23.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುದೇಮುಗೇರು ಅಂಗನವಾಡಿಯಲ್ಲಿ 80ನೇ ವರ್ಷದ ಸ್ವಾತ್ರಂತ್ರೋತ್ಸವ

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತು ವ್ಯಾಪ್ತಿಯ ಸುದೇಮುಗೇರು ಅಂಗನವಾಡಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ತುಕರಾಮ್ ಬಿ. ನೆರವೇರಿಸಿದರು.

ನಂತರ ನಡೆದ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಸ್ವಾತಂತ್ರ್ಯ ದಿನಾಚರಣೆಯ ಸಂದೇಶ ನೀಡಿದರು. ಮುಖ್ಯ ಅತಿಥಿಗಳಾಗಿ ಸುದ್ದಿ ಉದಯ ಪತ್ರಿಕೆಯ ಸಂಪಾದಕ ಬಿ.ಎಸ್ ಕುಲಾಲ್, ಸುದ್ದಿ ಬಿಡುಗಡೆ ಪತ್ರಿಕೆಯ ವರದಿಗಾರ ಪ್ರಸಾದ್ ಭಾಗವಹಿಸಿದ್ದರು. ಅಧ್ಯಕ್ಷತೆಯನ್ನು ಬೆಳ್ತಂಗಡಿ ಪ.ಪಂ. ಮಾಜಿ ಹಿರಿಯ ಸದಸ್ಯ ಹಾಗೂ ಕೆಡಿಪಿ ಸದಸ್ಯರಾದ ಜಗದೀಶ್ ಡಿ. ವಹಿಸಿದ್ದರು.

ವೇದಿಕೆಯಲ್ಲಿ ಅಂಗನವಾಡಿ ಅಧ್ಯಕ್ಷೆ ನಾಝ್‌ಮಿನ್, ಅಂಗನವಾಡಿ ಶಿಕ್ಷಕಿ ಶ್ರೀಮತಿ ದಿವ್ಯಾ ಶೇಖರ್, ಸಹಾಯಕಿ ಶ್ರೀಮತಿ ರೋಹಿಣಿ ಉಪಸ್ಥಿತರಿದ್ದರು

ಈ ಸಂದರ್ಭದಲ್ಲಿ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಹಮ್ಮಿಕೊಂಡ ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕ್ರೀಡಾ ಕೂಟದ ಸಂಯೋಜಕ ಮಹೇಶ್, ಸಹಾಯಕ ಹಕೀಂ, ಸಹಕಾರ ನೀಡಿದ ಮೋನಿಕಾ ಇವರನ್ನು ಗೌರವಿಸಲಾಯಿತು. ಮೋನಿಕಾ ಪ್ರಾರ್ಥನೆ ಹಾಡಿದರು. ಜಿ.ಪಂ ನೀರು ಸರಬರಾಜು ಇಲಾಖೆಯ ಸಿಬ್ಬಂದಿ ಅಶೋಕ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ನಾವೂರು: ದೈವ ಕ್ಷೇತ್ರ ಬಡೆಕ್ಕಾವು ಗುತ್ತು ಚಾರಿಟೇಬಲ್ ಟ್ರಸ್ಟ್ ನಿಂದ ನೋಟ್ ಪುಸ್ತಕ ವಿತರಣೆ, ಅಪ್ಪೆ ಕಲ್ಲುರ್ಟಿ ದೈವದ ದೊಂದಿ ಕೋಲ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಉದ್ಯಮಿ ಸತೀಶ್ ಪೂಜಾರಿ ಬೆಳಪು ಮತ್ತು ಪ್ರಭಾಕರ ಸುವರ್ಣ ಕರ್ನಿರೆ ಭೇಟಿ

Suddi Udaya

ಯಕ್ಷ ಭಾರತಿ ಕನ್ಯಾಡಿ ವತಿಯಿಂದ ಮುಖವರ್ಣಿಕೆಯ ಶಿಬಿರ

Suddi Udaya

ಕೌಕ್ರಾಡಿ-ಕೊಕ್ಕಡ ಸಂತ ಜೋನರ ಹಿ.ಪ್ರಾ. ಶಾಲಾಯಲ್ಲಿ ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya

ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ: ರಂಗ ಮಂಟಪ ಲೋಕಾರ್ಪಣೆ, ನವದುರ್ಗೆಯರ ಮೂರ್ತಿ ಪ್ರತಿಷ್ಠೆ, ದೇವರ ಪ್ರಭಾವಳಿ ಸಮರ್ಪಣೆ: ಇಂದು (ಫೆ.5) ನವ ಗುಳಿಗಗಳ ವಿಶೇಷ ಗಗ್ಗರ ಸೇವೆ

Suddi Udaya

ಕೆ.ಎಸ್.ಎಂ.ಸಿ.ಎ ಕೇಂದ್ರ ಸಮಿತಿಯ ವತಿಯಿಂದ ಉಜಿರೆ ಸಂತ ಜಾರ್ಜ್ ದೇವಾಲಯಕ್ಕೆ ಭೇಟಿ

Suddi Udaya
error: Content is protected !!