23.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬದ್ರಿಯಾ ಜುಮ್ಮಾ ಮಸ್ಜಿದ್ ಉಜಿರೆ ಟೌನ್ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

ಉಜಿರೆ: ಭಾರತದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬದ್ರಿಯಾ ಜುಮ್ಮಾ ಮಸ್ಜಿದ್, ಉಜಿರೆ ಟೌನ್ ಇದರ ವತಿಯಿಂದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು.

ಕಾರ್ಯಕ್ರಮವು ಜಮಾಅತ್ ಅಧ್ಯಕ್ಷ ಹಾಜಿ ಅಬ್ದುಲ್ ರಹಿಮಾನ್ ಅವರ ನೇತೃತ್ವದಲ್ಲಿ ಹಾಗೂ ಗೌರವಾಧ್ಯಕ್ಷ ಎಸ್.ಎಂ. ಕೋಯಾ ತಂಙಳ್ ಮತ್ತು ಯಂಗ್‌ಮೆನ್ಸ್ ಅಧ್ಯಕ್ಷ ಝೈನುದ್ದೀನ್ ತಂಙಳ್ ಅವರ ಮಾರ್ಗದರ್ಶನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಆಡಳಿತ ಸಮಿತಿಯ ಪದಾಧಿಕಾರಿಗಳು, ಜಮಾಅತ್ ಸದಸ್ಯರು, ಊರಿನ ಹಿರಿಯರು, ಯುವಕರು, ಆಹ್ವಾನವನ್ನು ಸ್ವೀಕರಿಸಿ ಆಗಮಿಸಿದ ಗಣ್ಯ ಅತಿಥಿಗಳು, ಮದರಸ ಅಧ್ಯಾಪಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಾಕ್ಷಿಯಾದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಮಸೀದಿಯ ಖತೀಬ್ ಇಸ್ಮಾಯಿಲ್ ಹನೀಫಿ ನಚ್ಚಬೆಟ್ಟು ಉಸ್ತಾದ್, ಸ್ವಾತಂತ್ರ್ಯದ ಮಹತ್ವ, ದೇಶದ ಏಕತೆ, ಶಾಂತಿ, ಸೌಹಾರ್ದತೆ ಹಾಗೂ ಸಹಬಾಳ್ವೆಯ ಅಗತ್ಯತೆಯ ಕುರಿತು ಸಂದೇಶ ನೀಡಿದರು. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಿ, ದೇಶದ ಪ್ರಗತಿ ಮತ್ತು ಸಮುದಾಯದ ಸೌಹಾರ್ದತೆಗಾಗಿ ಎಲ್ಲರೂ ಕೈಜೋಡಿಸಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದ ಕೊನೆಯಲ್ಲಿ ಆಗಮಿಸಿದ ಗಣ್ಯ ಅತಿಥಿಗಳು, ಜಮಾಅತ್ ಸದಸ್ಯರು, ಆಡಳಿತ ಸಮಿತಿಯ ಪದಾಧಿಕಾರಿಗಳು, ಮದರಸ ಅಧ್ಯಾಪಕರು, ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಧನ್ಯವಾದಗಳನ್ನು ಸಲ್ಲಿಸಲಾಯಿತು.

ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಿದ ಆಡಳಿತ ಸಮಿತಿಯ ಎಲ್ಲಾ ಪದಾಧಿಕಾರಿಗಳು, ಜಮಾಅತ್ ಸದಸ್ಯರು, ಹಿರಿಯರು, ಯುವಕರು ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಲಾಯಿತು.

Related posts

ವಿಟಿಯುಗೆ 9ನೇ ರ್‍ಯಾಂಕ್ ಗಳಿಸಿದ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಹಳೇ ವಿದ್ಯಾರ್ಥಿನಿಗೆ ಸನ್ಮಾನ

Suddi Udaya

ಕರ್ನಾಟಕ ಬ್ಯಾಂಕ್ ವತಿಯಿಂದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ ಬಸ್ಸು ಕೊಡುಗೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ಚಿಕ್ಕಣ್ಣ ಭೇಟಿ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಕ್ಷೀರಾಬ್ಧಿ” ಉದ್ಘಾಟನೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಇಂಟರ್‌ಆಕ್ಟ್ ಕ್ಲಬ್ ಉದ್ಘಾಟನೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾಕಿಂಗ್ ಸ್ಟಿಕ್ ವಿತರಣೆ

Suddi Udaya
error: Content is protected !!