23.7 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಪ್ಪಿನಂಗಡಿ ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಕೂಡು ರಸ್ತೆಯ ಕಾಮಗಾರಿಯ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ರಾಜ್ಯ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ಗಳ ಜಂಟಿ ವೀಕ್ಷಣೆ

ಉಪ್ಪಿನಂಗಡಿ: ಇಲ್ಲಿನ ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಕೂಡು ರಸ್ತೆಯ ಕಾಮಗಾರಿಯ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ – NHAI ಮತ್ತು ರಾಜ್ಯ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ಗಳು ಜಂಟಿ ವೀಕ್ಷಣೆ ನಡೆಸಿದರು.

ರಾಷ್ಟ್ರೀಯ ಹೆದ್ದಾರಿಯಿಂದ ಬಸ್ ನಿಲ್ದಾಣಕ್ಕೆ ಒಳಬರುವ ಕೂಡು ರಸ್ತೆಯ NHAI ವ್ಯಾಪ್ತಿ ಮುಗಿದ ಬಳಿಕ, ಉಳಿದ ಭಾಗದ ಕಾಮಗಾರಿಯನ್ನು ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆಯು ಮುಂದುವರಿಸುವ ಕುರಿತು ಚರ್ಚಿಸಲಾಯಿತು.

ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕಾಮಗಾರಿ ನಿರ್ವಹಿಸುವುದು ಮತ್ತು ಮುಂದಿನ ದಿನಗಳಲ್ಲಿ ರಸ್ತೆಯನ್ನು ಚತುಷ್ಪಥಗೊಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಬಗ್ಗೆಯೂ ಚರ್ಚೆ ನಡೆಯಿತು.

ಮಾನ್ಯ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ನಿರ್ದೇಶನದ ಮೇರೆಗೆ ಸ್ಟ್ರಕ್ಚರಲ್ ಇಂಜಿನಿಯರ್ ಪ್ರಸನ್ನ ದರ್ಬೆ ಅವರು ಎರಡೂ ಇಲಾಖೆಗಳ ಅಧಿಕಾರಿಗಳನ್ನು ಒಟ್ಟುಗೂಡಿಸಿ ಮುಂದಿನ ಯೋಜನೆಗಳ ಬಗ್ಗೆ ವಿವರವಾಗಿ ಚರ್ಚಿಸಿದರು.

ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಾಜೇಶ್ ರೈ, NHAI ಅಧಿಕಾರಿಗಳು, ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ವಿಲ್ಫ್ರೆಡ್, ಉಪ್ಪಿನಂಗಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸುರೇಶ್ ಅತ್ರಮಜಲ್, ಪುತ್ತೂರು ಗ್ರಾಮಾಂತರ ಮಂಡಲ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆದೇಶ್ ಶೆಟ್ಟಿ, ಮಾಜಿ ಗ್ರಾ.ಪಂ. ಸದಸ್ಯ ಧನಂಜಯ ನೆಟ್ಟಿಬೈಲ್, ಯು.ಟಿ. ತೌಸೀಫ್, ಗ್ರಾಮಸ್ಥರಾದ ರಾಘವೇಂದ್ರ ನೆಟ್ಟಿಬೈಲ್, ಸಿದ್ದಿಕ್ ಮತ್ತಿತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಎಸ್.ಐ.ಟಿ. ಪೊಲೀಸ್ ಠಾಣೆಗೆ ದೂರುದಾರ ಜಯಂತ್ ಟಿ. ಭೇಟಿ

Suddi Udaya

ಕಾಜೂರಿನಲ್ಲಿ ಉರೂಸ್ ಸಂಭ್ರಮ: ವಿಶೇಷ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ಮೆರಗು

Suddi Udaya

ಜ.6-10: ಎಸ್‌ಡಿಎಂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಹಳೆಗನ್ನಡ ಪಠ್ಯಗಳ ಓದು ಮತ್ತು ಅರ್ಥೈಸುವಿಕೆ ಕಾರ್ಯಾಗಾರ

Suddi Udaya

ಪುದುವೆಟ್ಟು ನಿಡ್ವಾಳ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿಯ ಸಂಪರ್ಕ ರಸ್ತೆಗೆ ಅನುದಾನ ನೀಡಿ ಅಭಿವೃದ್ದಿ ಪಡಿಸುವಂತೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರೀಸ್ ಬೆಳ್ತಂಗಡಿ ನೂತನ ಅಧ್ಯಕ್ಷರಾಗಿ ಶಶಿಧರ ಪೈ, ಕಾರ್ಯದರ್ಶಿ ಚಿದಾನಂದ ಇಡ್ಯಾ, ಕೋಶಾಧಿಕಾರಿ‌ ವಿಲ್ಸನ್ ಗೊನ್ಸಾಲ್ವಿಸ್ ಆಯ್ಕೆ

Suddi Udaya

ಸಂಘ ಪರಿವಾರದ ಹಿರಿಯ ಕಾರ್ಯಕರ್ತ ಕನ್ಯಾಡಿ ಬಿ ಸುಬ್ರಹ್ಮಣ್ಯ ರಾವ್ ನಿಧನ

Suddi Udaya
error: Content is protected !!