28.1 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಕ್ಸೆಲ್‌ನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮ: ಶೈಕ್ಷಣಿಕ ಸಾಧಕರಿಗೆ ಸನ್ಮಾನ

ಗುರುವಾಯನಕೆರೆ: ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆಗಳ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಶೈಕ್ಷಣಿಕ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ ಆ.15 ರಂದು ಅರಮಲೆಬೆಟ್ಟು ಕ್ಯಾಂಪಸ್‌ನಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಕ್ಸೆಲ್ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಭಾರತದ ಭವಿಷ್ಯ ರೂಪಿಸುವಲ್ಲಿ ಇಂದಿನ ವಿದ್ಯಾರ್ಥಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ವಿದ್ಯಾರ್ಥಿಗಳು ಹೆತ್ತವರಿಗೆ ದೊಡ್ಡ ಆಸ್ತಿಯಾಗಿ, ದೇಶಕ್ಕೆ ಹೆಮ್ಮೆಯಾಗುವ ರೀತಿಯಲ್ಲಿ ಸಾಧನೆ ಮಾಡಬೇಕು. ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಜೀವನದ ಸಾಧನೆಗೆ ಎಕ್ಸೆಲ್ ಸದಾ ದಾರಿದೀಪವಾಗಿ ನಿಂತಿರುತ್ತದೆ ಎಂದು ಹೇಳಿದರು.

ಭಾರತೀಯ ಸೇನೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿರುವ ಮೇ. ಡಾ. ಕುಶ್ವಂತ್ ಕೆ.ಎನ್. ಧ್ವಜಾರೋಹಣ ನೆರವೇರಿಸಿ, ಬಳಿಕ ನೀಟ್ ಸಾಧಕರನ್ನು ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಂಟಿ ಕಾರ್ಯದರ್ಶಿ ವಿಠಲ ಎ., ಅರಮಲೆಬೆಟ್ಟು ಕ್ಯಾಂಪಸ್ ಪ್ರಾಂಶುಪಾಲ ಡಾ. ಪ್ರಜ್ವಲ್ ಕಜೆ, ವಿದ್ಯಾಸಾಗರ ಕ್ಯಾಂಪಸ್ ಪ್ರಾಂಶುಪಾಲ ಡಾ. ನವೀನ್ ಕುಮಾರ್ ಮರಿಕೆ, ಎಕ್ಸೆಲ್ ಟೆಕ್ನೋ ಸ್ಕೂಲ್ ಪ್ರಾಂಶುಪಾಲ ಸುಮಿತ್ರಾ ಗೌಡ ಹಾಗೂ ವೇಣೂರು ಟೆಕ್ನೋ ಸ್ಕೂಲ್ ಮುಖ್ಯೋಪಾಧ್ಯಾಯ ಶಾಂತಿರಾಜ್ ಜೈನ್ ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ಬಳಿಕ ಎಕ್ಸೆಲ್ ಟೆಕ್ನೋ ಸ್ಕೂಲ್ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ‘ಗೆಜ್ಜೆ ಹೆಜ್ಜೆ–ನೃತ್ಯ ವೈಭವ’ ಗಮನ ಸೆಳೆಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.ಎಕ್ಸೆಲ್ ಟೆಕ್ನೋ ಸ್ಕೂಲ್ ಪ್ರಾಂಶುಪಾಲ ಸುಮಿತ್ರಾ ಗೌಡ ವಂದಿಸಿದರು.

Related posts

ಕಾಡಾನೆ ದಾಳಿ, ಕೃಷಿಕರ ಭಾವನೆಗಳಿಗೆ ಸ್ಪಂದಿಸದ ಕಾಂಗ್ರೆಸ್ ಸರಕಾರ : ಹರೀಶ್ ಪೂಂಜ ಆಕ್ರೋಶ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ ಹಾಗೂ ವಲಯ ಉಪಾಧ್ಯಕ್ಷರ ಎರಡನೇ ಅಧಿಕೃತ ಭೇಟಿ

Suddi Udaya

ಉರುವಾಲು :ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಪ್ಪರ ಮೂಹೂರ್ತ

Suddi Udaya

ಬೆಳ್ತಂಗಡಿ: ಕಸ್ತೂರಿ ರಂಗನ್ ವರದಿ ವಿರೋಧಿ ಹೋರಾಟ ಸಮಿತಿಯಿಂದ ಪತ್ರಿಕಾಗೋಷ್ಠಿ

Suddi Udaya

ಆ.21 : ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕಾರಿಂಜ ಶ್ರೀ ವನಶಾಸ್ತಾರ ಮತ್ತು ವೀರಭದ್ರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಉಗ್ರಾಣ , ಕಾರ್ಯಾಲಯ ಹಾಗೂ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya
error: Content is protected !!