August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಅನುಗ್ರಹದಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಗಳಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು. ಶಾಲಾ ಸಂಚಾಲಕರಾದ ವಂ. ಫಾ. ಅಬೆಲ್ ಲೋಬೋ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ವಾಮದಪದವು ಇಲ್ಲಿನ ವಾಣಿಜ್ಯ ವಿಭಾಗದ ಪ್ರಾಧ್ಯಾಪಕರಾದ ಡಾ. ವಿಶಾಲ್ ಪಿಂಟೋ ಅವರು ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವದ ಶುಭ ಸಂದೇಶವನ್ನು ನೀಡಿದರು.

ತಮ್ಮ ಸಂದೇಶದಲ್ಲಿ ಅವರು ವಿದ್ಯಾರ್ಥಿಗಳು ಶಾಲಾ ಜೀವನದಿಂದಲೇ ದೇಶಪ್ರೇಮ, ದೇಶಾಭಿಮಾನ ಹಾಗೂ ರಾಷ್ಟ್ರದ ಬಗ್ಗೆ ಗೌರವದ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸಿ, ದೇಶದ ಪ್ರಗತಿಗೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಅವರು ತಿಳಿಸಿದರು.

ಸಮಾರಂಭದಲ್ಲಿ ಶಾಲಾ ಪ್ರಾಂಶುಪಾಲರಾದ ವಂ. ಫಾ. ವಿಜಯ್ ಲೋಬೋ, ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಪ್ರವೀಣ್ ವಿಜಯ್ ಡಿಸೋಜ, ಕಾರ್ಯದರ್ಶಿಗಳಾದ ಮರ್ಲಿನ್ ಮೆನೆಜಸ್, ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷ ಶಶಿಕಿರಣ್ ಜೈನ್, ಆಡಳಿತ ಮಂಡಳಿಯ ಸದಸ್ಯರಾದ ಸ್ಟೀವನ್ ಮೊಂತೇರೊ, ಜೈಸನ್ ಮೋರಸ್ ಹಾಗೂ ಬಬಿತಾ ಮೋರಸ್ ಸೇರಿದಂತೆ ಎಲ್ಲಾ ವಿದ್ಯಾರ್ಥಿ ನಾಯಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ದೇಶಭಕ್ತಿ ಹಾಗೂ ರಾಷ್ಟ್ರಪ್ರೇಮವನ್ನು ಬಿಂಬಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಸಹಶಿಕ್ಷಕ ಗಣೇಶ್ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

Related posts

ಮತದಾರರ ಜಾಗೃತಿ ಆಂದೋಲನ: ಕಾಲ್ನಡಿಗೆ ಜಾಥಾ ಚುನಾವಣೆ – ನಮ್ಮ ಹೊಣೆ ಬೀದಿ ನಾಟಕ ಪ್ರದರ್ಶನ

Suddi Udaya

ಶಿರ್ಲಾಲು ಗ್ರಾ.ಪಂ ನೂತನ ಅಧ್ಯಕ್ಷರಾಗಿ ಉಷಾ ಎಂ ಶೆಟ್ಟಿ, ಉಪಾಧ್ಯಕ್ಷರಾಗಿ ಸೋಮನಾಥ ಬಂಗೇರ ಅವಿರೋಧವಾಗಿ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ; ಮಚ್ಚಿನ ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಲಯನ್ಸ್ ಕ್ಲಬ್ ವತಿಯಿಂದ ಸವಣಾಲು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಹೊಸಂಗಡಿ: ಕಾರು ಡಿಕ್ಕಿ-ಬಾಲಕ ಸ್ಥಳದಲ್ಲೇ ಮೃತ್ಯು

Suddi Udaya

ಗೇರುಕಟ್ಟೆ: ಕೊರಂಜ ಸರಕಾರಿ ಶಾಲಾ ಪೋಷಕರ ಮತ್ತು ಹಿರಿಯ ವಿದ್ಯಾರ್ಥಿಗಳ ಸಭೆ: ಸಮಿತಿ ರಚನೆ

Suddi Udaya
error: Content is protected !!