31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಉಜಿರೆ : ದೇಶದ ಸ್ವಾತಂತ್ರ್ಯದ ಜೊತೆಗೆ ಯುವಜನರು ಆರ್ಥಿಕ ಸ್ವಾತಂತ್ರ್ಯವನ್ನೂ ಸಾಧಿಸಿ ಸ್ವಾವಲಂಬಿಗಳಾಗಿ ಮುನ್ನಡೆಯಬೇಕು ಎಂದು ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ. ವಿಜಯ ಕುಮಾರ್ ಹೇಳಿದರು.

ಅವರು ರುಡ್‌ಸೆಟ್ ಸಂಸ್ಥೆ, ಸಿದ್ಧವನ, ಉಜಿರೆಯಲ್ಲಿ ನಡೆದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ಮಹತ್ವದ್ದಾಗಿದ್ದು, ಶಿಕ್ಷಣ, ಕೌಶಲ್ಯ ಹಾಗೂ ಉದ್ಯಮಶೀಲತೆಯನ್ನು ಬೆಳೆಸಿಕೊಂಡು ಸ್ವಉದ್ಯೋಗದ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಎಂದು ಕರೆ ನೀಡಿದರು.

ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಸುನಿಲ್ ಜಿ. ನಾಯ್ಕೆ ಅತಿಥಿಗಳು ಹಾಗೂ ಶಿಬಿರಾರ್ಥಿಗಳನ್ನು ಸ್ವಾಗತಿಸಿ, ಸ್ವಾತಂತ್ರ್ಯೋತ್ಸವದ ಮಹತ್ವವನ್ನು ತಿಳಿಸಿದರು.

ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್ ನಿರೂಪಿಸಿದರು. ಕೆ. ಕರುಣಾಕರ ಜೈನ್ ಧನ್ಯವಾದ ಸಮರ್ಪಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಉಪನ್ಯಾಸಕರಾದ ಅನಸೂಯಾ, ಪ್ರಸಾದ್, ಪ್ರವೀಣ್, ಕಾಶ್ಮೀರ ಡಿ. ಸೋಜಾ ಹಾಗೂ ಸುರೇಶ್ ಗೌಡ ಉಪಸ್ಥಿತರಿದ್ದರು.

ರುಡ್‌ಸೆಟ್ ಸಂಸ್ಥೆಯಲ್ಲಿ ನಡೆಯುತ್ತಿದ್ದ ಕಂಪ್ಯೂಟರ್ ಟ್ಯಾಲಿ, ಮಹಿಳೆಯರ ವಸ್ತ್ರ ಚಿತ್ರಕಲೆ, ಫೋಟೋಗ್ರಫಿ ಮತ್ತು ವೀಡಿಯೋಗ್ರಫಿ ಹಾಗೂ ಮೊಬೈಲ್ ರಿಪೇರಿ ತರಬೇತಿ ಕಾರ್ಯಕ್ರಮಗಳ ಅತಿಥಿ ಉಪನ್ಯಾಸಕರಾದ ಸಚಿನ್, ರಶ್ಮಿ ಹಾಗೂ ಸೂರ್ಯಪ್ರಕಾಶ್ ಉಪಸ್ಥಿತರಿದ್ದರು.
ವಿವಿಧ ತರಬೇತಿ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವ ಎಲ್ಲಾ ಶಿಬಿರಾರ್ಥಿಗಳು ಸ್ವಾತಂತ್ರ್ಯೋತ್ಸವದಲ್ಲಿ ಉತ್ಸಾಹದಿಂದ ಭಾಗವಹಿಸಿದರು.
“ದೇಶದ ಸ್ವಾತಂತ್ರ್ಯ ನಮ್ಮ ಹೆಮ್ಮೆ; ಆರ್ಥಿಕ ಸ್ವಾವಲಂಬನೆ ನಮ್ಮ ಗುರಿ” ಎಂಬ ಸಂದೇಶದೊಂದಿಗೆ ಕಾರ್ಯಕ್ರಮವು ಅರ್ಥಪೂರ್ಣವಾಗಿ ನಡೆಯಿತು.

Related posts

ವೇಣೂರು ಮಹಾ ಮಸ್ತಕಾಭಿಷೇಕಕ್ಕೆ ಶಾಸಕ ಹರೀಶ್ ಪೂಂಜರವರಿಗೆ ಆಮಂತ್ರಣ ನೀಡಿ‌ ಕಾರ್ಯಕ್ರಮಕ್ಕೆ ಆಹ್ವಾನಿಸಿದ ಮಹಾ ಮಸ್ತಕಾಭಿಷೇಕ ಸಮಿತಿ ಪದಾಧಿಕಾರಿಗಳು

Suddi Udaya

ಟೀಚರ್ಸ್ ಬ್ಯಾಂಕ್ ಉಡುಪಿಗೆ ರಾಷ್ಟ್ರೀಯ ಪ್ರಶಸ್ತಿ

Suddi Udaya

ಭಾರತೀಯ ಭೂ ಸೇನೆಯಲ್ಲಿ 20 ವರ್ಷ ಸೇವೆ ಸಲ್ಲಿಸಿ ನಿವೃತ್ತಿಗೊಂಡು ಊರಿಗೆ ಆಗಮಿಸಿದ ಯೋಧ ವಿಕ್ರಮ್ ಜೆ.ಎನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಕ್ರೀಡಾ ದಿನದ ಮಹತ್ವದ ಕುರಿತು ಕಾರ್ಯಕ್ರಮ

Suddi Udaya

ಸಕಲೇಶಪುರದ ಯುವಕ ನಾಪತ್ತೆ ನೇತ್ರಾವತಿ ನದಿಯಲ್ಲಿ ಯುವಕನ ಮೃತದೇಹ ಪತ್ತೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್‌.ಡಿ.ಎಂ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya
error: Content is protected !!