31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಬೆಳ್ತಂಗಡಿ: ಬೆಂಗಳೂರು ನಗರದ ರಾಜೇಶ್ವರಿ ನಗರದಲ್ಲಿ ಬೆಳ್ತಂಗಡಿಯ ಯುವಕನೋರ್ವ ಹೆಂಡತಿಯನ್ನು ಕತ್ತು ಹಿಸುಕಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆ.13 ರಂದು ಮಧ್ಯರಾತ್ರಿ ನಡೆದಿದಿದ್ದು.ಮೃತರು ಪದ್ಮಾವತಿ (29) ಹಾಗೂ ಸುಮಂತ್ ಜೈನ್ (32) ಎಂಬವರಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಎಳನೀರು ನಿವಾಸಿಯಾಗಿರುವ ಸುಮಂತ್ ಜೈನ್(32) ಸಿವಿಲ್‌ ಎಂಜಿನಿಯ‌ರ್ ಆಗಿದ್ದರು. ಹುಬ್ಬಳಿ ಮೂಲದ ಪದ್ಮಾವತಿ(29) ವೈಟ್ ಫೀಲ್ಡ್ ಸಮೀಪದ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು.

ಆ.13 ರಂದು ಮಧ್ಯರಾತ್ರಿ ಕೌಟುಂಬಿಕ ಕಲಹವಾಗಿತ್ತು. ಜಗಳ ವಿಕೋಪಕ್ಕೆ ತಿರುಗಿ ಪತ್ನಿಯನ್ನು ಸುಮಂತ್ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ನಂತರ ತನ್ನ ತಾಯಿಗೆ ನಾನು ಸಾಯುತ್ತಿದ್ದೇನೆ ಎಂದು ವಾಯ್ಸ್ ಮೆಸೇಜ್ ಕಳುಹಿಸಿರುವುದಾಗಿಯೂ ತಿಳಿದು ಬಂದಿದೆ. ತನ್ನ ಪಿಎಫ್ ಹಣ ಹಾಗೂ ಮನೆಯಲ್ಲಿನ ವಸ್ತುಗಳು ತೆಗೆದುಕೊಂಡು ಹೋಗುವಂತೆ ವಾಯ್ಸ್ ಮೆಸೇಜ್ ಕಳುಹಿಸಿದ್ದಾನೆ ಎನ್ನಲಾಗಿದ್ದು ಬಳಿಕ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಮಾಹಿತಿ ಲಭ್ಯವಾಗುತ್ತಿದೆ. ಆ.14 ರಂದು ಕುಟುಂಬದವರು ಬೆಂಗಳೂರು ಮನೆಗೆ ತೆರಳಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದು ರಾಜಗೋಪಾಲನಗರ ಪೊಲೀಸರಿಗೆ ಮಾಹಿತಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಈ ಜೋಡಿ ಮೂರು ವರ್ಷದ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದರು. ಕಳೆದ ಒಂದೂವರೆ ವರ್ಷದಿಂದ ಬೆಂಗಳೂರಿನಲ್ಲಿ ವಾಸವಾಗಿದ್ದರು. ನಿನ್ನೆ ದಂಪತಿ ನಡುವೆ ಗಲಾಟೆ ನಡೆದಿದೆ ಎನ್ನಲಾಗಿದ್ದು ಗಲಾಟೆ ವಿಕೋಪಕ್ಕೆ ಹೋದಾಗ ಕೊಲೆ ಪ್ರಕರಣ‌ ನಡೆದಿದೆ ಎಂದು ತಿಳಿದು ಬಂದಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ
ಮನೆಯಲ್ಲಿ ಪೊಲೀಸರು, ಸೊಕೋ ಟೀಂನಿಂದ ಪರಿಶೀಲನೆ ನಡೆದಿದ್ದು. ಮೃತದೇಹಗಳ ಮಹಜರು ಹಾಗೂ ಮರಣೋತ್ತರ ಪರೀಕ್ಷೆಗಳು ಇನ್ನಷ್ಟೆ ನಡೆಯಬೇಕಾಗಿದೆ ಎಂದು ತಿಳಿದು ಬಂದಿದೆ.

Related posts

ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಂಗಳೂರು: ಉಪಾಧ್ಯಕ್ಷರಾಗಿ ಆನಂದ ಗೌಡ ಪಿ.ಹೆಚ್., ಕಾರ್ಯದರ್ಶಿಯಾಗಿ ನವೀನಚಂದ್ರ ಗೌಡ

Suddi Udaya

ಸೆ. 5: ಅರಸಿನಮಕ್ಕಿ ಶ್ರೀಕೃಷ್ಣಜನ್ಮಾಷ್ಟಮಿ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್.ಡಿ.ಎಂ ಪ.ಪೂ ಕಾಲೇಜು : ‘ ಪ್ರವೇಶಂ’ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ

Suddi Udaya

ಮುಂಡೂರು ಅಕ್ಷಯ ಬಂಟರ ಗ್ರಾಮ ಸಮಿತಿ ವತಿಯಿಂದ ‘ಆಟಿದ ನೆನಪು’ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಭಾಗದ ವತಿಯಿಂದ ಅತಿಥಿ ಉಪನ್ಯಾಸ

Suddi Udaya

ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಉಜಿರೆ, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಬೆಳ್ತಂಗಡಿ ಹಾಗೂ ರೋಟರಿ ಕ್ಲಬ್‌ ಬೆಳ್ತಂಗಡಿ ವತಿಯಿಂದ ಯಶೋ’ ಯಕ್ಷನಮನ-ಗಾನ-ನೃತ್ಯ-ಚಿತ್ರ

Suddi Udaya
error: Content is protected !!