31.2 C
ಪುತ್ತೂರು, ಬೆಳ್ತಂಗಡಿ
September 30, 2026
ಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಕಕ್ಯಪದವು ಎಲ್.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರರ ಎಜುಕೇಷನಲ್ ಟ್ರಸ್ಟ್ ( ರಿ.)ನಿಂದ ನಡೆಸಲ್ಪಡುವ ಎಲ್.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆಗಳು ಕಕ್ಯಪದವು ಇಲ್ಲಿನ ಪೂರ್ವ ಪ್ರಾಥಮಿಕ, ಪ್ರಾಥಮಿಕ,ಪೌಢ ಹಾಗೂ ಪದವಿಪೂರ್ವ, ಪದವಿ ವಿಭಾಗ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಹಯೋಗದಲ್ಲಿ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಚಾಲಕರಾದ ಬಬಿತಾ ರೋಹಿನಾಥ್ ಧ್ವಜಾರೋಹಣ ನೆರವೇರಿಸಿದರು. ಕಾರ್ಯದರ್ಶಿ ಶಿವಾನಿ ಆರ್. ನಾಥ್, ಟ್ರಸ್ಟಿಗಳಾದ ಯಜ್ಞೇಶ್ ರಾಜ್ , ಪ್ರಾಂಶುಪಾಲ ಜೋಸ್ಟನ್ ಲೋಬೋ ಹಾಗೂ ಸಂಯೋಜಕ ಯಶವಂತ್ ಜಿ. ನಾಯಕ್ ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯಿನಿ ವಿಜಯಾ.ಕೆ ಮಾತನಾಡಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಮತ್ತು ದೇಶದ ಸ್ವಾತಂತ್ರ್ಯದ ಮಹತ್ವವನ್ನು ಸ್ಮರಿಸಲಾಯಿತು.

ಧ್ವಜಾರೋಹಣದ ಬಳಿಕ ರಾಷ್ಟ್ರಗೀತೆ ಮೊಳಗಿಸಲಾಯಿತು. ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳು ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ಸಾರಿದರು.ವಿದ್ಯಾರ್ಥಿಗಳು ದೇಶದ ಏಕತೆ, ಶಾಂತಿ ಮತ್ತು ಪ್ರಗತಿಗಾಗಿ ತಮ್ಮ ಕರ್ತವ್ಯಗಳನ್ನು ನಿಷ್ಠೆಯಿಂದ ನಿರ್ವಹಿಸುವ ಸಂಕಲ್ಪ ಮಾಡಿದರು.

ಜಯಶ್ರೀ ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಸ್ವಾಗತಿಸಿ, ಸಹಶಿಕ್ಷಕಿಯರಾದ ಕುಶಲಾ ಟಿ. ಮತ್ತು ಸಂಗೀತಾ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಗಣೇಶೋತ್ಸವ ಜಲಸ್ಥಂಭನ ಶೋಭಾಯಾತ್ರೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಸಂಸದ ಕ್ಯಾ. ಬ್ರಿಜೇಶ್ ಚೌಟ, ಎಂ ಎಲ್ ಸಿ ಕಿಶೋರ್ ಕುಮಾರ್ ಬೊಟ್ಯಾಡಿ ಭಾಗಿ

Suddi Udaya

ಬಿಲ್ಲವ ಫ್ಯಾಮಿಲಿ‌ ದುಬೈ ವತಿಯಿಂದ ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಪೀತಾಂಬರ ಹೇರಾಜೆಯವರಿಗೆ ಗೌರವ ಸನ್ಮಾನ

Suddi Udaya

ಬಳಂಜ: ನಿಧನರಾದ ಮಾಜಿ ಶಾಸಕ ಕೆ.ವಸಂತ ಬಂಗೇರರವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ನುಡಿ ನಮನ ಅರ್ಪಣೆ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಯುವ ರೆಡ್ ಕ್ರಾಸ್ ಘಟಕ ಹಾಗೂಎನ್.ಎಸ್.ಎಸ್ ಸಹಯೋಗದಲ್ಲಿ ಸಂಚಾರಿ ನಿಯಮಗಳ ಮಾಹಿತಿ

Suddi Udaya

ಉಪ್ಪಿನಂಗಡಿ: 70 ಅಡಿ ಆಳದ ಹೊಂಡಕ್ಕೆ ಬಿದ್ದ ಕಾರು; ಪಟ್ಟೂರು ಶಿಕ್ಷಣ ಸಂಸ್ಥೆಯ ಸಂಚಾಲಕ ಸೇರಿ ಇಬ್ಬರು ಪಾರು

Suddi Udaya

ಮಹಾಕುಂಭ ಮೇಳದಲ್ಲಿ ಗರ್ಡಾಡಿ, ನಿಟ್ಟಡೆ ಪಡಂಗಡಿ ಶಕ್ತಿ ಕೇಂದ್ರದ ಪ್ರಮುಖ್ ರಿಂದ ಪುಣ್ಯಸ್ನಾನ

Suddi Udaya
error: Content is protected !!