23.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬಜಿರೆ ಪಿಎಂಶ್ರೀ ಕೆಪಿಎಸ್ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಬಜಿರೆ: ಬಜಿರೆ ಪಿಎಂಶ್ರೀ ಕೆಪಿಎಸ್ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಜಯಶ್ರೀ ನೆರವೇರಿಸಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ವೇಣೂರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಅರುಣ್ ಕ್ರಾಸ್ತ, ಸದಸ್ಯರಾದ ಲೋಕಯ್ಯ ಪೂಜಾರಿ ಕಂಗಿತ್ತಿಲು, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಒಕ್ಕೂಟದ ಅಧ್ಯಕ್ಷ ಗಿರೀಶ್ ಕುಲಾಲ್ ಬಡೆಕ್ಕಿಲ, ಯೋಜನೆಯ ಸೇವಾಪ್ರತಿನಿಧಿ ರೂಪಾ ಚಂದನ, ಎಸ್‌ಡಿಎಂಸಿ ಉಪಾಧ್ಯಕ್ಷ ಲೋಕೇಶ್ ಕೋರ್ಲೋಡಿ, ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಪೂಜಾರಿ ಕಲ್ಪನೆ, ಎಲ್‌ಕೆಜಿ-ಯುಕೆಜಿ ಬೆಟರ್‌ಮೆಂಟ್ ಕಮಿಟಿಯ ಅಧ್ಯಕ್ಷ ಜಗನ್ನಾಥ ದೇವಾಡಿಗ, ಉಪಾಧ್ಯಕ್ಷೆ ಹರಿಣಿ ಜೈನ್, ತಾಯಂದಿರ ಸಮಿತಿಯ ಮಂಜುಳಾ, ನಮ್ಮ ಶಾಲೆ ನಮ್ಮ ಕೊಡುಗೆ ಸಮಿತಿಯ ಅರುಣ್, ಶಾಲೆಯ ಮುಖ್ಯ ಶಿಕ್ಷಕಿ ರಶ್ಮಿ ಶೆಟ್ಟಿ ಮತ್ತು ಎಸ್‌ಡಿಎಂಸಿ ಹಾಗೂ ವಿವಿಧ ಕಮಿಟಿಗಳ ಸದಸ್ಯರು, ಪೋಷಕರು, ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶಾಲಾ ನಾಯಕಿ ಶ್ರೀದೇವಿ ಸೇರಿದಂತೆ ಹಲವು ಮಂದಿ ವಿದ್ಯಾರ್ಥಿಗಳು ಸ್ವಾತಂತ್ರ್ಯ ದಿನದ ಮಹತ್ವದ ಬಗ್ಗೆ ಮಾತನಾಡಿದರು ಶಿಕ್ಷಕಿ ಲೀಲಾ ಸ್ವಾಗತಿಸಿದರು.
ವಿದ್ಯಾರ್ಥಿಗಳು ವಿವಿಧ ಸ್ವಾತಂತ್ರ್ಯ ಹೋರಾಟಗಾರರ ಮತ್ತು ವೀರಯೋಧರ ವೇಷಧರಿಸಿ ಕಾರ್ಯಕ್ರಮಕ್ಕೆ ಮೆರುಗು ನೀಡಿದರು.

Related posts

ಕುತ್ಲೂರು ಶಾಲೆಗೆ ರಾಜ್ಯ ಮಟ್ಟದ ಕೃಷಿ ರೈತ ರತ್ನ ಪ್ರಶಸ್ತಿ

Suddi Udaya

ನಡ : ಮಂಜೊಟ್ಟಿ ಬಿ.ಕೆ ಹರಿಪ್ರಸಾದ್ ಅನುದಾನದಲ್ಲಿ ನಿರ್ಮಾಣವಾದ ಆಟೋ ನಿಲ್ದಾಣ ಉದ್ಘಾಟನೆ

Suddi Udaya

ಇಂದಬೆಟ್ಟು-ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ಯುವ ಸಂಘಟನೆಯಿಂದ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಶ್ರಮದಾನ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದಲ್ಲಿ ವರ್ಷಾವಧಿ ಜಾತ್ರೋತ್ಸವ

Suddi Udaya

ತಣ್ಣೀರುಪಂತ ವಲಯದ ತೆಕ್ಕಾರು ಕಾರ್ಯಕ್ಷೇತ್ರದ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya
error: Content is protected !!