂಗಡಿ ಶ್ರೀ ದುರ್ಗಾ ಟೆಕ್ಸ್ಟ್ ಟೈಲ್ಸ್ ನ ರಾಜುರಾಮ್ ರಾಜಸ್ಥಾನದಲ್ಲಿ ನಡೆದ ಬೈಕ್ ಅಪಘಾತದಲ್ಲಿ ಸಾವು

Suddi Udaya

ವಿಶ್ವ ಏಡ್ಸ್ ದಿನ : ಉಜಿರೆ ಶ್ರೀ ಧ.ಮಂ.ಪದವಿಪೂರ್ವ ಕಾಲೇಜಿನಲ್ಲಿ ಜಾಗೃತಿ ಉಪನ್ಯಾಸ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಮತ್ತು ವಿಜಯ ಗೋಪುರ ಲೋಕಾರ್ಪಣೆಯ ಪೂರ್ವಾಭಾವಿ ಸಭೆ: ಬ್ರಹ್ಮಕಲಶೋತ್ಸವದ ಅಧ್ಯಕ್ಷರಾಗಿ ಕೆ.ಪ್ರತಾಪಸಿಂಹ ನಾಯಕ್, ಕಾರ್ಯಾಧ್ಯಕ್ಷರಾಗಿ ಶಶಿಧರ ಶೆಟ್ಟಿ ನವಶಕ್ತಿ ಆಯ್ಕೆ : ದೇಶಕ್ಕೆ ಮಾದರಿಯಾಗಿ ಉಜಿರೆ ದೇವಸ್ಥಾನದ ಬ್ರಹ್ಮಕಲಶೋತ್ಸವ: ಹರೀಶ್ ಪೂಂಜ

Suddi Udaya

ಕೇಲ್ತಾಜೆ ಸಿರಾಜುಲ್ ಹುದಾ ಮದರಸ ಮತ್ತು ಜುಮಾ ಮಸ್ಜಿದ್ ಇದರ ಅಧ್ಯಕ್ಷರಾಗಿ ಕೆ ಹನೀಫ್ ಪುನರಾಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟದ ಜಿನಾಭಜನಾ ಸ್ಪರ್ಧೆಗೆ ಆಯ್ಕೆ

Suddi Udaya

ಜ.17,18: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪ್ರವರ್ಧಿತ ಆರ್ಥಿಕತೆಯಲ್ಲಿ ಗ್ರಾಮೀಣ ಉದ್ಯಮಶೀಲತೆಯ ಪಾತ್ರ’ ಕುರಿತು ಅಂತರರಾಷ್ಟ್ರೀಯ ವಿಚಾರ ಸಂಕಿರಣ ‘

Suddi Udaya
error: Content is protected !!