23.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿ

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

ಬೆಳ್ತಂಗಡಿ: ತಾಲೂಕು ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಆ.15ರಂದು ಶಾಸಕ ಹರೀಶ್ ಪೂಂಜಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಧ್ವಜಾರೋಹಣವನ್ನು ತಾಲೂಕು ದಂಡಾಧಿಕಾರಿ ಎಸ್.ಎನ್ ನರಗುಂದ ನೆರವೇರಿಸಿದರು.

ವಾಣಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಮೀನಾಕ್ಷಿ ಎನ್ ರವರು ಸ್ವಾಂತಂತ್ರ್ಯ ದಿನಾಚರಣೆಯ ಪ್ರಧಾನ ಭಾಷಣ ಮಾಡಿದರು.

ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕ ರವಿ ಬಿ.ಎಸ್, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್.ಕೆ, ಕ್ಷೇತ್ರ ಶಿಕ್ಷಣಾಧಿಕಾರಿ ರಾಜಶ್ರೀ, ಮಾಜಿ ಸೈನಿಕ ಗೋಪಾಲಕೃಷ್ಣ ಕಾಂಚೋಡ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಲ್ಯಾಣಾಧಿಕಾರಿ ಜೋಸೆಫ್, ಅಬಕಾರಿ ಉಪ ನೀರಿಕ್ಷ ಲಕ್ಷ್ಮಣ ಉಪ್ಪಾರ, ಪಿರ್ ಡಿಇ ಎಇಇ ಜರ್ನಾದನ, ಗ್ರಾಮೀಣ ಕುಡಿಯುವ ನೀರು ಮತ್ತು ನೖರ್ಮಲ್ಯ ಇಲಾಖೆಯ ಎಇಇ ತಿರುಪತಿ, ಹಿರಿಯ ಸಹಾಯಕ ತೋಟಗಾರಿಕ ನಿರ್ದೇಶಕ ಚಂದ್ರಶೇಖರ್, ಅಗ್ನಿಶಾಮಕ ಠಾಣಾಧಿಕಾರಿ ವೆಂಕಟೇಶ್, ಪಶು ವೈದ್ಯಾಧಿಕಾರಿ ಡಾ. ರವಿ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಧನಂಜಯ್, ಗೃಹ ರಕ್ಷಕದಳದ ಜಯಾನಂದ್, ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಶಾಲಾ ಮಕ್ಕಳು, ಇಲಾಖಾಧಿಕಾರಿಗಳು, ಸಾರ್ವಜನಿಕರು ಭಾಗವಹಿಸಿದ್ದರು. ಮಹಾತ್ಮ ಗಾಂಧೀಜಿ ಹಾಗೂ ಡಾ. ಬಿ. ಆರ್. ಅಂಭೇಡ್ಕರ್ ಭಾವಚಿತ್ರಕ್ಕೆ ಪುಷ್ಪಾ ನಮನ ಸಲ್ಲಿಸಲಾಯಿತು.

ಬೆಳ್ತಂಗಡಿ ಪೊಲೀಸ್ ಠಾಣೆಯ ಎಸ್ ಐ ಸಿಕಂದರ್ ಪಾಶಾ ನೇತೃತ್ವದಲ್ಲಿ ಆರಕ್ಷಕ ಹಾಗೂ ಗೃಹ ರಕ್ಷಕ ದಳ, ಎನ್ ಸಿಸಿ, ಸೌಟ್ಸ್ ಆ್ಯಡ್ ಗೈಡ್ಸ್, ಬುಲ್ ಬುಲ್, ಬ್ಯಾಂಡ್ ಸೆಟ್ ಮೂಲಕ ಆಕರ್ಷಕ ಪಥ ಸಂಚಲನ ನಡೆಯಿತು. ಎಸ್ ಎಸ್ ಎಲ್ ಸಿಯಲ್ಲಿ ಗರಿಷ್ಠ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಬಳಿಕ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಭವಾನಿಶಂಕರ್ ಎನ್. ಸ್ವಾಗತಿಸಿ, ಶಿಕ್ಷಕ ಧರ್ಮೇಂದ್ರ ಜೈನ್ ಹಾಗೂ ವಾರಿಜ ನಿರೂಪಿಸಿದರು.

Related posts

ಮಲವಂತಿಗೆ: ಪ್ರಗತಿಪರ ಕೃಷಿಕ ರಮಾನಾಥ ಮರಾಠೆ ನಿಧನ

Suddi Udaya

ಕಸ್ತೂರಿ ರಂಗನ್ ವರದಿ ವಿರುದ್ಧ ಪ್ರತಿಭಟನೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಂಪೂರ್ಣ ಬೆಂಬಲ

Suddi Udaya

ಧರ್ಮದಕಳ ಚಂದ್ರಶೇಖರ್ ಗೌಡರ ಮನೆಗೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya

25 ಕೋಟಿ ವೆಚ್ಚದಲ್ಲಿ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರ: ಮುಂದಿನ ಮಾರ್ಚ್ ತಿಂಗಳಿನಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಸಂಕಲ್ಪ

Suddi Udaya

ಯೂತ್ ನ್ಯಾಷನಲ್ ವಾಲಿಬಾಲ್ ಚಾಂಪಿಯನ್‌ಶಿಪ್‌ : ಉಜಿರೆಯ ಎಸ್.ಡಿ.ಎಂ ವಿದ್ಯಾರ್ಥಿಗಳ ಸಾಧನೆ

Suddi Udaya

ಮುಂಡಾಜೆ : ಸಿಡಿಲು ಬಡಿದು ಮನೆಗೆ ಹಾನಿ, ಅಪಾರ ನಷ್ಟ

Suddi Udaya
error: Content is protected !!