23.9 C
ಪುತ್ತೂರು, ಬೆಳ್ತಂಗಡಿ
September 30, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ವಿಜೃಂಭಣೆಯ 80ನೇ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ: ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್, ಬೆಳ್ತಂಗಡಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಹಾಗೂ ದೇಶಭಕ್ತಿ-ಸಂಭ್ರಮದ ವಾತಾವರಣದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ನಿವೃತ್ತ ಯೋಧರಾದ ಸುಬೇದಾರ್ ಮೇಜರ್ ಶಿವಕುಮಾರ್ ಅವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ, ಬಲಿದಾನ ಹಾಗೂ ದೇಶಪ್ರೇಮವನ್ನು ಸ್ಮರಿಸಿ, ವಿದ್ಯಾರ್ಥಿಗಳು ದೇಶದ ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಬೇಕು ಎಂದು ಶುಭ ಸಂದೇಶ ನೀಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಜಮೀರ್ ಸಹದಿ ಅವರು ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹಾಗೂ ಸಮಸ್ತ ವಿದ್ಯಾಭಿಮಾನಿಗಳಿಗೆ 80ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರಿದರು.ಈ ಸಂದರ್ಭದಲ್ಲಿ ಕ್ಷೇತ್ರ ಸಂಪನ್ಮೂಲ ಕೇಂದ್ರ, ಬೆಳ್ತಂಗಡಿಯ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಶ್ರೀಯುತ ಮೋಹನ್ ಕುಮಾರ್, ಎಸ್.ಡಿ.ಎಂ.ಸಿ. ಪದಾಧಿಕಾರಿಗಳು, ಶಾಲೆಯ ಶಿಕ್ಷಕ ವೃಂದ, ವಿದ್ಯಾರ್ಥಿಗಳ ಹೆತ್ತವರು ಹಾಗೂ ಪೋಷಕರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಗಣ್ಯರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.

ಶಾಲಾ ಮುಖ್ಯ ಶಿಕ್ಷಕರಾದ ಪಿ ಶಿವಾನಂದ ಭಂಡಾರಿ ಅವರು ಸರ್ವರನ್ನು ಸ್ವಾಗತಿಸಿ, ಹಿರಿಯ ಶಿಕ್ಷಕರಾದ ದಿನಕರ ನಾಯಕ್ ರವರು ಕಾರ್ಯಕ್ರಮ ನಿರೂಪಿಸಿ, ಸಹಶಿಕ್ಷಕರಾದ ರಾಜೇಶ್ ರವರು ಧನ್ಯಾವಾದವಿತ್ತರು.ಧ್ವಜಾರೋಹಣದ ಬಳಿಕ ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆಗಳು, ನೃತ್ಯ, ಭಾಷಣ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ತಂದವು. ವಿದ್ಯಾರ್ಥಿಗಳ ವೈವಿಧ್ಯಮಯ ಸಾಂಸ್ಕೃತಿಕ ಪ್ರದರ್ಶನವು ನೆರೆದಿದ್ದವರ ಮೆಚ್ಚುಗೆಗೆ ಪಾತ್ರವಾಯಿತು.ಒಟ್ಟಾರೆಯಾಗಿ, ದೇಶಭಕ್ತಿ, ಶಿಸ್ತು, ಸೌಹಾರ್ದತೆ ಹಾಗೂ ರಾಷ್ಟ್ರಾಭಿಮಾನವನ್ನು ಸಾರುವ ಮೂಲಕ ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್, ಬೆಳ್ತಂಗಡಿಯ 80ನೇ ಸ್ವಾತಂತ್ರ್ಯ ದಿನಾಚರಣೆ ಅರ್ಥಪೂರ್ಣವಾಗಿ ನೆರವೇರಿತು.

Related posts

ಕರ್ನಾಟಕ ಪಬ್ಲಿಕ್ ಸ್ಕೂಲ್, ಪುಂಜಾಲಕಟ್ಟೆಯ ಪ್ರಥಮ ದರ್ಜೆ ಸಹಾಯಕ ಪ್ರವೀಣ್ ಕುಮಾರ್ ರವರಿಗೆ ಬೀಳ್ಕೊಡುಗೆ

Suddi Udaya

ನೆರಿಯ: ಪುಟ್ಟ ಮಗುವಿನ ಚಿಕಿತ್ಸೆಗೆ ನೆರವಾಗಿ

Suddi Udaya

ಉಜಿರೆ ಎಸ್.ಕೆ.ಡಿ.ಆರ್.ಡಿ.ಪಿ ಕಾರ್ಯಕ್ಷೇತ್ರದ ಒಕ್ಕೂಟದಿಂದ ಸುಜ್ಞಾನ ನಿಧಿ ವಿದ್ಯಾರ್ಥಿವೇತನದ ಅನುದಾನ ಪತ್ರ ಹಸ್ತಾಂತರ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ವಾರ್ಷಿಕೋತ್ಸವ ಪ್ರಯುಕ್ತ ಕ್ರೀಡಾ ಕಲರವ ಉದ್ಘಾಟನೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತೀ ವಂದನೀಯ ಜೇಮ್ಸ್ ಪಟ್ಟೇರಿಲ್ ಪಟ್ಟಾಭಿಷೇಕ

Suddi Udaya

ಲಾಯಿಲ: ಸಂವಿಧಾನ ಜಾಗೃತಿ ಜಾಥ

Suddi Udaya
error: Content is protected !!