23.7 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರಾಯ ಸರಕಾರಿ ಪ್ರೌಢಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಕರಾಯ : ಸರಕಾರಿ ಪ್ರೌಢಶಾಲೆ ಕರಾಯದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಧ್ವಜಾರೋಹಣ ಕಾರ್ಯಕ್ರಮವನ್ನು ಶಾಲೆಯ ಮುಖ್ಯ ಗುರುಗಳಾದ ಟಿ ಬಿ ಬಸವಲಿಂಗಪ್ಪ ನೆರವೇರಿಸಿದರು ಬಳಿಕ ಆಕರ್ಷಕ ಪಥ ಸಂಚಲನವು ನಡೆಯಿತು. ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿ ಮಾತನಾಡಿದ ಮುಖ್ಯಗುರುಗಳು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಮತ್ತು ದೇಶಭಕ್ತಿಯನ್ನು ಸ್ಮರಿಸಿ ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವವನ್ನು ಬೆಳೆಸಿಕೊಂಡು ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಬೇಕೆಂದು ಕರೆ ನೀಡಿದರು.

ಶಾಲೆಯ ಹಿರಿಯ ಶಿಕ್ಷಕ ಶಿವಬಾಳು ಅವರು ಮಾತನಾಡಿ, 1857ರ ಸ್ವಾತಂತ್ರ್ಯ ಸಂಗ್ರಾಮಕ್ಕೆ ಕಾರಣಗಳು, ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಾಣತ್ಯಾಗ ಮಾಡಿದ ದೇಶಭಕ್ತರ ಸವಿನೆನಪು ಹಾಗೂ ಪ್ರಸ್ತುತ ದೇಶದ ಸ್ಥಿತಿಗತಿಗಳ ಕುರಿತು ಸವಿವರವಾಗಿ ವಿವರಿಸಿದರು. ನಂತರ ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆ, ನೃತ್ಯ, ಕಿರು ನಾಟಕ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಗುರುಗಳು ಶಿಕ್ಷಕ ವೃಂದ, ಎಸ್ ಡಿ ಎಂ ಸಿ ಸರ್ವ ಸದಸ್ಯರು ವಿದ್ಯಾರ್ಥಿಗಳು, ಹಿರಿಯ ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

Related posts

ರಾಣಿ-ಚೆನ್ನಭೈರಾದೇವಿ ಸ್ಮಾರಕ ಅಂಚೆ ಚೀಟಿ ಬಿಡುಗಡೆ ಸಮಾರಂಭದಲ್ಲಿ ಎಕ್ಸಲೆಂಟ್ ಮೂಡುಬಿದಿರೆ ಪ್ರಶಂಸಿದ ರಾಷ್ಟ್ರಪತಿಗಳು

Suddi Udaya

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕೊಪ್ಪರಿಗೆ ತುಂಬಿಸುವ ಕಾರ್ಯಕ್ರಮ

Suddi Udaya

ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘದ 30ನೇ ವಷ೯ದ ವಾಷಿ೯ಕೋತ್ಸವ

Suddi Udaya

ಶ್ರೀ.ಕ್ಷೇ.ಧ.ಗ್ರಾ.ಯೋಜನೆಯಿಂದ ಯೋಜನೆಯ ಸೇವಾ ಪ್ರತಿನಿಧಿ ಕೇಶವ ಅಚ್ಚಿನಡ್ಕರವರಿಗೆ ಆರ್ಥಿಕ ಧನಸಹಾಯ

Suddi Udaya

ಸಾರ್ವಜನಿಕರಿಗೆ ಉಚಿತ ರಕ್ತದೂತ್ತಡ ಹಾಗೂ ಮಧುಮೇಹ ತಪಾಸಣೆ

Suddi Udaya

ಬೆಳ್ತಂಗಡಿ ಸ್ಥಳೀಯ ಸಂಸ್ಥೆಯಿಂದ ಕಬ್- ಬುಲ್ ಬುಲ್ಸ್ ಉತ್ಸವ, ಸ್ಕೌಟ್ಸ್- ಗೈಡ್ಸ್ ಮೇಳ, ರೋವರ್ಸ್‌ – ರೇಂಜರ್ಸ್‌ ಸಮಾಗಮ

Suddi Udaya
error: Content is protected !!