28.1 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ವಾಣಿ ವಿದ್ಯಾ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ: ವಾಣಿ ವಿದ್ಯಾ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ವಾಣಿ ವಿದ್ಯಾಸಂಸ್ಥೆಯ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ ಧ್ವಜಾರೋಹಣವನ್ನು ನೆರವೇರಿಸಿ, ಮಾತನಾಡಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸಿ, ವಿದ್ಯಾರ್ಥಿಗಳು ದೇಶದ ಜವಾಬ್ದಾರಿಯುತ ನಾಗರಿಕರಾಗಿ ಬೆಳೆಯಬೇಕು ಎಂದು ಕರೆ ನೀಡಿದರು. ಶಿಸ್ತು, ಶಿಕ್ಷಣ, ಸೇವೆ ಮತ್ತು ದೇಶಪ್ರೇಮವನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಮುಖ್ಯ ಅತಿಥಿಗಳಾಗಿ ವಾಣಿ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಗಣೇಶ್ ಗೌಡ, ವಾಣಿ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ವಾಣಿ ಆಂಗ್ಲ ಮಾಧ್ಯಮ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಸುಹಾಸಿನಿ ಎ ಉಪಸ್ಥಿತರಿದ್ದರು.

ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಿಷ್ಣುಪ್ರಕಾಶ್ ಎಂ ಸ್ವಾಗತಿಸಿದರು. ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ. ವಂದಿಸಿದರು, ಶಿಕ್ಷಕಿ ಸಂಧ್ಯಾ ಕಾರ್ಯಕ್ರಮ ನಿರೂಪಿಸಿದರು.

Related posts

ಪಾರೆಂಕಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಹಾಗೂ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya

ಪಾರೆಂಕಿಯಲ್ಲಿ ಮನೆಯ ಪಕ್ಕದ ತಡೆಗೋಡೆ ಕುಸಿತ

Suddi Udaya

ಕಾರುಗಳ ನಡುವೆ ಅಪಘಾತ:

Suddi Udaya

ಬಡಗಕಾರಂದೂರು: ಸ.ಉ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ವಿಶೇಷ ಪೂಜೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ.ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಹಾಗೂ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಬೃಹತ್ ಪ್ರತಿಭಟನೆ

Suddi Udaya
error: Content is protected !!