31.2 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು ನವೋದಯ ಯುವಕ ಮಂಡಲ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ: ವಿದ್ಯಾರ್ಥಿಗಳಿಗೆ “ಅಕ್ಷರ ದೀವಿಗೆ” ಹಾಗೂ ಶಿಕ್ಷಕರಿಗೆ ಗೌರವ

ನಾವೂರು: 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಅಂಗವಾಗಿ ನಾವೂರು ನವೋದಯ ಯುವಕ ಮಂಡಲ ವತಿಯಿಂದ ವಿದ್ಯಾರ್ಥಿಗಳ ಅಕ್ಷರ ಪಯಣಕ್ಕೆ ಪ್ರೋತ್ಸಾಹ ಹಾಗೂ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಶಿಕ್ಷಕರು ಮತ್ತು ಸಿಬ್ಬಂದಿಗೆ ಗೌರವ ಸಲ್ಲಿಸುವ ವಿಶಿಷ್ಟ ಕಾರ್ಯಕ್ರಮವು ಜರುಗಿತು.

ನಾವೂರು ಪ್ರಾಥಮಿಕ ಮತ್ತು ಪ್ರೌಢಶಾಲೆಯ ಎಲ್ಲಾ ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ಹಾಗೂ ಜ್ಞಾನಾರ್ಜನೆಗೆ ಆಸರೆಯಾಗುವ ದಿಸೆಯಲ್ಲಿ “ಅಕ್ಷರ ದೀವಿಗೆ’ (ಜ್ಞಾನದ ಲೇಖನಿ)ಯನ್ನು ವಿತರಿಸಲಾಯಿತು.

ಇದರೊಂದಿಗೆ, ನಾಳಿನ ಪ್ರಜೆಗಳನ್ನು ರೂಪಿಸುವ ಜ್ಞಾನದಾತರಾದ ಶಿಕ್ಷಕ ವೃಂದದವರಿಗೆ ಹಾಗೂ ಮಕ್ಕಳಿಗೆ ನಿತ್ಯ ಅನ್ನದಾಸೋಹ ಸೇವೆ ಸಲ್ಲಿಸುತ್ತಿರುವ ಅಡುಗೆ ಸಿಬ್ಬಂದಿಯವರಿಗೆ ವಿಶೇಷ ಗೌರವಪೂರ್ವಕವಾಗಿ ಲೇಖನಿಯನ್ನು ಕೊಡುಗೆಯಾಗಿ ನೀಡಿ ಗೌರವಿಸಲಾಯಿತು.

ಮಕ್ಕಳ ಬರವಣಿಗೆಗೆ ಬೆಳಕಾಗುವ ಮತ್ತು ಸಾಧನೆಯ ಹಾದಿಗೆ ಸ್ಫೂರ್ತಿಯಾಗುವ ಈ ವಿನೂತನ ‘ಅಕ್ಷರ ಕೊಡುಗೆ ಕಾರ್ಯಕ್ರಮದಲ್ಲಿ ನವೋದಯ ಯುವಕ ಮಂಡಲದ ಅಧ್ಯಕ್ಷ ಸ್ವರೂಪ್ ಶೇಖರ್, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಗೌಡ ನಾಗಾಜೆ, ಕೋಶಾಧಿಕಾರಿ ಬಾಲಕೃಷ್ಣ ಆಚಾರಿ, ಪ್ರೌಢಶಾಲೆ ಮುಖ್ಯ ಶಿಕ್ಷಕ ರಾಜೇಂದ್ರ, ಶಾಲೆಯ ಮುಖ್ಯ ಶಿಕ್ಷಕರಾದ ಅಮಿತಾ , ಎಸ್.ಡಿ.ಎಂ.ಸಿ ಅಧ್ಯಕ್ಷ ಡಾ.ಪ್ರದೀಪ್ ಬಂಗಾಡಿ, ಸಿ.ಎ. ಬ್ಯಾಂಕ್ ಅಧ್ಯಕ್ಷರಾದ ಹರೀಶ್ ಸಾಲಿಯಾನ್ ಮೊರ್ತಜೆ ಹಾಗೂ ಯುವಕ ಮಂಡಲದ ಎಲ್ಲಾ ಪದಾಧಿಕಾರಿಗಳು, ಸಮಿತಿಯ ಸದಸ್ಯರು ಮತ್ತು ಊರಿನ ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Related posts

ಯುವವಾಹಿನಿ ಉಪ್ಪಿನಂಗಡಿ ಘಟಕದ ಅಧ್ಯಕ್ಷರಾಗಿ ಮನೋಜ್ ಎನ್ ಸಾಲ್ಯಾನ್ ಆಯ್ಕೆ

Suddi Udaya

ಗುರುವಾಯನಕೆರೆ ಹೋಟೆಲ್ ರೇಸ್ ಇನ್ ನ ಆಹಾರ ವಿಭಾಗವಾದ “ಪೆಗ್ಸ್ ರೆಸ್ಟೋ ಬಾರ್ & ಫ್ಯಾಮಿಲಿ ರೆಸ್ಟೋರೆಂಟ್” ಹೊಸ ಆಡಳಿತದೊಂದಿಗೆ ಶುಭಾರಂಭ

Suddi Udaya

ರಾಜ್ಯಮಟ್ಟದ ಎನ್ ಎಂ ಎಂ ಎಸ್ ಪರೀಕ್ಷೆಯಲ್ಲಿ ಬಡಗಕಾರಂದೂರು ಶಾಲೆಯ ವಿದ್ಯಾರ್ಥಿನಿ ರಮ್ಯಶ್ರೀ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಹಾಗೂ ಜೆ ಜೆ ಫ್ರೆಂಡ್ಸ್ ವತಿಯಿಂದ ವಾಲಿಬಾಲ್ ಪಂದ್ಯಾಟ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು : ರಾ. ಸೇ ಯೋಜನಾ ದಿನಾಚರಣೆ ಹಾಗೂ ಪ್ರಾಚಾರ್ಯರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಸ್ಪರ್ಧಾತ್ಮಕ ಉದ್ಯೋಗ ಮಾರ್ಗದರ್ಶನ ಮತ್ತು ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya
error: Content is protected !!